ಅಮೃತಧಾರೆ ಸೀರಿಯಲ್‌ ನಟಿಗೆ ಪೆಪ್ಪರ್‌ ಸ್ಪೇ ಹೊಡೆದು ಚಾಕು ಇರಿದ ಪತಿ!

Published : Jul 11, 2025, 11:03 AM ISTUpdated : Jul 11, 2025, 11:21 AM IST
amruthadhare actress Shruti

ಸಾರಾಂಶ

ಬೆಂಗಳೂರಿನಲ್ಲಿ ಕಿರುತೆರೆ ನಟಿ ಮಂಜುಳಾ ಅಲಿಯಾಸ್ ಶ್ರುತಿಮೇಲೆ ಪತಿ ಅಂಬರೀಶ್ ಚಾಕುವಿನಿಂದ ಇರಿದಿದ್ದಾರೆ. ಶೀಲ ಶಂಕಿಸಿ ಹಲ್ಲೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರುತಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು (ಜು.11): ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಬೆಳಗ್ಗೆ ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಚಾಕು ಇರಿತ ಪ್ರಕರಣ ವರದಿಯಾಗಿದೆ. ಶೀಲ ಶಂಕಿಸಿ ಪತಿಯಿಂದಲೇ ನಟಿ ಚಾಕು ಇರಿತಕ್ಕೆ ಒಳಗಾಗಿದ್ದಾಳೆ. ಮಂಜುಳಾ ಅಲಿಯಾಸ್‌ ಶ್ರುತಿ ಚಾಕು ಇರಿತಕ್ಕೆ ಒಳಗಾದ ಕಿರುತೆರೆ ನಟಿ ಎಂದು ಗುರುತಿಸಲಾಗಿದೆ. ಕನ್ನಡದಲ್ಲಿ ಅಮೃತಧಾರೆ, ಸೇರಿದಂತೆ ಹಲವು ಸೀರಿಯಲ್ ಗಳಲ್ಲಿ ಶ್ರುತಿ ನಟಿಸಿದ್ದಾರೆ.

ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್ ನಲ್ಲಿ ಘಟನೆ ನಡೆದಿದೆ. ಕಳೆದ ಜುಲೈ 4 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಂಜುಳಾ 20 ವರ್ಷದ ಹಿಂದೆ ಅಮರೇಶ್‌ ಎಚ್‌ಎಸ್‌ಎಂಬಾತನ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾಗಿ ಇಬ್ಬರು ಮಕ್ಕಳು ಕೂಡ ಇದ್ದರು. ಸಂಸಾರ ಸಮೇತ ಹನುಮಂತ ನಗರದಲ್ಲಿ ಲೀಸ್ ಗೆ ಮನೆ ಪಡೆದು ದಂಪತಿ ವಾಸವಿದ್ದರು. ನಂತರ ಶ್ರುತಿ ನಡವಳಿಕೆ ಗಂಡ ಅಮರೇಶ್‌ಗೆ ಇಷ್ಟವಾಗುತ್ತಿರಲಿಲ್ಲ. ಇಬ್ಬರ ನಡುವೆ ಹೊಂದಾಣಿಕೆ ಕೂಡ ಸರಿಯಿರಲಿಲ್ಲ ಎನ್ನಲಾಗಿದೆ.

ಹೀಗಾಗಿ ಗಂಡನಿಂದ ದೂರಾಗಿ ಶ್ರುತಿ ಅಣ್ಣನ ಮನೆಯಲ್ಲಿ ವಾಸವಿದ್ದರು. ಕಳೆದ ಏಪ್ರಿಲ್‌ನಲ್ಲಿ ಶ್ರುತಿ ಗಂಡನಿಂದ ದೂರವಾಗಿದ್ದರು. ಇಬ್ಬರ ನಡುವೆ ಲೀಸ್ ಹಣಕ್ಕಾಗಿ ಸಹ ಜಗಳ ನಡೆದಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಶ್ರುತಿ ದೂರು ನೀಡಿದ್ದಳು.

