ಚಳಿಯಲ್ಲಿ ಪಡ್ಡೆ ಹುಡುಗರ ಬಿಸಿ ಏರಿಸಿದ ನಟಿ ನಿವೇದಿತಾ! ಹಸಿಬಿಸಿ ವಿಡಿಯೋ ನೋಡಿ ಫ್ಯಾನ್ಸ್‌ ಸುಸ್ತು

Published : Dec 02, 2024, 05:42 PM IST
ಚಳಿಯಲ್ಲಿ ಪಡ್ಡೆ ಹುಡುಗರ ಬಿಸಿ ಏರಿಸಿದ ನಟಿ ನಿವೇದಿತಾ! ಹಸಿಬಿಸಿ ವಿಡಿಯೋ ನೋಡಿ ಫ್ಯಾನ್ಸ್‌ ಸುಸ್ತು

ಸಾರಾಂಶ

ಚುಮುಚುಮು ಚಳಿಯಲ್ಲಿಯೂ ಪಡ್ಡೆ ಹುಡುಗರ ನಿದ್ದೆ ಕದ್ದು, ಮೈ ಬೆಚ್ಚಗೆ ಮಾಡುವಂಥ ವಿಡಿಯೋ ಶೇರ್‍‌ ಮಾಡಿದ್ದಾರೆ ನಟಿ ನಿವೇದಿತಾ ಗೌಡ. ಅದೀಗ ವೈರಲ್‌ ಆಗಿದೆ.  

ಬಿಗ್​ಬಾಸ್​ ಖ್ಯಾತಿಯ ನಿವೇದಿತಾ ಗೌಡ ಅವರು ಇತ್ತೀಚಿನ ದಿನಗಳಲ್ಲಿ ಸಕತ್​ ಹಾಟ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮಿನಿ, ಮಿಡಿ ಎಲ್ಲಾ ಬಿಟ್ಟು ಬ್ಯಾಕ್‌ಲೆಸ್‌ ಮಟ್ಟಿಗೂ ಬಂದು ನಿಂತಿದ್ದಾರೆ.  ಗಾಯಕ ಚಂದನ್​ ಶೆಟ್ಟಿ ಅವರಿಂದ ಡಿವೋರ್ಸ್​  ಪಡೆದ ಮೇಲೆ   ಕೆಲ ತಿಂಗಳುಗಳಿಂದ ಸ್ನೇಹಿತೆಯೊಬ್ಬರ ಜೊತೆ ರೀಲ್ಸ್​ ಶುರುವಿಟ್ಟುಕೊಂಡಿದ್ದಾರೆ. ಇದನ್ನು ನೋಡಿಯೇ ಇನ್ನಿಲ್ಲದಂಥ ಕಮೆಂಟ್‌ಗಳು ಸುರಿಮಳೆಯಾಗ್ತಿದೆ. ಏಕೆಂದರೆ, ಇಬ್ಬರೂ ರೀಲ್ಸ್‌ನಲ್ಲಿ ಹುಚ್ಚಾಟ ಆಡುತ್ತಿದ್ದಾರೆ. ತಾವು ಅಂಗ ಪ್ರದರ್ಶನ ಮಾಡಿಕೊಂಡು ಮೈ ಬಳಕಿಸುತ್ತಾ ಇದ್ದರೆ, ಆ ರೀಲ್ಸ್‌ ನೋಡುವವರ ಸಂಖ್ಯೆ ಹೆಚ್ಚು ಎನ್ನುವುದು ನಟಿಗೂ ಗೊತ್ತಾಗಿದೆ. ಅದೇ ಕಾರಣಕ್ಕೆ ಈಗ ಮತ್ತೊಂದು ರೀಲ್ಸ್‌ ಮಾಡಿದ್ದಾರೆ.  ಇದರಲ್ಲಿಯೇ ಮಾಮೂಲಿನಂತೆ ಧಾರಾಳವಾಗಿ ಅಂಗ ಪ್ರದರ್ಶನ ಮಾಡಿ ಈ ಚಳಿಯಲ್ಲಿಯೂ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ ನಟಿ. ಮೈ ಬೆಚ್ಚಗೆ ಮಾಡುತ್ತಿದ್ದೀರಿ ಎಂದು ವಿಡಿಯೋ ನೋಡಿದ ಕಮೆಂಟಿಗರು ಕಮೆಂಟ್‌ಗಳ ಸುರಿಮಳೆಯನ್ನೇಗೈದಿದ್ದಾರೆ. 

