ಮನುಷ್ಯ ಮನುಷ್ಯರ ನಡುವಿನ ಗೋಡೆ ಒಡೆಯಲು ನೋವಿಗಿಂತ ಬೇರೆ ಆಯುಧ ಬೇಕೆ? ಅಗ್ಗಷ್ಟಿಕೆಯ ಬೆಳಕಲ್ಲಿ, ನೆನಪುಗಳ ಕಾವಿನಲ್ಲಿ ನೋವಿನ ನೆಪದಲ್ಲಿ ಮನೆಯ ಸ್ಪರ್ಧಿಗಳೆಲ್ಲ ಒಂದಾಗಿದ್ದಾರೆ. ಒಬ್ಬರ ಕಣ್ಣೀರನ್ನು ಇನ್ನೊಬ್ಬರು ವರೆಸಿದ್ದಾರೆ. ಒಬ್ಬರ ದುಃಖಕ್ಕೆ ಇನ್ನೊಬ್ಬರು ಹೆಗಲಾಗಿದ್ದಾರೆ.
ಕಲರ್ಸ್ ಕನ್ನಡ ಬಿಗ್ ಬಾಸ್ ಸೀಸನ್ 10 ಎರಡನೇ ವಾರ ಮುಗಿಸಿ ಮೂರನೇ ವಾರದಲ್ಲಿ ಸಾಗುತ್ತಿದೆ. ಟಾಸ್ಕ್, ಹಬ್ಬದ ಮನರಂಜನೆಗಳು, ವರ್ತೂರು ಸಂತೋಷ್ ನಿರ್ಗಮನ, ನಟಿ ತಾರಾ ಆಗಮನ, ಅದೂ ಇದೂ ಹೊಸ ಹೊಸ ಸಂಗತಿಗಳು 3ನೆಯ ವಾರದ ವಿಶೇಷತೆಗಳು. ಬಿಗ್ ಬಾಸ್ ಮನೆಯಲ್ಲಿ ತಣ್ಣನೆಯ ರಾತ್ರಿ. ಆದರೆ ಎಲ್ಲರ ಕಣ್ಣಲ್ಲೂ ಕೋಡಿಯಾಗಿ ಹರಿಯುತ್ತಿದೆ ಬಿಸಿಯಾದ ಕಂಬನಿ! ಎದುರಲ್ಲಿ ಅಗ್ಗಷ್ಟಿಗೆ ಧಗಧಗ ಉರಿಯುತ್ತಿದ್ದರೆ, ಸ್ಪರ್ಧಿಗಳೆಲ್ಲ ಕುಟುಂಬದವರ ನೆನಪಲ್ಲಿ ಕರಗಿ ಕಣ್ಣೀರಾಗಿ ಹರಿಯುತ್ತಿದ್ದಾರೆ.
ಅಪ್ಪ-ಅಮ್ಮನಿಗೆ ಕೊಟ್ಟ ಮಾತು, ಸಂಗಾತಿಯ ನೆನಪು, ಈಡೇರದೇ ಉಳಿದುಬಿಟ್ಟ ಭಾಷೆ, ಕೊನೆಗೂ ಒಪ್ಪಿಕೊಳ್ಳದೇ ತಮ್ಮೊಳಗೆ ಒಂದಾಗಿಸಿಕೊಂಡು ಅಪ್ಪಿಕೊಳ್ಳದೇ ಹೋದ ಕುಟುಂಬ, ಹೆತ್ತವರ ಬೆಂಬಲಕ್ಕೆ ಪ್ರತಿಫಲ ನೀಡಲಾಗದ ಅಸಹಾಯಕತೆ... ಅಬ್ಬಬ್ಬಾ! ಒಬ್ಬೊಬ್ಬರ ಹೃದಯದಲ್ಲಿಯೂ ಹೇಳಿಕೊಳ್ಳದೇ ಉಳಿದಿವೆಯಲ್ಲ ಎಷ್ಟೊಂದು ವಿಭಿನ್ನ ಕತೆಗಳು!!
