ನಮ್ರತಾ-ವಿನಯ್‌ ಕನಸಿಗೆ ಕೊಳ್ಳಿಯಿಟ್ಟ ಸ್ನೇಹಿತ್‌; ಕ್ಯಾಪ್ಟನ್ ಹೀಗೂ ಮಾಡಬಹುದಾ!?

Published : Dec 08, 2023, 12:34 PM ISTUpdated : Dec 08, 2023, 02:18 PM IST
ನಮ್ರತಾ-ವಿನಯ್‌ ಕನಸಿಗೆ ಕೊಳ್ಳಿಯಿಟ್ಟ ಸ್ನೇಹಿತ್‌; ಕ್ಯಾಪ್ಟನ್ ಹೀಗೂ ಮಾಡಬಹುದಾ!?

ಸಾರಾಂಶ

ಸಂಗೀತಾ ನಾಯಕತ್ವದ ತಂಡದ ಪ್ರಕಾರ ಸ್ನೇಹಿತ್‌, ವರ್ತೂರು ಅವರ ತಂಡದ ಪರವಾಗಿ ನಿರ್ಣಯಗಳನ್ನು ನೀಡುತ್ತಿದ್ದಾರೆ. ನಮ್ರತಾ ಮತ್ತು ವಿನಯ್ ಅವರಿಂದ ಪ್ರಭಾವಿತರಾಗಿ ತಮ್ಮ ನಿರ್ಧಾರಗಳನ್ನು ಬದಲಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಲೇ ಇದ್ದವು. 

ಬಿಗ್‌ಬಾಸ್ ಮನೆ ಈ ವಾರದಲ್ಲಿ ಹಲವು ಕೋಲಾಹಲಗಳಿಗೆ, ಕೋಪ ತಾಪಗಳಿಗೆ, ಜಗಳಗಳಿಗೆ, ರೋಷಾವೇಶಗಳಿಗೆ ಸಾಕ್ಷಿಯಾಗಿದೆ. ಸಾಕ್ಷಿಯಾಗುತ್ತಿದೆ. ವಾರದ ಕೊನೆ ಸಮೀಪಿಸುತ್ತಿದ್ದಂತೆಯೇ ಮನೆಯೊಳಗಿನ ಲೆಕ್ಕಾಚಾರಗಳೂ ಬದಲಾಗುತ್ತಿವೆ. JioCinema ಬಿಡುಗಡೆ ಮಾಡಿರುವ ಬೆಳಗಿನ ಪ್ರೋಮೊ ಇಂಥದ್ದೇ ಒಂದು ಅಚ್ಚರಿಯ ಲೆಕ್ಕಾಚಾರಕ್ಕೆ ಸಾಕ್ಷಿಯಾಗಿದೆ.

ಈ ವಾರ ಮನೆಯ ಕ್ಯಾಪ್ಟನ್ ಆಗಿರುವ ಸ್ನೇಹಿತ್‌ ವಿಶೇಷ ಅಧಿಕಾರವನ್ನು ಪಡೆದಿದ್ದರು. ಆ ಅಧಿಕಾರದ ಪ್ರಕಾರ ಮನೆಯೊಳಗಿನ ಹಲವು ಸಂಗತಿಗಳ ಬಗ್ಗೆ ಅವರ ನಿರ್ಧಾರವೇ ಅಂತಿಮವಾಗಿತ್ತು. ಅಲ್ಲದೆ ಮನೆಯಲ್ಲಿ ತಂಡಗಳನ್ನು ರಚಿಸುವ, ವಾರವಿಡೀ ಬಿಗ್‌ಬಾಸ್ ನೀಡುವ ಟಾಸ್ಕ್‌ಗಳ ಉಸ್ತುವಾರಿ ವಹಿಸುವ ಜವಾಬ್ದಾರಿಯನ್ನೂ ಸ್ನೇಹಿತ್‌ಗೆ ಒಪ್ಪಿಸಲಾಗಿತ್ತು. ತಂಡವನ್ನು ರಚಿಸುವ ಹಂತದಲ್ಲಿಯೇ ಉಸ್ತುವಾರಿಯೊಂದಿಗೆ ಉಂಟಾದ ಭಿನ್ನಾಭಿಪ್ರಾಯ ವಾರವಿಡೀ ಮುಂದುವರಿಯಿತು. 

ಸಂಗೀತಾ ನಾಯಕತ್ವದ ತಂಡದ ಪ್ರಕಾರ ಸ್ನೇಹಿತ್‌, ವರ್ತೂರು ಅವರ ತಂಡದ ಪರವಾಗಿ ನಿರ್ಣಯಗಳನ್ನು ನೀಡುತ್ತಿದ್ದಾರೆ. ನಮ್ರತಾ ಮತ್ತು ವಿನಯ್ ಅವರಿಂದ ಪ್ರಭಾವಿತರಾಗಿ ತಮ್ಮ ನಿರ್ಧಾರಗಳನ್ನು ಬದಲಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಲೇ ಇದ್ದವು. ಆದರೆ ವಾರಾಂತ್ಯದಲ್ಲಿ ಬಿಗ್‌ಬಾಸ್‌, ಸ್ನೇಹಿತ್‌ಗೆ ಮತ್ತೊಂದು ಜವಾಬ್ದಾರಿ ವಹಿಸಿದ್ದಾರೆ. ‘ಮನೆಯ ಸದಸ್ಯರ ಪೈಕಿ ಕ್ಯಾಪ್ಟನ್ ಪಟ್ಟಕ್ಕೆ ಸ್ಪರ್ಧಿಸಲು ಅನರ್ಹರಾದ ಸದಸ್ಯರನ್ನು ಸೂಚಿಸಿ’ ಎಂದು ಬಿಗ್‌ಬಾಸ್ ಕೇಳಿದ್ದಾರೆ. 

