
ಬಿಗ್ ಬಾಸ್ ಸೀಸನ್-5ರ ಮೂಲಕ ಕಿರುತೆರೆ ವೀಕ್ಷಕರ ಮನಗೆದ್ದು, ಜನಪ್ರಿಯರಾದ ಸಿಂಡ್ರೆಲಾ ನಿವೇದಿತಾ ಗೌಡ ಹೊಸ ವೃತ್ತಿ ಆರಂಭಿಸುತ್ತಿದ್ದಾರೆ. ಮತ್ತೊಂದೆಡೆ ದಾಂಪತ್ಯ ಜೀವನಕ್ಕೂ ಸಜ್ಜಾಗುತ್ತಿದ್ದಾರೆ.
Rapper ಚಂದನ್ ಶೆಟ್ಟಿ- ನಿವೇದಿತಾ ಗೌಡ ಮದುವೆ ಡೇಟ್ ಫಿಕ್ಸ್!
BCA ಪದವಿ ಪಡೆದ ನಂತರ ಕೆಲ ದಿನಗಳ ಕಾಲ 'ಕಾಮಿಡಿ ಕಂಪನಿ' ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿ ಕಾಣಿಸಿಕೊಂಡ ನಿವೇದಿತಾ, ಬಳಿಕ ಗಗನ ಸಖಿಯಾಗಲು ತರಬೇತಿ ಪಡೆಯುತ್ತಿದ್ದರು. ಈಗ ಬೆಂಗಳೂರು ಏರ್‌ಪೋರ್ಟ್‌ನ ಪ್ರತಿಷ್ಠಿತ ಕಂಪನಿಯಲ್ಲಿ ಅಪರೇಷನ್ ಅಸಿಸ್ಟೆಂಟ್ ಅಗಿ ವೃತ್ತಿ ಆರಂಭಿಸಿದ್ದಾರೆ. ಏರ್ಪೋರ್ಟ್‌ನಲ್ಲಿ ಕೆಲಸ ಮಾಡಬೇಕೆಂಬ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ನಿವೇದಿತಾ ಇನ್‌ಸ್ಟಾಗ್ರಾಂನಲ್ಲಿ ಬಹಿರಂಗ ಪಡಿಸಿದ್ದಾರೆ.
ಇನ್ನು ಬಿಗ್ ಬಾಸ್ ಸೀಸನ್-5ರ ವಿನರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಫ್ರೆಬವರಿ 25-26ರಂದು ಗುರು-ಹಿರಿಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಜನವರಿ 12ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ವಿಕ್ ಮಾಡಿ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.