BBK10 ಬಿಗ್‌ಬಾಸ್ ಮನೆಯಲ್ಲಿ ಈ ವಾರ ಡಬಲ್ ಎಲಿಮಿನೇಷನ್, ಹೊರಬಿದ್ರು ಇಶಾನಿ!

Published : Nov 18, 2023, 11:48 PM IST
BBK10 ಬಿಗ್‌ಬಾಸ್ ಮನೆಯಲ್ಲಿ ಈ ವಾರ ಡಬಲ್ ಎಲಿಮಿನೇಷನ್, ಹೊರಬಿದ್ರು ಇಶಾನಿ!

ಸಾರಾಂಶ

ಬಿಗ್‌ಬಾಸ್ ಮನೆಯಲ್ಲಿ ಈ ವಾರ ಡಬಲ್ ಎಲಿಮಿನೇಷನ್ ಶಾಕ್. ಈ ಪಟ್ಟಿಯಲ್ಲಿ ಮೊದಲನೆಯವರಾಗಿ ಇಶಾನಿ ಮನೆಯಿಂದ ಹೊರನಡೆದಿದ್ದಾರೆ. 

ಬೆಂಗಳೂರು(ನ.18) ಬಿಗ್‌ಬಾಸ್ ಮನೆಯಲ್ಲಿ ಪೈಪೋಟಿ ತೀವ್ರಗೊಳ್ಳುತ್ತಿದೆ. ಲೆಕ್ಕಾಚಾರಗಳು ಜೋರಾಗುತ್ತಿದೆ. ಮನೆಗೆ ಹೊಸ ಕ್ಯಾಪ್ಟನ್ ಆಗಿ ಕಾರ್ತಿಕ್ ಮಹೇಶ್ ಆಯ್ಕೆಯಾದ ಬೆನ್ನಲ್ಲೇ ಸ್ಪರ್ಧೆ ಬಿರುಸುಗೊಂಡಿದೆ. ಈ ಬೆಳವಣಿಗೆ ನಡುವೆ ಈ ವಾರ ಡಬಲ್ ಎಲಿನಿಮೇಷನ್ ಶಾಕ್ ಎದುರಾಗಿದೆ. ಇಬ್ಬರು ಮನೆಯಿಂದ ಹೊರಹೋಗುತ್ತಿದ್ದಾರೆ. ಈ ಪೈಕಿ ಸ್ಪರ್ಧಿ ಇಶಾನಿಯ 10ನೇ ಆವೃತ್ತಿ ಬಿಗ್‌ಬಾಸ್ ಪಯಣ ಅಂತ್ಯಗೊಂಡಿದೆ. ಕಳೆದ ವಾರ ವರ್ತೂರ್ ಸಂತೋಷ್‌ ಅವರ ಕಾರಣದಿಂದ ಎಲಿಮಿನೇಷನ್ ನಡೆದಿರಲಿಲ್ಲ. ಹೀಗಾಗಿ ಈ ವಾರ ಎರಡೆರಡು ಎಲಿಮಿಷೇನ್ ನಡೆಯುುತ್ತಿದೆ.

ಈ ವಾರ ಡಬಲ್ ಎಲಿಮಿನೇಷನ್ ವೀಕ್. ಹೀಗಾಗಿ ಇಬ್ಬರು ಈ ಮನೆಯಿಂದ ಹೊರಗೆ ಹೋಗಲಿದ್ದಾರೆ ಎಂದು ಕಿಚ್ಚ ಸುದೀಪ್ ಮೊದಲೇ ಸೂಚನೆ ನೀಡಿದ್ದರು.  
ಶನಿವಾರದ ಎಪಿಸೋಡ್ ಕೊನೆಯಲ್ಲಿ, ಕಿಚ್ಚ ಸುದೀಪ್, ‘ಈ ವಾರ ಒಬ್ಬರು ಮನೆಯಿಂದ ಹೊರಗೆ ಹೋಗುತ್ತಿದ್ದಾರೆ. ಅವರು ಯಾರು ಎಂದು ನಿಮಗೇ ಗೊತ್ತಿರಬೇಕು. ಅವರೇ ಎದ್ದು ನಿಂತುಕೊಳ್ಳಿ’ ಎಂದು ಕೇಳಿದರು. ಸುದೀಪ್ ಮಾತಿನ ಬೆನ್ನಲ್ಲೇ ಇಶಾನಿ ಎದ್ದು ನಿಂತುಕೊಂಡರು.

ಬಿಗ್ ಬಾಸ್ ಮನೆಯಲ್ಲಿ ಇನ್ಮುಂದೆ ಕಾರ್ತಿಕ್ ಹವಾ ಶುರು; ಸಂಗೀತಾಗೆ ಖುಷಿ, ಹಲವರಿಗೆ ಅಸಮಾಧಾನ!

