ಆ್ಯಂಕರ್ ಅನುಶ್ರೀ ಅವರು ಕರಿಮಣಿ ಮಾಲಿಕ ನೀನಲ್ಲ ಹಾಡಿಗೆ ರೀಲ್ಸ್ ಮಾಡಿದ್ದಾರೆ. ಸದಾ ಮದ್ವೆ ಬಗ್ಗೆ ಕೇಳ್ತಿದ್ದ ಅಭಿಮಾನಿಗಳು ಏನೆಲ್ಲಾ ಹೇಳಿದ್ದಾರೆ ನೋಡಿ...
ಕನ್ನಡ ಕಿರುತೆರೆ ಜನಪ್ರಿಯ ನಿರೂಪಕಿ ಕಮ್ ಸ್ಯಾಂಡಲ್‌ವುಡ್ ನಟಿ (Sandalwood star) ಅನುಶ್ರೀ ಮನೆಮಾತಾಗಿರುವ ನಟಿ. ಅದ್ಭುತವಾಗಿ ಕಾರ್ಯಕ್ರಮ ನಿರೂಪಣೆಯ ಜೊತೆಗೆ ಸಂಗೀತ, ನೃತ್ಯದಿಂದಲೂ ಮನರಂಜಿಸುವ ಅನುಶ್ರೀ ಸದ್ಯ ಸರಿಗಮಪ ಸಂಗೀತದ ರಿಯಾಲಿಟಿ ಷೋನಲ್ಲಿ ಬಿಜಿಯಾಗಿದ್ದಾರೆ. ತಮ್ಮ ಚಟಪಟ ಮಾತಿನಿಂದಾಗಿ ಅನುಶ್ರೀ ಅವರು ಅಭಿಮಾನಿಗಳ ಮನ ಗೆದ್ದಿದ್ದಾರೆ. ಅವರು ಟಿವಿ ಶೋಗಳನ್ನು ನಡೆಸಿಕೊಡುವ ಶೈಲಿಗೆ ವೀಕ್ಷಕರು ಫಿದಾ ಆಗಿದ್ದಾರೆ. ಕಿರುತೆರೆಯಲ್ಲಿ ಅನುಶ್ರೀ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಹಲವು ರಿಯಾಲಿಟಿ ಶೋಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಖ್ಯಾತಿ ಅವರಿಗಿದೆ. ತಮ್ಮ ಅದ್ಭುತ ನಿರೂಪಣಾ ಶೈಲಿಯಿಂದ ಇದಾಗಲೇ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. 2023ರಲ್ಲಿ ಅನುಶ್ರೀ ಅವರಿಗೆ ಹಲವಾರು ಪ್ರಶಸ್ತಿಗಳೂ ಸಂದಿವೆ.
ಹೀಗೆ ಜನಮನ ಗೆದ್ದಿರುವ ನಟಿ, ಆ್ಯಂಕರ್ ಅನುಶ್ರೀ ಅವರಿಗೆ ಇಂದು ಅಂದರೆ ಜನವರಿ 25 ಹುಟ್ಟುಹಬ್ಬದ ಸಂಭ್ರಮ. ಗೂಗಲ್ ದಾಖಲೆ ಪ್ರಕಾರ, ನಟಿ 1988ರ ಜ.25ರಂದು ಹುಟ್ಟಿದ್ದು, ಕಳೆದ ಜನವರಿಯಲ್ಲಿ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ವಯಸ್ಸು ಇಷ್ಟಾದರೂ ಮದುವೆ ಇನ್ನೂ ಆಗಿಲ್ಲ ಎನ್ನುವುದೇ ಅನುಶ್ರೀ ಅವರ ಅಭಿಮಾನಿಗಳಿಗೆ ಬೇಸರ ತಂದಿದೆ. ಆದ್ದರಿಂದ ಹೋದಲ್ಲಿ, ಬಂದಲ್ಲಿ ಮದ್ವೆ ಯಾವಾಗ ಎನ್ನುವ ಪ್ರಶ್ನೆಯೇ ಎದುರಾಗುತ್ತಿರುತ್ತದೆ. ಇದರ ನಡುವೆಯೇ ಇತ್ತೀಚೆಗೆ ಭಾರಿ ಟ್ರೆಂಡ್ ಆಗಿರುವ ಕರಿಮಣಿ ಮಾಲಿಕ ನೀನಲ್ಲ ಹಾಡಿಗೆ ಆ್ಯಂಕರ್ ಅನುಶ್ರೀ ರೀಲ್ಸ್ ಮಾಡಿದ್ದಾರೆ. ಕೆಲವು ಯುವತಿಯರ ಜೊತೆ ಅನುಶ್ರೀ ರೀಲ್ಸ್ ಮಾಡಿದ್ದು, ಇದಕ್ಕೆ ಥಹರೇವಾರಿ ಕಮೆಂಟ್ಗಳು ಬರುತ್ತಿವೆ.
ನ್ಯೂಯಾರ್ಕ್ ಟೈಂಸ್ಕ್ವೇರ್ನಲ್ಲಿ ಅಪ್ಪು ಜೊತೆ ಅನು... ಹುಟ್ಟುಹಬ್ಬಕ್ಕೆ ಮರೆಯಲಾಗದ ಗಿಫ್ಟ್: ನಟಿ ಹೇಳಿದ್ದೇನು?
