ಟ್ರಾನ್ಸ್‌ಜೆಂಡರ್ ಆಗಿರುವ ನನಗೆ ಬಿಗ್‌ಬಾಸ್‌ ವೇದಿಕೆ ಕೊಟ್ಟಿರುವುದಕ್ಕೆ ಧನ್ಯವಾದ: ನೀತು ವನಜಾಕ್ಷಿ

Published : Nov 26, 2023, 10:59 PM IST
ಟ್ರಾನ್ಸ್‌ಜೆಂಡರ್ ಆಗಿರುವ ನನಗೆ ಬಿಗ್‌ಬಾಸ್‌ ವೇದಿಕೆ ಕೊಟ್ಟಿರುವುದಕ್ಕೆ ಧನ್ಯವಾದ: ನೀತು ವನಜಾಕ್ಷಿ

ಸಾರಾಂಶ

ಬಿಗ್‌ಬಾಸ್‌ ಈ ಸಲದ ಷೋ 50ನೇ ದಿನವನ್ನು ತಲುಪಿದೆ. ಈ ವಾರದ ‘ಸೂಪರ್ ಸಂಡೆ ವಿಥ್ ಸುದೀಪ್‌’ ಎಪಿಸೋಡ್‌ನಲ್ಲಿ ಐವತ್ತು ದಿನಗಳ ಪಯಣದ ವಿಟಿಯನ್ನೂ ಹಾಕಿ ತೋರಿಸಲಾಗಿದೆ. ಐವತ್ತು ದಿನಗಳ ಕಾಲದ ಏಳುಬೀಳಿನ ಹಾದಿಯನ್ನು ನೋಡಿ ಸ್ಪರ್ಧಿಗಳು ಖುಷಿಪಟ್ಟರು. 

ಬಿಗ್‌ಬಾಸ್‌ ಈ ಸಲದ ಷೋ 50ನೇ ದಿನವನ್ನು ತಲುಪಿದೆ. ಈ ವಾರದ ‘ಸೂಪರ್ ಸಂಡೆ ವಿಥ್ ಸುದೀಪ್‌’ ಎಪಿಸೋಡ್‌ನಲ್ಲಿ ಐವತ್ತು ದಿನಗಳ ಪಯಣದ ವಿಟಿಯನ್ನೂ ಹಾಕಿ ತೋರಿಸಲಾಗಿದೆ. ಐವತ್ತು ದಿನಗಳ ಕಾಲದ ಏಳುಬೀಳಿನ ಹಾದಿಯನ್ನು ನೋಡಿ ಸ್ಪರ್ಧಿಗಳು ಖುಷಿಪಟ್ಟರು. ನಂತರ ನಾಮಿನೇಷನ್‌ ಲೀಸ್ಟ್‌ನಲ್ಲಿರುವ ಸ್ಪರ್ಧಿಗಳಲ್ಲಿ ಮೊದಲು ನಮ್ರತಾ ಅವರು ಸೇಫ್‌ ಎಂದು ಕಿಚ್ಚ ಘೋಷಣೆ ಮಾಡಿದರು. ನಂತರ ಸೇಫ್‌ ಆಗಿದ್ದು, ತುಕಾಲಿ ಸಂತೋಷ್. ಸ್ನೇಹಿತ್‌ ಕೂಡ ಸೇಫ್‌ ಆದರು. ಆ ಹಂತದಲ್ಲಿ ನಾಮಿನೇಷನ್ ಲೀಸ್ಟ್‌ನಲ್ಲಿ ಉಳಿದವರು ನೀತು ಮತ್ತು ಸಿರಿ. ಅವರಿಬ್ಬರಲ್ಲಿ ಸಿರಿ ಸೇಫ್ ಆಗಿದ್ದಾರೆ ಮತ್ತು ನೀತು ವನಜಾಕ್ಷಿ ಅವರ ಬಿಗ್‌ಬಾಸ್ ಪಯಣ ಈ ಎಪಿಸೋಡ್‌ನೊಂದಿಗೆ ಮುಗಿದಿದೆ. 

