
ಕನ್ನಡ ಕಿರುತೆರೆ ಜನಪ್ರಿಯ ನಿರೂಪಕಿ ಕಮ್ ಸ್ಯಾಂಡಲ್‌ವುಡ್ ನಟಿ (Sandalwood star) ಅನುಶ್ರೀ ಅವರು ಸೋಷಿಯಲ್ ಮೀಡಿಯಾದಲ್ಲಿ ಸಕತ್ ಆ್ಯಕ್ಟೀವ್. ಇದೀಗ ಅವರು ರಾಯಲ್ ಎನ್ಫೀಲ್ಡ್ ಬುಲೆಟ್ ಬೈಕ್ ಸಮೀಪ ರೀಲ್ಸ್ ಮಾಡಿದ್ದು, ಅನುಶ್ರೀ ಅವರು ಹೊಸ ಬೈಕ್ ಖರೀದಿ ಮಾಡಿದ್ದಾರೆ ಎಂದೇ ಹೇಳಲಾಗುತ್ತಿದೆ. ಬೈಕ್ ಅನ್ನು ಓಡಿಸದಿದ್ದರೂ ಅದರ ಬಳಿ ರೀಲ್ಸ್ ಮಾಡಿರುವ ಅನುಶ್ರೀ ಅವರು, ಹೆಣ್ಮಕ್ಳೇ ಸ್ಟ್ರಾಂಗು ಗುರು, ರಾಂಗು ಗುರು ಹಿನ್ನೆಲೆಯಲ್ಲಿ ಕ್ಯಾಟ್ವಾಕ್ ಮಾಡಿದ್ದಾರೆ! ಬುಲೆಟ್ನಲ್ಲಿ ಬಂದು ಕ್ಯಾಟ್ವಾಕ್ ಮಾಡ್ತಿರೋದು ಯಾಕೋ ಮ್ಯಾಚ್ ಆಗ್ತಿಲ್ಲ, ಡಾಗ್ ವಾಕ್ ಮಾಡಿ ಎಂದು ನೆಟ್ಟಿಗರು ನಟಿಯ ಕಾಲೆಳೆಯುತ್ತಿದ್ದಾರೆ. ಇನ್ನು ಕೆಲವರು ಇದಂತೂ ನಿಮ್ಮ ಬುಲೆಟ್ ಅಲ್ಲ, ಬುಲೆಟ್ ಯಜಮಾನನ್ನು ಎಲ್ಲಿ ಅಡಗಿಸಿಟ್ಟಿದ್ದೀರಿ ಎಂದು ಪ್ರಶ್ನಿಸುತ್ತಿದ್ದಾರೆ.
ಅಷ್ಟಕ್ಕೂ ಆ್ಯಂಕರ್ ಅನುಶ್ರೀ ಎಂದರೆ ಅಲ್ಲಿ ನಗುವಿರಲೇ ಬೇಕು. ತಮ್ಮ ಹಾಸ್ಯದ ಧಾಟಿಯಿಂದ ಆ್ಯಂಕರಿಂಗ್ ಮಾಡುವಲ್ಲಿ ಅನುಶ್ರೀ ಸಕತ್ ಫೇಮಸ್. ಅದ್ಭುತವಾಗಿ ಕಾರ್ಯಕ್ರಮ ನಿರೂಪಣೆಯ ಜೊತೆಗೆ ಸಂಗೀತ, ನೃತ್ಯದಿಂದಲೂ ಮನರಂಜಿಸುವ ಅನುಶ್ರೀ ಸದ್ಯ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಷೋನಲ್ಲಿ ಬಿಜಿಯಾಗಿದ್ದಾರೆ. ಇದರಲ್ಲಿ ಮೊದಲ ಬಾರಿಗೆ ತೀರ್ಪುಗಾರರಾಗಿದ್ದಾರೆ. ತಮ್ಮ ಚಟಪಟ ಮಾತಿನಿಂದಾಗಿ ಅನುಶ್ರೀ ಅವರು ಅಭಿಮಾನಿಗಳ ಮನ ಗೆದ್ದಿದ್ದಾರೆ. ಅವರು ಟಿವಿ ಶೋಗಳನ್ನು ನಡೆಸಿಕೊಡುವ ಶೈಲಿಗೆ ವೀಕ್ಷಕರು ಫಿದಾ ಆಗಿದ್ದಾರೆ. ಕಿರುತೆರೆಯಲ್ಲಿ ಅನುಶ್ರೀ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಹಲವು ರಿಯಾಲಿಟಿ ಶೋಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಖ್ಯಾತಿ ಅವರಿಗಿದೆ. ತಮ್ಮ ಅದ್ಭುತ ನಿರೂಪಣಾ ಶೈಲಿಯಿಂದ ಇದಾಗಲೇ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಆಗಾಗ್ಗೆ ಇಂಥ ಚಿಕ್ಕಪುಟ್ಟ ರೀಲ್ಸ್ ಮಾಡುತ್ತಲೇ ಅಭಿಮಾನಿಗಳ ಮನಸ್ಸನ್ನು ಗೆಲ್ಲುತ್ತಾರೆ.
ನಾಗಲೋಕದಲ್ಲಿ ಆ್ಯಂಕರ್ ಅನುಶ್ರೀ: ಮಲಗಿದಾಗ ಮೆಲ್ಲಗೆ ಬಂದ ನಾಗರಾಜ... ಮದುವೆಗೆ ಹಾತೊರೆಯುತ್ತಿದ್ದಾನಂತೆ!
