ನೇರಪ್ರಸಾರದಲ್ಲಿ ಫ್ಯಾನ್ಸ್ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಆ್ಯಂಕರ್ ಅನುಶ್ರೀ ಭಾವುಕರಾದರು. ಅವರು ಹೇಳಿದ್ದೇನು?
ಕನ್ನಡ ಕಿರುತೆರೆ ಜನಪ್ರಿಯ ನಿರೂಪಕಿ ಕಮ್ ಸ್ಯಾಂಡಲ್‌ವುಡ್ ನಟಿ (Sandalwood star) ಅನುಶ್ರೀ ಮನೆಮಾತಾಗಿರುವ ನಟಿ. ಅದ್ಭುತವಾಗಿ ಕಾರ್ಯಕ್ರಮ ನಿರೂಪಣೆಯ ಜೊತೆಗೆ ಸಂಗೀತ, ನೃತ್ಯದಿಂದಲೂ ಮನರಂಜಿಸುವ ಅನುಶ್ರೀ ಸದ್ಯ ಸರಿಗಮಪ ಸಂಗೀತದ ರಿಯಾಲಿಟಿ ಷೋನಲ್ಲಿ ಬಿಜಿಯಾಗಿದ್ದಾರೆ. ತಮ್ಮ ಚಟಪಟ ಮಾತಿನಿಂದಾಗಿ ಅನುಶ್ರೀ ಅವರು ಅಭಿಮಾನಿಗಳ ಮನ ಗೆದ್ದಿದ್ದಾರೆ. ಅವರು ಟಿ.ವಿ ಷೋಗಳನ್ನು ನಡೆಸಿಕೊಡುವ ಶೈಲಿಗೆ ವೀಕ್ಷಕರು ಫಿದಾ ಆಗಿದ್ದಾರೆ. ಕಿರುತೆರೆಯಲ್ಲಿ ಅನುಶ್ರೀ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಹಲವು ರಿಯಾಲಿಟಿ ಶೋಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಖ್ಯಾತಿ ಅವರಿಗಿದೆ. ತಮ್ಮ ಅದ್ಭುತ ನಿರೂಪಣಾ ಶೈಲಿಯಿಂದ ಇದಾಗಲೇ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. 2023ರಲ್ಲಿ ಅನುಶ್ರೀ ಅವರಿಗೆ ಹಲವಾರು ಪ್ರಶಸ್ತಿಗಳೂ ಸಂದಿವೆ.
ಸೋಷಿಯಲ್ ಮೀಡಿಯಾದಲ್ಲಿಯೂ ಸಕತ್ ಆ್ಯಕ್ಟೀವ್ ಆಗಿರುವ ನಟಿ, ತಮ್ಮ ಇನ್ಸ್ಟಾಗ್ರಾಮ್ ಖಾತೆಯ ಮೂಲಕ ಆಗಾಗ್ಗೆ ನೇರಪ್ರಸಾರದಲ್ಲಿ ಬಂದು ಅಭಿಮಾನಿಗಳ ಜೊತೆ ಮಾತನಾಡುತ್ತಿರುತ್ತಾರೆ. ಮೇ 13ರಂದು ನೇರ ಪ್ರಸಾರದಲ್ಲಿ ಬಂದಿರುವ ಅನುಶ್ರೀಯವರು, ಕೆಲವೊಂದು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ನಮ್ಮ ರಿಯಾಲಿಟಿ ಷೋಗಳ ಕುರಿತೂ ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು, ತಮ್ಮ ವಿರುದ್ಧ ಕೆಲವರು ಮಾಡುವ ಟೀಕೆಗಳ ಕುರಿತು ನೋವು ತೋಡಿಕೊಂಡಿದ್ದಾರೆ. ಅವರ ಅಭಿಮಾನಿಯೊಬ್ಬರು ಖುಷಿಯಾಗಿರಿ ಎಂದು ಹೇಳಿದಾಗ, ಇಂಥ ಮಾತು ಹೇಳುವವರೇ ತುಂಬಾ ಅಪರೂಪ ಎನ್ನುತ್ತಾ ಮನದಾಳದ ಮಾತು ಬಿಚ್ಚಿಟ್ಟಿದ್ದಾರೆ.