ಜೀವನದ ಬಹುದೊಡ್ಡ ಗುಟ್ಟನ್ನು ರಟ್ಟು ಮಾಡಿದ ನಟಿ ಪ್ರಿಯಾಂಕಾ ಚೋಪ್ರಾ!

ಇದಕ್ಕೆ ಎಲ್ಲರೂ ಅಚ್ಚರಿ ಪಡುವಂತೆ ಸ್ನೇಹಿತ್ ನಾಮಿನೇಟ್ ಮಾಡಿದ್ದಾರೆ. ಅವರು ನಾಮಿನೇಟ್ ಮಾಡಿದ ಎರಡು ಮುಖ್ಯ ಸದಸ್ಯರೆಂದರೆ, ನಮ್ರತಾ ಮತ್ತು ವಿನಯ್!
ಇದಕ್ಕೆ ಅವರು ಕೊಟ್ಟ ಕಾರಣ, ‘ವಿನಯ್ ಮತ್ತು ನಮ್ರತಾ ಇಬ್ಬರೂ ಉಸ್ತುವಾರಿಯಾದ ನನ್ನ ಮಾತುಗಳನ್ನು ಮೀರಿದ್ದಾರೆ’ ಎಂಬುದು. ತಮ್ಮನ್ನು ಖಂಡಿತ ಕ್ಯಾಪ್ಟನ್ಸಿ ಟಾಸ್ಕ್‌ನಿಂದ ಹೊರಗಿಡುವುದಿಲ್ಲ ಎಂದೇ ನಂಬಿದ್ದ ವಿನಯ್‌ ಮತ್ತು ನಮ್ರತಾ ಇಬ್ಬರಿಗೂ ಸ್ನೇಹಿತ್‌ ಮಾತು ಕೇಳಿ ಆಘಾತವಾಗಿದೆ. ‘ಇವ್ನೆಂತಾ ಫ್ರೆಂಡ್‌’ ಎಂದು ನಮ್ರತಾ ಕಣ್ಣಲ್ಲಿ ನೀರು ತುಂಬಿಕೊಂಡಿದ್ದಾರೆ ಕೂಡ. 

ರಕ್ಕಸರು ಗಂಧರ್ವರ ಮೇಲೆ ದಾಳಿ ಮಾಡುತ್ತಿದ್ದಾರೆ; ಸೋತು ಶರಣಾದರಾ ಗಂಧರ್ವರು!

ಮತ್ತೂ ಯಾರು ಯಾರನ್ನೆಲ್ಲ ಸ್ನೇಹಿತ್ ಕ್ಯಾಪ್ಟನ್ಸಿ ಟಾಸ್ಕ್‌ನಿಂದ ಹೊರಗಿಟ್ಟಿದ್ದಾರೆ? ಕೊನೆಗೆ ಮನೆಯ ಕ್ಯಾಪ್ಟನ್ ಆಗುವುದು ಯಾರು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಲು ಕಾದು ನೋಡಬೇಕಷ್ಟೆ. ಅಂದಹಾಗೆ, ಬಿಗ್ ಬಾಸ್‌ ಮನೆಯಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ತಿಳಿಯಲು 'JioCinema'ದಲ್ಲಿ ಪ್ರಕಟವಾಗುತ್ತಿರುವ ಬಿಗ್‌ಬಾಸ್ ಕನ್ನಡ ನೇರಪ್ರಸಾರವನ್ನು ವೀಕ್ಷಿಸಬಹುದು. ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಬಹುದು. ಪ್ರತಿದಿನದ ಎಪಿಸೋಡ್‌ಗಳನ್ನು Colors Kannada ದಲ್ಲಿ ರಾತ್ರಿ 9.30ಕ್ಕೆ, ಶನಿವಾರ-ಭಾನುವಾರ ರಾತ್ರಿ 9.00 ಕ್ಕೆ  ವೀಕ್ಷಿಸಬಹುದು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

'ದೃಷ್ಟಿಬೊಟ್ಟು' ಮೂಲಕ ಕನ್ನಡಿಗರ ಮನಗೆದ್ದ ಅರ್ಪಿತಾ ಮೋಹಿತೆ ಈಗ ತೆಲುಗು ಸೀರಿಯಲ್ ನಾಯಕಿ
Bigg Bossನಲ್ಲಿ 10 ಪಟ್ಟು ಹೆಚ್ಚು ಸಂಭಾವನೆ ಸಿಕ್ಕಿದ್ದು ನಿಜ: ರಜತ್, ಚೈತ್ರಾ​ ಕುಂದಾಪುರ ರಿವೀಲ್​ ಮಾಡಿದ್ದೇನು?