ಮತ್ತೆ ಕಿರುತೆರೆಗೆ ಬಂದ್ರು ಅಶ್ವಿನಿ ನಕ್ಷತ್ರ ಖ್ಯಾತಿ ಮಯೂರಿ; ಎಲ್ಲಾ ಓಕೆ, ನನ್ನ ದೇವ್ರು ಅಂತಿರೋದ್ಯಾಕೆ..?

By Contributor Asianet  |  First Published Jul 3, 2024, 9:40 PM IST

ತಾನು ಆರಾಧಿಸುವ ಸಚ್ಚಿದಾನಂದ್ ಬಾಳನ್ನು ಸರಿದಾರಿಗೆ ತರುವ ಹಾದಿಯಲ್ಲಿ ಮಯೂರಿ ಎದುರಿಸುವ ಸವಾಲುಗಳೇನು ಎಂಬುದೇ ಮುಂದಿನ ಕತೆ. ಸುತ್ತಲಿನವರ ಸಂಚುಗಳಿಂದ ಮಯೂರಿ ಹೇಗೆ ಸಚ್ಚಿದಾನಂದನನ್ನು ಕಾಪಾಡುತ್ತಾಳೆ..


ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ನನ್ನ ದೇವ್ರು’ ಎಂಬ ಸೀರಿಯಲ್ ಸದ್ಯದಲ್ಲೇ ಶುರುವಾಗಲಿದೆ. ಈ ಹೊಸ ಕಥೆ ಜುಲೈ 8ರಿಂದ ಪ್ರಸಾರ ಆರಂಭಿಸಲಿದ್ದು, ಇದು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ ಆರೂವರೆಗೆ (6.30) ವೀಕ್ಷಿಸಬಹುದು. ‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ 'ಅಶ್ವಿನಿ ನಕ್ಷತ್ರ'ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ ಕಿರುತೆರೆಗೆ ಮರಳುತ್ತಿದ್ದಾರೆ. 

ಈ ಧಾರಾವಾಹಿಯಲ್ಲಿ ಮಯೂರಿ ಅವರದು ಸಣ್ಣ ಊರಿನ ಬಡ ನರ್ಸ್ ಪಾತ್ರ. ಊರೇ ಮೆಚ್ಚುವ ಉದ್ಯಮಿ ಸಚ್ಚಿದಾನಂದಗೆ ಸೇರಿದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಬಡ ಹುಡುಗಿ ಮಯೂರಿ. ಜನಾನುರಾಗಿ ಸಚ್ಚಿದಾನಂದನ  ಇಪ್ಪತ್ತು ವರ್ಷದ ಮಗಳಿಗೆ ಅಪ್ಪನನ್ನು ಕಂಡರೆ ಇಷ್ಟವಿಲ್ಲ. ತನ್ನಿಂದ ದೂರಾಗಿ ಬದುಕುತ್ತಿರುವ ಮಗಳ ವಿಶ್ವಾಸವನ್ನು ಮರಳಿ ಗಳಿಸಿಕೊಳ್ಳಲು ಹಲುಬುತ್ತಿರುವ ಸಚ್ಚಿದಾನಂದನ ಬದುಕಲ್ಲಿ ಮಯೂರಿಯ ಪ್ರವೇಶವಾಗುತ್ತದೆ.

Tap to resize

Latest Videos

ಆ ರೇಣುಕಾಸ್ವಾಮಿನ ಏನೂ ಮೂಟೆ ಕಟ್ಟಿ ಕರ್ಕೊಂಡು ಬಂದಿಲ್ಲ; 'ಓಂ' ಖ್ಯಾತಿಯ ನಟ ಹರೀಶ್ ರಾಯ್! 