ಹೆಚ್ಚಿನವರು ನಾವೂ ಅದನ್ನೇ ಕೇಳ್ತಿದ್ದೇವೆ ಎಂದಿದ್ದಾರೆ. ನಿನ್ನ ಕರಿಮಣಿ ಮಾಲಿಕ ಯಾರಮ್ಮಾ, ಬೇಗ ಹೇಳಮ್ಮಾ ಅಂತಿದ್ದಾರೆ. ಇನ್ನು ಕೆಲವರು ನಟಿಯ ಕಾಲೆಳೆಯುತ್ತಿದ್ದಾರೆ. ಪ್ಲೀಸ್ ರಾಹುಲ್ಲಾ ಅಂತ ಮಾತ್ರ ಹೇಳ್ಬೇಡಮ್ಮಾ ಎಂದು ಹೇಳುತ್ತಿದ್ದಾರೆ. ಇನ್ನು ಕೆಲವರು ಕರಿಮಣಿ ಮಾಲಿಕ ನಿಮಗೆ ಆದಷ್ಟು ಬೇಗ ಸಿಗಲಿ ಎಂದು ಹಾರೈಸುತ್ತಿದ್ದಾರೆ. ನಮಗೂ ಇದು ಮಿಲಿಯನ್ ಡಾಲರ್ ಪ್ರಶ್ನೆ ಎಂದು ಅಭಿಮಾನಿಯೊಬ್ಬ ಹೇಳಿದ್ದರೆ, ಮತ್ತೋರ್ವ ಕಮೆಂಟಿಗ ಬರೀ ಎಲ್ಲರೂ ನೀನಲ್ಲ ನೀನಲ್ಲ ಅಂತಾರೆ, ಯಾರು ಅಂತಾನೇ ಹೇಳಲ್ಲ ಅಂತಿದ್ದಾರೆ. ಇನ್ನು ಕೆಲವು ತರ್ಲೆ ನೆಟ್ಟಿಗರು ನಾನಾಗ್ಲಾ ಎಂದು ಪ್ರಶ್ನಿಸುತ್ತಿದ್ದಾರೆ.
ಈ ಹಿಂದೆ ಅನುಶ್ರೀ ಅವರು, ಮದುವೆ ಬಗ್ಗೆ ಕೇಳಿದ್ದಕ್ಕೆ ಕೊರಗಜ್ಜನ ಮೇಲೆ ಬಿಡ್ತೀನಿ ಎಂದಿದ್ದರು. ತಮ್ಮ ಮದುವೆಯ ಬಗ್ಗೆ ಪ್ರಶ್ನೆ ಮಾಡೋದನ್ನು ನಿಲ್ಲಿಸಿ ಎನ್ನೋ ಅರ್ಥದಲ್ಲಿ ಹೇಳಿದ್ದರು. ಮದುವೆ ಮಾಡಿಕೊಳ್ಳುವ ತುಂಬಾ ಸಮಯವಿದೆ. ಮೊದಲು ಕೆಲಸ ಮಾಡೋಣ ಎಂದಿದ್ದ ಅವರು, ಮದುವೆ ಅನ್ನೋದು ಒಂದು ಸುಂದರ ಅನುಭವ. ಯಾರ್ಯಾರನ್ನೋ ಮದುವೆ ಮಾಡಿಕೊಳ್ಳಲು ಆಗಲ್ಲ ಎಂದು ಈ ಹಿಂದೆ ಹೇಳಿದ್ದರು. ಮದುವೆ ಅನ್ನೋದು ಬ್ಯೂಟಿಫುಲ್ ಅನುಭವ, ಮದುವೆ ಜೀವನ ಪೂರ್ತಿ ಕಾಪಾಡಿಕೊಳ್ಳಬೇಕಾದ ಸಂಬಂಧ ,ಈ ಸಂಬಂಧದ ಒಳಗೆ ಎರಡು ಜೀವಗಳು ಹೊಕ್ಕಬೇಕು. ಇದಕ್ಕೆಲ್ಲಾ ಸ್ವಲ್ಪ ಟೈಮ್ ಬೇಕು. ಸೋ ಸದ್ಯ ಪ್ಲೀಸ್ ನನ್ನ ಮದುವೆ ಬಗ್ಗೆ ಮಾತ್ರ ಕೇಳ್ಬೇಡಿ ಎಂದೂ ಕೆಲವೊಮ್ಮೆ ಅನುಶ್ರೀ ತಮ್ಮ ಅಭಿಮಾನಿಗಳಿಗೆ ನೇರವಾಗಿಯೇ ಹೇಳಿದ್ದುಂಟು. ಇದೇ ವಿಷಯದ ಬಗ್ಗೆ ಮಾತನಾಡುವಾಗ ಹಿಂದೊಮ್ಮೆ ಭಾವುಕರಾಗಿದ್ದ ನಟಿ, ನನ್ನನ್ನು ಯಾರಾದ್ರೂ ಬಿಟ್ಟು ಹೋಗ್ತಾರಾ ಅನ್ನೋ ಭಯವಿದೆ. ನನಗೆ ಆ ದುಃಖವನ್ನು ತಡೆಯುವ ಶಕ್ತಿ ಇಲ್ಲ ಎಂದಿದ್ದರು. ಪ್ಲೀಸ್ ಇಂತಹ ವಿಚಾರವನ್ನು ಕೇಳ್ಬೇಡಿ ನಾನು ಭಾವುಕರಾಗ್ತೀನಿ ಎಂದೂ ಹೇಳಿದ್ದರು.
ಪಟಪಟ ಮಾತನಾಡುವ ಸಿಕ್ರೆ ಸಾಕಾ? ಮದ್ವೆಯಾಗುವ ಹುಡುಗನ ಬಗ್ಗೆ ಅನುಶ್ರೀ ಹೇಳಿದ್ದೇನು?