
ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಸುಭಾಶ್ರೀ (Subhashree) ಹೋಗುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಚಿತ್ರೀಕರಣಕ್ಕೆಂದು ತೆರಳುತ್ತಿದ್ದ ಸಂದರ್ಭದಲ್ಲಿ ಶುಭಾಶ್ರೀ ಅವರ ಕಾರಿಗೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಆಂಧ್ರಪ್ರದೇಶದ ನಾಗಾರ್ಜುನ ಸಾಗರ್ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಟಿಗೆ ಯಾವುದೇ ಗಾಯವಾಗದೆ ಸೇಫ್ ಆಗಿದ್ದಾರೆ. ಆಂಧ್ರ ಪ್ರದೇಶದ ನಾಗಾರ್ಜುನ ಸಾಗರ್ ಬಳಿ ಭಾನುವಾರ ಮಧ್ಯಾಹ್ನ (ಅ.6ರಂದು) ನಡೆದಿದೆ.
ಜಾನಿ ಮಾಸ್ಟರ್ ಪೋಕ್ಸೋ ಕೇಸ್ ಬೆನ್ನಲ್ಲೇ ಮತ್ತೊಂದು ಆಘಾತ: ರಾಷ್ಟ್ರ ಪ್ರಶಸ್ತಿ ರದ್ದುಗೊಳಿಸಿದ ಕೇಂದ್ರ
ಅಪಘಾತದ ಪರಿಣಾಮ ನಟಿ ಪ್ರಯಾಣಿಸುತ್ತಿದ್ದ ಕಾರು ಸಂಪೂರ್ಣ ಜಖಂಗೊಂಡಿದೆ. ಆದ್ರೆ ಬೈಕ್ ನಲ್ಲಿ ತೆರಳುತ್ತಿದ್ದವರು ಡ್ರಿಂಕ್ ಆ್ಯಂಡ್ ಡ್ರೈವ್ ಮಾಡಿದ್ದರು ಎಂದು ವರದಿ ತಿಳಿಸಿದೆ. ಶುಭಶ್ರೀ ಅವರ ಕಾರು ಅಪಘಾತಕ್ಕೆ ಸಂಬಂಧಿಸಿದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಬಿಗ್ ಬಾಸ್ ಮನೆಯಲ್ಲಿ ಪ್ರೆಗ್ನೆಸಿ ಟೆಸ್ಟ್ ಮಾಡಿಸಿದ ನಟಿ! ಇದಕ್ಕೆ ಕಾರಣ ಏನು?
ಬಿಗ್ ಬಾಸ್ ತೆಲುಗು ರಿಯಾಲಿಟಿ ಶೋ ಸೀಸನ್ 7ರ ಮೂಲಕ ಉತ್ತಮ ಜನಪ್ರಿಯತೆ ಗಳಿಸಿದವರಲ್ಲಿ ಶುಭಾಶ್ರೀ ರಾಯಗುರು ಅಲಿಯಾಸ್ ಸುಬ್ಬು ಕೂಡ ಒಬ್ಬರು. ಪ್ರಶಸ್ತಿ ಗೆಲ್ಲದಿದ್ದರೂ ತನ್ನ ಬ್ಯೂಟಿ ಹಾಗೂ ಮುದ್ದಾದ ಮಾತುಗಳಿಂದ ಕಿರುತೆರೆ ಅಭಿಮಾನಿಗಳ ಮನ ಗೆದ್ದಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.