ಇದಾದ ಬಳಿಕ ಕಳೆದ ಗುರುವಾರ ರಾಜಿ ಸಂದಾನ ಮಾಡಿ ಗಂಡ-ಹೆಂಡತಿ ಒಂದಾಗಿದ್ದರು. ಆದರೆ, ಇಬ್ಬರೂ ಒಂದಾದ ಮಾರನೇ ದಿನವೇ ಗಂಡ ಪತ್ನಿಗೆ ಚಾಕು ಇರಿದಿದ್ದಾನೆ.

ಕಳೆದ ಶುಕ್ರವಾರ ಮಕ್ಕಳಿಬ್ಬರು ಕಾಲೇಜಿಗೆ ಹೋದ ನಂತರ ಹೆಂಡತಿಯ ಮೇಲೆ ಹಲ್ಲೆ ನಡೆದಿದೆ. ಪೆಪ್ಪರ್ ಸ್ಪ್ರೇ ಹೊಡೆದು ಹೆಂಡತಿಗೆ ಚಾಕು ಇರಿದು ಕೊಲೆಗೆ ಯತ್ನ ನಡೆಸಿದ್ದಾನೆ. ಪಕ್ಕೆಲುಬು, ತೊಡೆ ಹಾಗೂ ಕುತ್ತಿಗೆಗೆ ಚಾಕುವಿನಿಂದ ಇರಿದು ಪತಿ ಅಮರೇಶ್‌ ಕೊಲೆಗೆ ಯತ್ನ ನಡೆಸಿದ್ದಾರೆ.

ಸಿನಿಮಾ ಸ್ಟೈಲ್ ನಲ್ಲಿ ತಲೆ ಕೂದಲು ಹಿಡಿದು ಗೋಡೆ ತಲೆ ಗುದ್ದಿಸಿ ಹಲ್ಲೆ ಮಾಡಿದ್ದಾನೆ. ಘಟನೆ ಸಂಬಂಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೇಸ್‌ ದಾಖಲಿಸಿ ಆರೋಪಿ ಅಮರೇಶ್‌ನನ್ನು ಬಂಧಿಸಿದ್ದಾರೆ. ಸಂಸಾರ ಮತ್ತು ಹಣಕಾಸು ವಿಚಾರಕ್ಕೆ ಕೊಲೆ ಯತ್ನ ಮಾಡಿರೋದಾಗಿ ಶ್ರುತಿ ದೂರು ನೀಡಿದ್ದಾರೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರುತಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೂರಿನಲ್ಲಿ ಇರೋದೇನು

20 ವರ್ಷಗಳ ಹಿಂದೆ ಅಮರೇಶ್‌ ಎಚ್‌ಎಸ್‌ ಎನ್ನುವ ವ್ಯಕ್ತಿಯನ್ನು ವಿವಾಹವಾಗಿದ್ದು, ನಮಗೆ ನಿಧಿ ಹಾಗೂ ಹನಿ ಎನ್ನುವ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮದುವೆಯಾದ ಐದು ವರ್ಷದ ಬಳಿಕ ಆರೋಪಿ ಅಮರೇಶ್‌ ಸಂಸಾರದ ವಿಚಾರವಾಗಿ ಹಾಗೂ ಹಣಕಾಸಿನ ವಿಚಾರವಾಗಿ ನಮ್ಮನ್ನು ಬೈಯ್ಯುವುದು, ಹೊಡೆಯುವುದು ಮಾಡಿ ಹಿಂಸೆ ನೀಡುತ್ತಿದ್ದರು. ಈ ಬಗ್ಗೆ 2025ರ ಏಪ್ರಿಲ್‌ 4 ರಂದು ನಾನು ಪೊಲೀಸ್‌ ಠಾಣೆಗೆ ದೂರು ಕೂಡ ನೀಡಿದ್ದೆ. ಆ ಬಳಿಕ ಗಂಡನಿಂದ ದೂರವಾಗಿ ನನ್ನ ಅಣ್ಣ ರವಿ ಅವರ ಮನೆಯಲ್ಲಿ ವಾಸವಿದ್ದೆ.