ಅಷ್ಟಕ್ಕೂ, ಬಳಕುವ ಬಳ್ಳಿಯಂತಿರೋ ನಿವೇದಿತಾ, ಎದೆಗೆ ಪ್ಲಾಸ್ಟಿಕ್​ ಸರ್ಜರಿ ಮಾಡಿಸಿಕೊಂಡ್ರಾ ಎಂದು ಪ್ರತಿಬಾರಿಯೂ ಅವರಿಗೆ ಕಮೆಂಟ್ಸ್​ಗಳ ಸುರಿಮಳೆಯೇ ಆಗುತ್ತಿದೆ. ಈ ಬಾರಿಯೂ ಅದೇ ರೀತಿ ಕೇಳಲಾಗುತ್ತಿದೆ. ಮಾತ್ರವಲ್ಲದೇ ಅತ್ಯಂತ ಅಶ್ಲೀಲ ಎನ್ನುವಂಥ ಕಮೆಂಟ್‌ಗಳ ಸುರಿಮಳೆಯೂ ತಪ್ಪಿದ್ದಲ್ಲ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ನಟಿ ಧಾರಾಳವಾಗಿ ದೇಹ ಪ್ರದರ್ಶನ ಮಾಡುತ್ತಲೇ ರೀಲ್ಸ್​ ಮಾಡುತ್ತಿರುವ ಕಾರಣ, ತೀರಾ ಕೆಟ್ಟದಾಗಿರೋ ಕಮೆಂಟ್ಸ್​ ಜಾಸ್ತಿಯಾಗುತ್ತಿವೆ. ಇದೇ ಕಾರಣಕ್ಕೆ ಚಂದನ್​ ಶೆಟ್ಟಿ ಡಿವೋರ್ಸ್​ ಪಡೆದುಕೊಂಡದ್ದು, ರೀಲ್ಸ್ ಮಾಡುವುದಕ್ಕಾಗಿಯೇ ವಿಚ್ಛೇದನ ಪಡೆದ ಮೊದಲ ಮಹಿಳೆ... ಹೀಗೆ ಏನೇನೋ ಕಮೆಂಟ್ಸ್​ ಮಾಡಿ ನಿವೇದಿತಾರ ತೇಜೋವಧೆ ಮಾಡಲಾಗುತ್ತಿದೆ. ಡಿವೋರ್ಸ್ ಬಳಿಕ ಈಕೆಯನ್ನು ಸುಮ್ಮನೆ ಇರಲು ಬಿಡುತ್ತಲೇ ಇಲ್ಲ, ಸದಾ ಟ್ರೋಲ್​ ಮಾಡುತ್ತಲೇ ಕಾಲ ಕಳೆಯುತ್ತಿದ್ದಾರೆ ನೆಟ್ಟಿಗರು. ಆದರೆ ಇದ್ಯಾವುದಕ್ಕೂ ಇದುವರೆಗೆ ನಿವೇದಿತಾ ತಲೆ ಕೆಡಿಸಿಕೊಂಡವರೇ ಅಲ್ಲ!

ಆಗ ಬೆಡ್‌ರೂಮ್‌, ಈಗ ಬಾತ್‌ರೂಮ್‌! ಫ್ರೆಂಡ್ ಜೊತೆ ನಿವೇದಿತಾ ಖುಲ್ಲಂ ಖುಲ್ಲಾ ವಿಡಿಯೋಗೆ ನೆಟ್ಟಿಗರು ಶಾಕ್‌...