ಕರಿಮಣಿ ಮಾಲೀಕ ನೀನಲ್ಲ ಎಂದ ಅನುಶ್ರೀ... ಇನ್ನು ಫ್ಯಾನ್ಸ್ ಕೇಳ್ಬೇಕಾ? ಏನೆಲ್ಲಾ ಹೇಳಿದ್ರು ನೋಡಿ...
ಖುಷಿಯಾಗಿದ್ದರೆ ಓವರ್ ಆ್ಯಕ್ಟಿಂಗ್ ಅಂತೀರಿ, ಸ್ವಲ್ಪ ಕಷ್ಟ ಹೇಳಿಕೊಂಡು ಕಣ್ಣೀರು ಹಾಕಿದರೆ ಅದಕ್ಕೂ ಓವರ್ ಆ್ಯಕ್ಟಿಂಗ್ ಅಂತೀರಿ, ಏನನ್ನಾದರೂ ನೋಡಿ ಆಶ್ಚರ್ಯ ಪಟ್ಟರೆ ಅದಕ್ಕೂ ಹಾಗೆಯೇ ಹೇಳುತ್ತೀರಿ... ಸಾಧನೆಯನ್ನು ಹೊಗಳಿದರೆ ಬಕೆಟ್ ಅಂತೀರಿ. ಒಂದೊಂದು ಭಾವನೆಗೂ ಒಂದೊಂದು ಹೆಸರು ಕೊಡ್ತೀರಾ ಎಂದು ನೋವು ತೋಡಿಕೊಂಡರು. ಇದೇ ವೇಳೆ ಇರಲಿ ಬಿಡಿ... ಹತ್ತು ಜನರು ಹೀಗೆಲ್ಲಾ ಹೇಳಿದ್ರೂ, ಕೋಟ್ಯಂತರ ಮಂದಿ ಹರಸುವವರು ಇದ್ದಾರೆ. ಅವರ ಹೊಟ್ಟೆ ತಣ್ಣಗಾಗಿರಲಿ ಎಂದಿದ್ದಾರೆ. ಇದೇ ವೇಳೆ ಯಾರನ್ನೂ ಹೇಟ್ ಮಾಡಬೇಡಿ. ಯಾರಾದ್ರೂ ಇಷ್ಟ ಆಗಿಲ್ಲ ಅಂದ್ರೆ ಅವರ ಬಗ್ಗೆ ಏನೂ ಹೇಳಲೇಬೇಡಿ. ಹೊಗಳಲು ಆಗಿಲ್ಲ ಎಂದ್ರೆ ಕೆಟ್ಟದ್ದನ್ನು ಹೇಳಬೇಡಿ ಎಂದಿದ್ದಾರೆ.
ಇವರಿಗೆ ಪದೇ ಪದೇ ಕೇಳುವ ಪ್ರಶ್ನೆ ಮದುವೆ ಯಾವಾಗ ಎನ್ನುವುದು. ಆ ಬಗ್ಗೆ ಮಾತನಾಡಿದ ಅನುಶ್ರೀ ಅವರು, ಪದೇ ಪದೇ ಇದೇ ಪ್ರಶ್ನೆಯನ್ನು ಯಾಕೆ ಕೇಳುತ್ತೀರಾ? ಮದುವೆ ಅಂದ್ರೆ ನನಗೆ ಇಷ್ಟನೇ. ಆದ್ರೆ ಪದೇ ಪದೇ ಇದರ ಬಗ್ಗೆ ಕೇಳಿದ್ರೆ ಹೇಳೋದು ಕಷ್ಟವಾಗ್ತದೆ. ಮದುವೆ ಬಗ್ಗೆ ಬೇಕಾದಷ್ಟು ವಿಡಿಯೋಗಳು ಯೂಟ್ಯೂಬ್ ಮತ್ತು ಫೇಸ್ಬುಕ್ನಲ್ಲಿ ಇವೆ. ಅದನ್ನು ನೋಡಿ ಎಂದು ತಮಾಷೆ ಮಾಡಿದ್ದಾರೆ.
ಪಟಪಟ ಮಾತನಾಡುವ ಸಿಕ್ರೆ ಸಾಕಾ? ಮದ್ವೆಯಾಗುವ ಹುಡುಗನ ಬಗ್ಗೆ ಅನುಶ್ರೀ ಹೇಳಿದ್ದೇನು?