ಬಿಗ್‌ಬಾಸ್‌ ಮನೆಯಿಂದ ಹೊರಬಂದು ಸುದೀರ್ಘ ಪತ್ರ ಬರೆದು ಕಿಚ್ಚನಿಗೆ ಟ್ಯಾಗ್‌ ಮಾಡಿದ ಶೋಭಾ ಶೆಟ್ಟಿ!

By Gowthami K  |  First Published Dec 2, 2024, 11:56 PM IST

ಬಿಗ್ ಬಾಸ್ ಕನ್ನಡ 11ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿ ಅನಾರೋಗ್ಯದ ಕಾರಣ ನೀಡಿ ಮನೆಯಿಂದ ಹೊರಬಂದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ತಮ್ಮ ನಿರ್ಧಾರವನ್ನು ಹಂಚಿಕೊಂಡಿದ್ದಾರೆ.


ಬಿಗ್ ಬಾಸ್ ಕನ್ನಡ 11 ಬರೋಬ್ಬರಿ 10 ನೇ ವಾರಕ್ಕೆ ಕಾಲಿಟ್ಟಿದೆ. ಮುಖವಾಡ ಕಳಚಿ ಬಿಡ್ತೀನಿ ಅಂತ ಅಬ್ಬರಿಸುತ್ತಲೇ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿ ಭಾನುವಾರದ ಎಪಿಸೋಡ್‌ ನಲ್ಲಿ ಕಿಚ್ಚ ಸುದೀಪ್‌ ಬಳಿ ಹೇಳಿಕೊಂಡತೆ ಮನೆಯಿಂದ ಹೊರಬಂದಿದ್ದಾರೆ. ಸೋಮವಾರದ  ಸಂಚಿಕೆಯಲ್ಲಿ ಶೋಭಾ ಹೊರ ಬಂದಿರುವುದನ್ನು ತೋರಿಸಿದ್ದಾರೆ.

ಸಿಕ್ಕ ಒಂದು ಒಳ್ಳೆಯ ಅವಕಾಶವನ್ನು ಕಳೆದುಕೊಂಡಿದ್ದಾರೆ. ಮನೆಯಿಂದ ಹೊರ ಬಂದಿರುವ ಶೋಭಾ ಶೆಟ್ಟಿ ಸೋಷಿಯಲ್‌ ಮೀಡಿಯಾದಲ್ಲಿ ಪ್ರಯಾಣವು ಅನಿರೀಕ್ಷಿತ ತಿರುವು ಪಡೆದುಕೊಂಡಿದೆ, ಆದರೆ ಎಲ್ಲದಕ್ಕೂ ಒಂದು ಕಾರಣವಿದೆ! ಎಂದು ಬರೆದುಕೊಂಡು ಸುದೀಪ್‌ ಅವರಿಗೆ ಮತ್ತು ಕಲರ್ಸ್ ಕನ್ನಡ ಪೇಜ್‌ ಗೆ ಟ್ಯಾಗ್‌ ಮಾಡಿದ್ದಾರೆ.

Tap to resize

Latest Videos

ಕ್ಲೈಮ್ಯಾಕ್ಸ್‌ನಲ್ಲಿ ತೆಲುಗು ಬಿಗ್ ಬಾಸ್, ವಿನ್ನರ್ ಯಾರೆಂದು ಭಾರೀ ಚರ್ಚೆ, ಕನ್ನಡಿಗ ನಿಖಿಲ್ or ಗೌತಮ್?