ಪದೇ ಪದೇ ಅನುಶ್ರೀ ಅವರಿಗೆ ಕೇಳುವ ಪ್ರಶ್ನೆ ಮದುವೆಯ ಬಗ್ಗೆ. ಬೈಕ್ ನೋಡಿಯೂ ಈಗ ಅದೇ ಮಾತನ್ನು ಕೇಳಿದ್ದಾರೆ. ಮದ್ವೆ ಪ್ರಶ್ನೆಗೆ ಉತ್ತರ ಕೊಟ್ಟೂ ಕೊಟ್ಟೂ ಅನುಶ್ರೀಯವರು ಸೋತು ಹೋಗಿದ್ದಾರೆ. ಒಂದೇ ಪ್ರಶ್ನೆಯನ್ನು ಎಷ್ಟೂ ಅಂತ ಕೇಳ್ತೀರಾ ಎಂದು ಬೇಸರ ವ್ಯಕ್ತಪಡಿಸಿದ್ದೂ ಇದೆ. ನಾನು ಮದ್ವೆಯಾಗದೇ ಇರುವುದಿಲ್ಲ, ಆಗೇ ಆಗ್ತೀನಿ. ನಿಮಗೆ ಹೇಳಿಯೇ ಆಗ್ತೀನಿ. ಅಲ್ಲಿಯವರೆಗೆ ಮದ್ವೆ ವಿಷಯ ಕೆದಕದೇ ನನ್ನ ಪಾಡಿಗೆ ನನ್ನನ್ನು ಬಿಟ್ಟುಬಿಡಿ ಎಂದು ಅನುಶ್ರೀ ಅವರು ಅಭಿಮಾನಿಗಳಲ್ಲಿ ಹೇಳಿಕೊಂಡಿದ್ದೂ ಆಗಿದೆ. ಆದರೆ ಅವರು ಸೋಷಿಯಲ್ ಮೀಡಿಯಾದಲ್ಲಿ ಫೋಟೋ, ವಿಡಿಯೋ ಶೇರ್ ಮಾಡಿದಾಗಲೆಲ್ಲಾ ತರ್ಲೆ ಫ್ಯಾನ್ಸ್ ಇದೇ ಪ್ರಶ್ನೆ ಕೇಳುತ್ತಾರೆ. ನಾನೂ ಮದ್ವೆಯಾಗುತ್ತೇನೆ. ಆದ್ರೆ ಕೇಳಿದ್ದನ್ನೇ ಎಷ್ಟೂ ಅಂತ ಕೇಳ್ತೀರಾ ಎಂದು ಪದೇ ಪದೇ ಅನುಶ್ರೀ ಕೇಳಿದರೂ ಅಭಿಮಾನಿಗಳಿಗೆ ಇವರನ್ನು ಮದುವೆ ಮಾಡಿಸಿದ ಹೊರತೂ ಸಮಾಧಾನ ಇಲ್ಲ ಎನ್ನಿಸುತ್ತದೆ.
ಮಂಗಳೂರು ಮೂಲದ ಅನುಶ್ರೀ, ನಮ್ಮ ಟಿವಿ ಚಾನೆಲ್ ನಲ್ಲಿ ಅಂತ್ಯಾಕ್ಷರಿ ಮ್ಯೂಸಿಕ್ ಶೋ ಮೂಲಕ ಟಿವಿ ಜರ್ನಿ ಶುರು ಮಾಡಿದರು. ETV ಯಲ್ಲಿ ಶುರು ಮಾಡಿದ ‘ಡಿಮ್ಯಾಂಡಪ್ಪೋ ಡಿಮ್ಯಾಂಡ್’ ಇವರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡನ್ನು ತಂದು ಕೊಟ್ಟಿತು. ಸರಿಗಮಪ, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಕುಣಿಯೋಣು ಬಾರಾ, ಕಾಮಿಡಿ ಕಿಲಾಡಿಗಳು ಸೇರಿದಂತೆ ಸಾಕಷ್ಟು ರಿಯಾಲಿಟಿ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ‘ಬೆಂಕಿಪೊಟ್ಣ’ ಸಿನಿಮಾ ಇವರ ಮೊದಲ ಸಿನಿಮಾ. ಈ ಚಿತ್ರದಲ್ಲಿ, NAK ಮೀಡಿಯಾದಿಂದ Best debut Actress ಅವಾರ್ಡ್ ಪಡೆದರು. ‘ಮುರಳಿ ಮೀಟ್ಸ್ ಮೀರಾ’ ಸಿನಿಮಾಗಾಗಿ ಕರ್ನಾಟಕ ಸ್ಟೇಟ್ ಫಿಲ್ಮ್ ಅವಾರ್ಡ್ ಪಡೆದಿದ್ದಾರೆ. ಅನುಶ್ರೀ ಆ್ಯಂಕರ್ ಎಂಬ ಯೂಟ್ಯೂಬ್ ಚಾನಲ್ ಆರಂಭಿಸಿರುವ ಅನುಶ್ರೀ ಇದರಲ್ಲಿ ಸಿನಿಮಾ ತಾರೆಯರ ಸಂದರ್ಶನ ಮಾಡುತ್ತಾರೆ.
ಅಕುಲ್- ಅನುಶ್ರೀ ರೊಮಾನ್ಸ್: ವಿಡಿಯೋ ನೋಡಿ ಒನ್ಸ್ ಮೋರ್ ಒನ್ಸ್ ಮೋರ್ ಅಂತಿರೋ ಅಭಿಮಾನಿಗಳು
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.