ಬಿಗ್‌ಬಾಸ್‌ ಕನ್ನಡ ಇತಿಹಾಸದಲ್ಲಿಯೇ, ಕ್ಯಾಪ್ಟನ್‌ಷಿಪ್‌ನಲ್ಲಿ ಇದ್ದು, ಎಲಿಮಿನೇಟ್‌ ಆದ ಮೊದಲ ಸ್ಪರ್ಧಿಯಾಗಿ ನೀತು ಹೊರಗೆ ಹೋಗಿದ್ದಾರೆ. ಟ್ರಾನ್ಸ್‌ಜೆಂಡರ್‍ ಸಮುದಾಯದಿಂದ ಬಂದಿರುವ ನೀತು, ‘ನಮ್ಮ ಸಮುದಾಯದವರ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಬಿಗ್‌ಬಾಸ್‌ ವೇದಿಕೆಯ ಮೂಲಕ ಮಾಡುತ್ತೇನೆ’ ಎಂದು ಆರಂಭದಲ್ಲಿಯೇ ಹೇಳಿದ್ದರು. ಹಾಗೆಂದು ಮನೆಯೊಳಗೆ ಹೋದಾಗ ಮೊದಲ ಕೆಲವು ದಿನಗಳನ್ನು ಬಿಟ್ಟರೆ ತಮ್ಮ ಸಮುದಾಯದವರ ಬಗ್ಗೆ ಅವರು ಮಾತನಾಡಿದ್ದು ಕಡಿಮೆಯೇ. ಆದರೆ ಅವರು ಎಲ್ಲರೊಂದಿಗೆ ಬೆರೆಯುವ ರೀತಿ, ಗುಂಪಿನಲ್ಲಿದ್ದರೂ ತಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ, ಗಟ್ಟಿಯಾದ ಧ್ವನಿಯಲ್ಲಿ ಹೇಳುವ ಬಗೆ, ಟಾಸ್ಕ್‌ಗಳಲ್ಲಿ ಮುಂದೆ ಬಂದು ಭಾಗವಹಿಸುವುದು ಇವೆಲ್ಲವೂ ಟ್ರಾನ್ಸ್‌ಜೆಂಡರ್ ಸಮುದಾಯದವರ ಬಗ್ಗೆ ಒಂದು ಸಕಾರಾತ್ಮಕ ಧೋರಣೆಯನ್ನು ಬೆಳೆಸಿದ್ದಂತೂ ನಿಜ. 

ಆ ವರ್ಗದ ಪಾರ್ಟಿಗೆ ಹೋಗಿ ವಿಚಿತ್ರ ಅನಿಸಿತ್ತು; ನೀತು ಬದಲಾವಣೆ ಬಗ್ಗೆ ಸಹೋದರಿ ಕಣ್ಣೀರು!

ಈಗ ಅವರು ಬಿಗ್‌ಬಾಸ್ ಮನೆಯಿಂದ ಹೊರಗೆ ಹೋಗಿದ್ದಾರೆ. ಹೊರಹೋಗುವ ಮೊದಲು ಅವರು ತಮ್ಮ ಬದುಕಿನ ಬಗ್ಗೆ, ಬಿಗ್‌ಬಾಸ್ ಮನೆಯಿಂದ ತಮ್ಮ ಬದುಕಿನಲ್ಲಾದ ಬದಲಾವಣೆಯ ಬಗ್ಗೆಯೂ ಅಭಿಪ್ರಾಯ ಹಂಚಿಕೊಂಡಿದ್ದಾರೆ.  ‘ಕನ್ವರ್ಟ್‌ ಆಗುವ ಮೊದಲು ನನ್ನ ಬದುಕು ನರಕವೇ ಆಗಿತ್ತು. ಹೆಣ್ಣಾಗಿ ಫೀಲ್ ಮಾಡ್ತಿದ್ದೆ. ಹೊರಗಡೆ ಹುಡುಗನಾಗಿ ಹುಡುಗನಾಗಿ ಕಾಣಿಸ್ತಿದ್ದೆ. ಅದು ನಾನು ಅನಿಸ್ತಿರ್ಲಿಲ್ಲ. ಯಾವಾಗ ನನ್ನ ತಾಯಿ ನನ್ನನ್ನು ಒಪ್ಪಿಕೊಂಡ್ರೋ ಆಗ ನನ್ನ ಹೊಸ ಜೀವನ ಶುರುವಾಯ್ತು. ಈಗ ಪ್ರತಿ ಕ್ಷಣವನ್ನೂ ಎಂಜಾಯ್ ಮಾಡ್ತಿದ್ದೀನಿ. ಇಲ್ಲಿಯೂ ಪ್ರತಿಕ್ಷಣ ಎಂಜಾಯ್ ಮಾಡ್ತಿದ್ದೀನಿ. ಎಲ್ಲರಿಂದಲೂ ಪ್ರೀತಿ ಸಿಕ್ಕಿದೆ’ ಎಂದು ನೀತು ಐವತ್ತು ದಿನಗಳ ಜರ್ನಿಯ ಕುರಿತು ಹೇಳಿದರು.