ನನ್ನ ಪ್ರೀತಿಯ ಕನ್ನಡಿಗರೇ, ನನ್ನ ಬಿಗ್ ಬಾಸ್ ಪಯಣ ಮುಗಿದಿದೆ. ಆಟದ ಮೇಲೆ ಗಮನ ಕೊಡಲು ಆರೋಗ್ಯ ಸಹಕರಿಸುತ್ತಿಲ್ಲ, ಮುನ್ನಡೆಯುವ ಇಚ್ಛೆಯಿದ್ದರೂ ದೇಹ ಮುಂದುವರಿಯಲು ಬಿಡುತ್ತಿಲ್ಲ.. ಯಾರನ್ನೂ ಯಾವುದನ್ನೂ ನಾನು ಹಗುರವಾಗಿ ತೆಗೆದುಕೊಂಡಿಲ್ಲ, ಜೀವನದ ಜವಬ್ದಾರಿಗಳಿಗೆ ಆರೋಗ್ಯವನ್ನು ಕಾಪಾಡಿಕೊಂಡು ಮುನ್ನಡೆಯುವ ಸಲುವಾಗಿ ನನ್ನ ಈ ನಿರ್ಧಾರ! ಇದೆಲ್ಲದರ ಮಧ್ಯೆ ನೀವು ತೋರಿಸಿದ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಅಭಾರಿಯಾಗಿದ್ದೀನಿ, ತಿಳಿದೋ ತಿಳಿಯದೆಯೋ ನನ್ನಿಂದ ಯಾರಿಗಾದರೂ ಬೇಸರವಾಗಿದ್ದರೆ ದಯವಿಟ್ಟು ಕ್ಷಮಿಸಿ. ನನ್ನ ಜನರಿಗೆ, ಕಲರ್ಸ್ ಕನ್ನಡ ತಂಡಕ್ಕೆ, ಹಾಗು ನನ್ನ ಪ್ರೀತಿಯ ಕಿಚ್ಚ ಸುದೀಪ್ ಸರ್ ನಿಮಗೆ ಧನ್ಯವಾದಗಳು. ಹೊಸ ಹುರುಪಿನೊಂದಿಗೆ ನಿಮ್ಮನ್ನು ರಂಜಿಸಲು, ನಿಮ್ಮ ಪ್ರೀತಿಯನ್ನು ಮತ್ತೆ ಪಡೆಯಲು ಮತ್ತೊಂದು ರೂಪದಲ್ಲಿ ಮತ್ತೆ ನಿಮ್ಮ ಮುಂದೆ ಖಂಡಿತಾ ನಾನು ಬರುವೆ. ಇಂತಿ ಪ್ರೀತಿಯಾ ಶೋಭಾ ಶೆಟ್ಟಿ ಎಂದು ಸುದೀರ್ಘ ಪತ್ರ ಬರೆದಿದ್ದಾರೆ.

ಕುಬೇರ ಚಿತ್ರಕ್ಕಾಗಿ ಧನುಷ್‌ಗೆ 30 ಕೋಟಿ ಸಂಭಾವನೆ! ಸಿನೆಮಾ ಬಜೆಟ್‌ಗಿಂತ 36% ಜಾಸ್ತಿ?

ಬಹುತೇಕ ಮಂದಿ ನಿಮ್ಮ ನಿರ್ಧಾರಕ್ಕೆ ನೋವಾಗಿದೆ. ಸುದೀಪ್‌ ಸರ್ ಗೆ ನೀವು ಬೆಲೆ ಕೊಡಬೇಕಿತ್ತು ಎಂದು ಕಮೆಂಟ್‌ ಮಾಡಿದ್ದಾರೆ.‌ ಕೆಲವರು ನಿಮ್ಮ ಆರೋಗ್ಯ ನೋಡಿಕೊಳ್ಳಿ ನಿಮ್ಮ ನಿರ್ಧಾರವನ್ನು ಗೌರವ ನೀಡುತ್ತೇವೆ ಎಂದು ಬರೆದುಕೊಂಡಿದ್ದಾರೆ.

ತೆಲುಗು ಬಿಗ್‌ಬಾಸ್‌ ನಲ್ಲಿ ಸಖತ್ ಸೌಂಡು ಮಾಡಿದ್ದ ಶೋಭಾ ಶೆಟ್ಟಿ ಕೊನೆಯವರೆಗೂ  ಪ್ರೀತಿ ಗಳಿಸಿ ಉಳಿದುಕೊಂಡಿದ್ದರು. ಆದರೆ ಕನ್ನಡದಲ್ಲಿ ಅವರ ಆಟ ನಡೆಯಲೇ ಇಲ್ಲ. ತೆಲುಗಿನ ವೀಕ್ಷಕರ ಅಭಿರುಚಿ ಮತ್ತು ಕನ್ನಡ ವೀಕ್ಷಕರ ಅಭಿರುಚಿ ವಿಭಿನ್ನವಾಗಿದೆ ಎಂದು ಶೋಭಾ ಅವರ ಮನಸಿಗೆ ಅನಿಸಿತೋ ಗೊತ್ತಿಲ್ಲ ಆದರೆ ಅನಾರೋಗ್ಯದ ಕಾರಣವನ್ನು ನೀಡಿ, ಶೋಭಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಿದ್ದಾರೆ.

click me!