ಮನುಷ್ಯ ಮನುಷ್ಯರ ನಡುವಿನ ಗೋಡೆ ಒಡೆಯಲು ನೋವಿಗಿಂತ ಬೇರೆ ಆಯುಧ ಬೇಕೆ? ಅಗ್ಗಷ್ಟಿಕೆಯ ಬೆಳಕಲ್ಲಿ, ನೆನಪುಗಳ ಕಾವಿನಲ್ಲಿ ನೋವಿನ ನೆಪದಲ್ಲಿ ಮನೆಯ ಸ್ಪರ್ಧಿಗಳೆಲ್ಲ ಒಂದಾಗಿದ್ದಾರೆ. ಒಬ್ಬರ ಕಣ್ಣೀರನ್ನು ಇನ್ನೊಬ್ಬರು ವರೆಸಿದ್ದಾರೆ. ಒಬ್ಬರ ದುಃಖಕ್ಕೆ ಇನ್ನೊಬ್ಬರು ಹೆಗಲಾಗಿದ್ದಾರೆ. ಒಬ್ಬರಿಗೊಬ್ಬರು ಒದಗಿಬರುತ್ತ ಎಲ್ಲರೂ ಒಂದೇ ಆಗಿದ್ದಾರೆ.
ವಿಜಯದಶಮಿ ದಿನವೇ 'ಭಾಗ್ಯಲಕ್ಷ್ಮಿ' ಸೀರಿಯಲ್ ವಿಲನ್ ಶ್ರೇಷ್ಠಾ ಮನೆಗೆ ಪುಟ್ಟ ಲಕ್ಷ್ಮಿ ಆಗಮನ
JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಬಿಗ್ ಬಾಸ್ ಮನೆಯ ಸ್ಪರ್ಧಿಗಳ ಭಾವುಕ ಗಳಿಗೆಗಳು ಸೆರೆಯಾಗಿವೆ. ಸರಿ... ಆದರೆ ಎಷ್ಟು ಕಾಲ? ಎಲ್ಲಿಯವರೆಗೆ? ಬಿಗ್ ಬಾಸ್ ಮನೆಯೊಳಗಿನ ಪ್ರತಿ ಗಳಿಗೆಯೂ ವ್ಯಕ್ತಿತ್ವ ಪರೀಕ್ಷೆಯ ಅಗ್ನಿದಿವ್ಯವೇ... ಈ ಆಟದಲ್ಲಿ ಒಂದಾಗಿರುವವರು ಮತ್ತೆ ಬೇರಾಗುತ್ತಾರಾ? ಪರಸ್ಪರ ಹೆಗಲುಕೊಟ್ಟವರು ತೊಡೆ ತಟ್ಟಿ ನಿಲ್ಲುತ್ತಾರಾ? ಬಿಗ್ ಬಾಸ್ ಮನೆಯಲ್ಲಿ ಯಾರ ಮಿತ್ರತ್ವವೂ ಶತ್ರುತ್ವವೂ ಶಾಶ್ವತವಲ್ಲ. ಏಕೆಂದರೆ ಇಲ್ಲಿ ಎಲ್ಲರೂ ಬಂದಿರುವುದು ಆಡಲಷ್ಟೇ. ಈಗಾಗಲೇ ಬಿಗ್ ಬಾಸ್‌ನ 9 ಸೀಸನ್‌ಗಳನ್ನು ನೋಡಿರುವ ವೀಕ್ಷಕರಿಗೆ ಇದು ಖಂಡಿತ ಹೊಸ ವಿಷಯವಂತೂ ಅಲ್ಲ.
ನಂಗೆ ಆ ಸಮಸ್ಯೆ ಇತ್ತು, ಅದಿದ್ರೆ ಮಕ್ಕಳಾಗಲ್ಲ ಅಂತಾನೂ ಗೊತ್ತಿತ್ತು: ಸಂಗೀತ ಶೃಂಗೇರಿ ಹೇಳಿದ ಆ ಸಮಸ್ಯೆ ಯಾವುದು?
ಬಿಗ್ ಬಾಸ್ ಮನೆಯಲ್ಲಿ ಏನೇನು ಆಗುತ್ತಿದೆ ಎಂದು ತಿಳಿಯಲು JioCinemaದಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ 24 ಗಂಟೆ ಉಚಿತ ನೇರಪ್ರಸಾರವನ್ನು ವೀಕ್ಷಿಸಿ. ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ. ಪ್ರತಿದಿನದ ಎಪಿಸೋಡ್‌ಗಳನ್ನು 'Colors Kannada'ದಲ್ಲಿ ಪ್ರತಿದಿನ ರಾತ್ರಿ 9.30ಗೆ ವೀಕ್ಷಿಸಬಹುದು.