ತಾನು ಆರಾಧಿಸುವ ಸಚ್ಚಿದಾನಂದ್ ಬಾಳನ್ನು ಸರಿದಾರಿಗೆ ತರುವ ಹಾದಿಯಲ್ಲಿ ಮಯೂರಿ ಎದುರಿಸುವ ಸವಾಲುಗಳೇನು ಎಂಬುದೇ ಮುಂದಿನ ಕತೆ. ಸುತ್ತಲಿನವರ ಸಂಚುಗಳಿಂದ ಮಯೂರಿ ಹೇಗೆ ಸಚ್ಚಿದಾನಂದನನ್ನು ಕಾಪಾಡುತ್ತಾಳೆ ಎಂಬುದು ಕುತೂಹಲ. ‘ಅಶ್ವಿನಿ ನಕ್ಷತ್ರ’ದಿಂದ ಹೆಸರಾದ ಮಯೂರಿ ತುಂಬಾ ವರ್ಷಗಳ ನಂತರ ಟಿವಿಗೆ ಮರಳಿ ‘ನನ್ನ ದೇವ್ರು’ ನಾಯಕಿಯಾಗಿದ್ದಾರೆ. ನಾಯಕನಾಗಿ ನಟಿಸುತ್ತಿರುವ ಅವಿನಾಶ್ ದಿವಾಕರ್ ಹಾಸ್ಯಚಕ್ರವರ್ತಿ ನರಸಿಂಹರಾಜು ಅವರ ಮೊಮ್ಮಗ ಅನ್ನುವುದು ಇನ್ನೊಂದು ವಿಶೇಷ. 

ಹೇಳಲು ಆಗದೇ ಇರುವ ಹಲವಾರು ಸಂಗತಿಗಳು ನಮ್ಮ ಬಳಿ ಇವೆ, ಇನ್ಮುಂದೆ ಅವೆಲ್ಲ ಬರಲಿವೆ; ನಟ ಯಶ್..!

ಅವಿನಾಶ್‌ ದಿವಾಕರ್- ಮಯೂರಿ ಇವರೊಂದಿಗೆ ಯುಕ್ತಾ ಮಲ್ನಾಡ್, ಸ್ವಾತಿ, ವಿ ಮನೋಹರ್, ರೇಖಾದಾಸ್, ನಿಶ್ಚಿತಾ ಗೌಡ, ಮಾಲತಿ ಸುಧೀರ್, ಯಮುನಾ ಶ್ರೀನಿಧಿ, ರವಿ ಬ್ರಹ್ಮ, ಅಭಿಷೇಕ್ ಶ್ರೀಕಾಂತ್ ಹೀಗೆ ‘ನನ್ನ ದೇವ್ರು’ ತಾರಾಗಣದಲ್ಲಿ ಜನಪ್ರಿಯ ನಟ ನಟಿಯರು ತುಂಬಾನೇ ಇದ್ದಾರೆ. ಈ ಮೊದಲು ‘ಒಲವಿನ ನಿಲ್ದಾಣ’ ಧಾರಾವಾಹಿಯನ್ನು ನಿರ್ಮಿಸಿದ್ದ ಶ್ರುತಿ ನಾಯ್ಡು, ‘ನನ್ನ ದೇವ್ರು’ ಧಾರಾವಾಹಿಯನ್ನು ನಿರ್ಮಿಸಿದ್ದಾರೆ. ಇತ್ತೀಚಿಗೆ ಬೆಳ‌್ಳಿ ತೆರೆಯ ಮೇಲೆ ಖಳನಟನಾಗಿ ಗಮನ ಸೆಳೆಯುತ್ತಿರುವ ರಮೇಶ್ ಇಂದಿರಾ ‘ನನ್ನ ದೇವ್ರು’ ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ. 

ಯಾವ್ ಹೀರೋನೂ ನಂಗೆ ಹಾಗೆ ಹೇಳಿರ್ಲಿಲ್ಲ, ಅವ್ರು ಮಾತ್ರ ಅಂದಿದ್ರು: ಶಾಕ್ ಕೊಟ್ರು 'AK 47' ಓಂ ಪ್ರಕಾಶ್ ರಾವ್!

click me!