ಈ ವೇಳೆ ಅಮರೇಶ್‌ ಪದೇ ಪದೇ ಫೋನ್‌ ಮಾಡಿ ಲೀಸ್ ಹಣ ಹಾಗೂ ಒಡವೆಗಳನ್ನು ನೀಡುವಂತೆ ಪೀಡಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಮುನೇಶ್ವರ ಬ್ಲಾಕ್‌ ಎದುರು ಕೊಲೆ ಮಾಡುತ್ತೇನೆ ಎಂದೂ ಅಮರೇಶ್‌ ಬೆದರಿಸಿದ್ದ. ಮೂರು ದಿನಗಳ ಹಿಂದೆ ನನ್ನ ಅಣ್ಣನಿಗೆ ಕರೆ ಮಾಡಿ ರಾಜಿ ಸಂಧಾನ ಮಾಡಿಕೊಂಡಿದ್ದ. ಇದರಿಂದಾಗಿ ನಾನು ಮನೆಗೆ ಬಂದಿದ್ದೆ. ಹೀಗಿರುವಾಗ ಜುಲೈ 4 ರಂದು ಬೆಳಗ್ಗೆ 7 ಗಂಟೆಗೆ ಮಕ್ಕಳು ಕಾಲೇಜಿಗೆ ಹೋಗಿದ್ದ ಸಂದರ್ಭದಲ್ಲಿ ಆರೋಪಿ ಕೂಡ ಮನೆಯಿಂದ ಹೊರಟಿದ್ದ. ಮಧ್ಯಾಹ್ನ ಸುಮಾರು 12 ಗಂಟೆಗೆ ಮನೆಗೆ ವಾಪಾಸ್ ಆಗಿದ್ದ. ಮಮನೆಯ ಡೋರ್‌ ತೆಗೆದ ಕೂಡಲೇ ಪೆಪ್ಪರ್‌ ಸ್ಪ್ರೇಯನ್ನು ಮುಖಕ್ಕೆ ಹೊಡೆದಿದ್ದ. ಉರಿಯಿಂದಾಗಿ ಕಣ್ಣು ತೆಗೆಯಲು ಹಾಗೂ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ. ಈ ಹಂತದಲ್ಲಿ ಚಾಕುವಿನಿಂದ ಚುಚ್ಚಲು ಪ್ರಯತ್ನ ಮಾಡಿದ್ದ. ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಬಿಡದೆ ಪಕ್ಕೆಲುಬು, ಎಡಭಾಗದ ತೊಡೆಗೆ, ಕುತ್ತಿಗೆಗೆ ಚಾಕುವಿನಿಂದ ಚುಚ್ಚಿದ್ದಾನೆ. ಹಿಟ್ಟಿನ ಕೋಲಿನಿಂದ ಹೊಡೆದು, ಜುಟ್ಟು ಹಿಡಿದು ಎಳೆದಾಡಿ, ತಲೆಯನ್ನು ಗೋಡೆಗೆ ಬಡಿದಿದ್ದಾನೆ. ನಾನು ಕೂಡಗಾಡುವ ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಬಂದು ಆತನನ್ನು ತಡೆದಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

2 ಸತ್ಯ ಬಯಲು ಮಾಡಿದ 'ಲಕ್ಷ್ಮೀ ನಿವಾಸ' ನಿರ್ದೇಶಕರು, ವೀಕ್ಷಕರು ಫುಲ್ ಹ್ಯಾಪಿ
BBK 12: ಟಾಸ್ಕ್ ಆಡದೇ ಈ ವಾರದ ‘ಕ್ಯಾಪ್ಟನ್’ ಆದ ಸ್ಪಂದನಾ.. ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್!