ಪಿಂಕ್ ಡ್ರೆಸ್‌ನಲ್ಲಿ ಹಾಟ್ ಪೋಸ್ ಕೊಟ್ಟ ಪೂಜಾ ಹೆಗ್ಡೆ: ಲಿಪ್​ಸ್ಟಿಕ್ ಹಚ್ಚಿಕೊಂಡಿದ್ದಕ್ಕೆ ನೆಟ್ಟಿಗರು ಹೀಗೆ ಅನ್ನೋದಾ!

ಎಲಿಮಿನೇಟ್‌ ಆಗುತ್ತಿದ್ದೀರಾ ಎಂದು ಘೋಷಣೆಯಾಗುತ್ತಿದ್ದ ಹಾಗೆಯೇ ನೀತು ಮುಖದಲ್ಲಿ ವಿಷಾದ ಕಾಣಿಸಿಕೊಂಡಿತು. ‘ಟ್ರಾನ್ಸ್‌ಜೆಂಡರ್ ಆಗಿರುವ ನನಗೆ ವೇದಿಕೆ ಕೊಟ್ಟಿರುವುದಕ್ಕೆ ಧನ್ಯವಾದ. ಎಲ್ಲರ ಪ್ರೀತಿ ನನಗೆ ನೂರಕ್ಕೆ ನೂರು ಸಿಕ್ಕಿದೆ. ಆ ಪ್ರೀತಿಯನ್ನು ತೆಗೆದುಕೊಂಡು ಹೋಗುತ್ತಿದ್ದೇನೆ ಎಂಬ ಖಷಿಯಿದೆ. ಎಲ್ಲರಿಂದಲೂ ಒಂದೊಂದು ವಿಷಯ ಕಲಿತಿದ್ದೀನಿ. ಅವೆಲ್ಲವನ್ನೂ ನಾನು ನನ್ನ ಬದುಕಿನಲ್ಲಿ ಕಲಿತುಕೊಂಡು ಒಳ್ಳೆಯ ಮನುಷ್ಯನಾಗ್ತೀನಿ. ಇಲ್ಲಿನ ಒಂದೊಂದು ಕ್ಷಣವನ್ನೂ ನಾನು ಸೆಲಬ್ರೇಟ್ ಮಾಡಿದ್ದೀನಿ’ ಎಂದು ನೀತು ಮನೆಯಿಂದ ಹೊರಬಿದ್ದಿದ್ದಾರೆ.  ಹೊರಹೋಗುವ ಮುನ್ನ ಅವರು ಅವರ ಕ್ಯಾಪ್ಟನ್‌ನ ಜವಾಬ್ದಾರಿಯನ್ನು ಒಬ್ಬರನ್ನು ನೇಮಿಸುವಂತೆ ಬಿಗ್‌ಬಾಸ್ ಆದೇಶಿಸಿದ್ದಾರೆ. ಅದಕ್ಕೆ ನೀತು ಮೈಕಲ್ ಅವರನ್ನು ನಾಯಕನನ್ನಾಗಿ ನೆಪಿಸಿ ಹೊರಬಿದ್ದಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Naa Ninna Bidalaare: ಗಂಡ ಬೇರೊಬ್ಬಳನ್ನು ಅಪ್ಪಿಕೊಂಡ್ರೆ ಖುಷಿ ಪಡುವ ಜಗತ್ತಿನ ಏಕೈಕ ಹೆಂಡ್ತಿ ಈಕೆ!
ಬರಿಗೈಯಲ್ಲಿ ಟಾಯ್ಲೆಟ್​ ತೊಳೆದ Bigg Boss ಡಾಗ್​ ಸತೀಶ್​​: ನಿಮ್ಮ ಮನೆಗೂ ಬೇಕಾದ್ರೆ ಬರ್ತಾರಂತೆ!