ಮೊದಲೇ ಹೇಳಿದಂತೆ, ನಟಿ ಈಚೆಗೆ,  ಸ್ನೇಹಿತೆಯ ಜೊತೆ ರೀಲ್ಸ್‌ ಮಾಡುತ್ತಿದ್ದಾರೆ.  ಒಮ್ಮೆ ಬಾತ್‌ರೂಮ್‌ನಲ್ಲಿ, ಇನ್ನೊಮ್ಮೆ ಬೆಡ್‌ರೂಮ್‌ನಲ್ಲಿ... ಹೀಗೆ  ಈ ಇಬ್ಬರು ಸ್ನೇಹಿತೆಯರು  ಮೈಚಳಿ ಬಿಟ್ಟು ಡಾನ್ಸ್‌ ಮಾಡುತ್ತಿರುತ್ತಾರೆ.  ಇಲ್ಲಿಯವರೆಗೆ ಡೀಸೆಂಟ್‌ ಬಟ್ಟೆ ಧರಿಸುತ್ತಿದ್ದ ಅವರ ಸ್ನೇಹಿತೆ ಕೂಡ ನಿವೇದಿತಾ ಹಾದಿಯನ್ನೇ ಹಿಡಿದಿರುವ ಕಾರಣ ಕಮೆಂಟಿಗರು ನಾಲಿಗೆ ಹರಿಬಿಡುತ್ತಿದ್ದಾರೆ.  ಕೆಲ ದಿನಗಳ ಹಿಂದೆ ಇದೇ ಸ್ನೇಹಿತೆ ಜೊತೆ ಬೆಡ್​ರೂಮ್​ನಲ್ಲಿ ನಿವೇದಿತಾ ತುಂಟಾಟವಾಡಿದ್ದರು. ಸುಮ್ಮನೇ ಸ್ನೇಹಿತೆಯನ್ನು ಅಪ್ಪಿಕೊಂಡಿದ್ದರು. ಇಬ್ಬರೂ ಸ್ನೇಹಿತೆಯರು ತುಂಬಾ ಕ್ಲೋಸ್​​ ಫ್ರೆಂಡ್ಸ್​ ರೀತಿಯಲ್ಲಿ ನಗುತ್ತಿದ್ದಾರೆ. ಆದರೆ ಇದಕ್ಕೂ ನೆಟ್ಟಿಗರು ಸುಮ್ಮನೇ ಬಿಟ್ಟಿಲ್ಲ. ಬೆಡ್​ರೂಮ್​ನಲ್ಲಿ ಈ ಪರಿಯ ಚೆಲ್ಲಾಟ ಮಾಡಿದ್ರೆ ಇದನ್ನು ಏನು ಅಂದುಕೊಳ್ಳಬೇಕು ಎಂದು ಪ್ರಶ್ನಿಸಿದ್ರು. ಅದರಲ್ಲಿಯೂ ನಿವೇದಿತಾ ಸ್ನೇಹಿತೆಯ ಬಟ್ಟೆಯ ಬಟನ್​ ಬಿಚ್ಚುವಂತೆ ಮಾಡಿದ್ದು, ಇದಕ್ಕೆ ಸಕತ್​ ನೆಗೆಟಿವ್​ ಕಮೆಂಟ್ಸ್​ ಬಂದಿತ್ತು.  ಇನ್ನು ಕೆಲವರು ಇಬ್ಬರು ಸ್ನೇಹಿತೆಯರು ಸುಮ್ಮನೇ ಎಂಜಾಯ್​ ಮಾಡಬಾರದಾ? ಅದಕ್ಕೂ ಕೆಟ್ಟ ಕಮೆಂಟ್ಸ್​ ಯಾಕೆ ಎಂದು ಕಮೆಂಟ್ಸ್​ ಹಾಕುತ್ತಿರುವವರ ವಿರುದ್ಧ ಕಿಡಿ ಕಾರಿದ್ದೂ ಇದೆ.


 ಅಂದಹಾಗೆ, ಈ ಸ್ನೇಹಿತೆಯ ಹೆಸರು  ವಾಣಿ ಜಿ.ಎಸ್​.   ಈ ಹೊಸ ಗೆಳತಿ ಯಾರು ಎಂಬ ಬಗ್ಗೆ ಅಭಿಮಾನಿಗಳು ತಡಕಾಡುತ್ತಿದ್ದಾರೆ.  ವಾಣಿ ಅವರು ಕೂಡ ಸೋಷಿಯಲ್​ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ಅವರು ಇನ್​ಸ್ಟಾಗ್ರಾಮ್​ನಲ್ಲಿ ಇದಾಗಲೇ ಹಲವಾರು ರೀಲ್ಸ್​ ಮಾಡಿ ಶೇರ್​ ಮಾಡಿದ್ದಾರೆ. ಅಷ್ಟಕ್ಕೂ,  ವಿಚ್ಛೇದನದ ಬಳಿಕ,  ನಿವೇದಿತಾ ಮೇಲೆ ಕೋಪ ಮಾಡಿಕೊಳ್ಳುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಪತಿ ಚಂದನ್​  ಶೆಟ್ಟಿ ಅವರಿಂದ ನಿವೇದಿತಾ ವಿಚ್ಛೇದನ ಪಡೆದ ಮೇಲೆ ಬಹುತೇಕ ಎಲ್ಲರೂ ನಿವೇದಿತಾ ಅವರನ್ನೇ ದೂರುತ್ತಿದ್ದಾರೆ. 

ಮೈಮರೆತು ದುಪ್ಪಟ್ಟಾ ಮೇಲೆ ಕುಳಿತ ನಟಿ ಸೋನಲ್‌ ಮೊಂಥೆರೋ: ಮುಂದೇನಾಯ್ತು ವಿಡಿಯೋ ನೋಡಿ...

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Aadi Lakshmi Purana Serial: ವಿರುದ್ಧ ದಿಕ್ಕಿನಲ್ಲಿ ಸಾಗುವ, ಒಬ್ಬರನ್ನೊಬ್ಬರು ಕಂಡರೆ ಆಗದವ್ರು ಮದುವೆಯಾಗುವ ಕಥೆ
Lakshmi Nivasa: ಇವಳೇ ಅವಳು, ಮನೆಯಲಿ ಇಷ್ಟುದಿನ ಇದ್ದವಳು! ಸತ್ಯ ರಿವೀಲ್​ ಆಗೋಯ್ತು, ಬಾಯಿ ಬಿಡ್ತಾಳಾ ವಿಶ್ವನ ಅಮ್ಮ?