ಇಶಾನಿ ಎದ್ದು ನಿಂತ ಬೆನ್ನಲ್ಲೇ, ನಿಮ್ಮ ಬಿಗ್‌ಬಾಸ್ ಪಯಣ ಇಂದಿಗೆ ಮುಗಿಯುತ್ತಿದೆ. ಶುಭವಾಗಲಿ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.  ನಾಳೆ(ಭಾನುವಾರ) ಎಪಿಸೋಡ್‌ನಲ್ಲಿ ಮತ್ತೊಬ್ಬ ಸ್ಪರ್ಧಿ ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಲಿದ್ದಾರೆ. ಹೊರಬಿದ್ದ ಇಬ್ಬರೂ ಸ್ಪರ್ಧಿಗಳ ಜೊತೆ ನಾಳೆಯ ಎಪಿಸೋಡ್‌ನಲ್ಲಿ ಕಿಚ್ಚ ಸುದೀಪ್ ಜೊತೆ ಸಂವಾದ ನಡೆಸಲಿದ್ದಾರೆ.

ನಾನು ಇನ್ನಷ್ಟು ಎಫರ್ಟ್‌ ಹಾಕಬೇಕಾಗಿತ್ತು. ಆಗಲಿಲ್ಲ. ಮನೆಯಿಂದ ಸಾಕಷ್ಟು ಕಲಿತುಕೊಂಡಿದ್ದೀನಿ. ಉಳಿದ ಎಲ್ಲ ಸ್ಪರ್ಧೆಗಳಿಗೆ ಆಲ್‌ ದಿ ಬೆಸ್ಟ್’ ಎಂದು ಇಶಾನಿ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದಾರೆ.  ಕಿಚ್ಚ ಸುದೀಪ್ ಅವರ ಶನಿವಾರ ಪಂಚಾಯಿತಿ ಮುಗಿದಿದೆ. ಇದೀಗ ಭಾನುವಾರ ಯಾವ ಸ್ಪರ್ಧಿ ಮನೆಯಿಂದ ಹೊರಬೀಳಲಿದ್ದಾರೆ ಅನ್ನೋ ಕುತೂಹಲ ಮನೆ ಮಾಡಿದೆ.  

ಅಪ್ಪನ ನಂಬರ್ ಬ್ಲಾಕ್ ಮಾಡಿದ್ದ ಡ್ರೋನ್ ಪ್ರತಾಪ್, ಈಗ ಅಪ್ಪನ ಧ್ವನಿ ಕೇಳಿ ಬಿಕ್ಕಿ ಬಿಕ್ಕಿ ಅತ್ತರು!

ಕಳೆದ ವಾರ ಬಿಗ್‌ಬಾಸ್ ಮನೆಯಿಂದ ರಕ್ಷಕ್ ಬುಲೆಟ್ ಹೊರಬಿದ್ದಿದ್ದರು. ಮನೆಯಿಂದ ಹೊರಬಂದಿದ್ದಕ್ಕೆ ನನಗೆ ಯಾವ ಬೇಸರವೂ ಇಲ್ಲ. ನಾನೇನೂ ಇಲ್ಲಿ ಕೇಳಿಕೊಂಡು ಬಂದವನಲ್ಲ. ಅವರಾಗೇ ನನ್ನ ಅಪ್ರೋಚ್ ಮಾಡಿದರು. ಒಪ್ಪಿಗೆ ಆಯ್ತು. ಒಳಗಡೆ ಬಂದೆ. ಒಂದು ತಿಂಗಳ ಇರಬೇಕು ಎಂಬ ಆಸೆ ಇತ್ತು. ಆ ದೇವ್ರು ಮುಂಚೆನೇ ಬರ್ದಿದ್ದ ಅನ್ಸತ್ತ. ನನ್ನ ಬೆಸ್ಟ್ ನಾನು ಕೊಟ್ಟಿದ್ದೀನಿ. ಒಳಗಡೆ ಇದ್ದಾಗ ಮನೆಯ ಕ್ಯಾಪ್ಟನ್ ಆದೆ. ‘ಉತ್ತಮ’ ತಗೊಂಡೆ. ಎಲ್ಲರ ಜೊತೆ ತುಂಬ ಒಳ್ಳೆಯ ಬಾಂಡಿಂಗ್ ಇಟ್ಕೊಂಡಿದ್ದೆ. ಈ ಎಲ್ಲವೂ ಇನ್ನೂ ಸ್ಟ್ರಾಂಗ್ ಆಗುವ ಮೊದಲೇ ಆಚೆಬಂದೆ ಅಂತ ಖುಷಿ ಇದೆ ಎಂದು ರಕ್ಷಕ್ ಹೇಳಿದ್ದರು.
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Amruthadhaare: ಅಜ್ಜಿ-ಮೊಮ್ಮಕ್ಕಳ ಮಿಲನದ ಅಪೂರ್ವ ಮಿಲನ; ವೀಕ್ಷಕರು ನಿರೀಕ್ಷಿಸುತ್ತಿದ್ದ ಘಳಿಗೆ ಬಂತು, ಆದ್ರೆ...
ಬಿಗ್ ಬಾಸ್ 19 ವಿನ್ನರ್ ಹೆಸರು ಆನ್‌ಲೈನ್‌ನಲ್ಲಿ ಲೀಕ್? ಹರಿದಾಡುತ್ತಿದೆ ಸ್ಕ್ರೀನ್‌ಶಾಟ್