ಗನ್​ಗಿಂತ ಹೆಚ್ಚು ಜನ್ರನ್ನ ಕಣ್ಣಲ್ಲೇ ಹೆದ್ರಿಸಿದ್ದೀನಿ ಅನ್ನುತ್ತಲೇ ಭರ್ಜರಿ ಎಂಟ್ರಿ ಕೊಟ್ಟ ಶಿವಣ್ಣ- ಸ್ಟೇಜಲ್ಲಿ ಮಿಂಚು

Published : Nov 12, 2023, 03:34 PM IST
ಗನ್​ಗಿಂತ ಹೆಚ್ಚು ಜನ್ರನ್ನ ಕಣ್ಣಲ್ಲೇ ಹೆದ್ರಿಸಿದ್ದೀನಿ ಅನ್ನುತ್ತಲೇ ಭರ್ಜರಿ ಎಂಟ್ರಿ ಕೊಟ್ಟ ಶಿವಣ್ಣ- ಸ್ಟೇಜಲ್ಲಿ ಮಿಂಚು

ಸಾರಾಂಶ

ಜೀ ಕುಟುಂಬ ಅವಾರ್ಡ್​ ಕಾರ್ಯಕ್ರಮದಲ್ಲಿ ಸೆಂಚುರಿ ಸ್ಟಾರ್​ ಶಿವರಾಜ್​ ಕುಮಾರ್​ ಅವರು ಭರ್ಜರಿ ಡ್ಯಾನ್ಸ್​ ಮಾಡಿದ್ದು, ಅದರ ವಿಡಿಯೋ ಸಕತ್​ ವೈರಲ್​ ಆಗುತ್ತಿದೆ.  

ನೀವ್​ ಗನ್​ನಲ್ಲಿ ಎಷ್ಟು ಜನರನ್ನು ಹೆದರಿಸಿದ್ದೀರೋ, ಅದಕ್ಕಿಂತ ಹೆಚ್ಚಿನ ಜನರನ್ನು ನಾನು ಕಣ್ಣಲ್ಲಿ ಹೆದರಿಸಿದ್ದೇನೆ ಎನ್ನುತ್ತಲೇ ಜೀ ಕುಟುಂಬ ಅವಾರ್ಡ್​ ವೇದಿಕೆ ಮೇಲೆ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ ನಟ ಶಿವರಾಜ್​ ಕುಮಾರ್. ಘೋಸ್ಟ್​ ಚಿತ್ರದ ಡೈಲಾಗ್​ಗೆ ಅಲ್ಲಿದ್ದ ಪ್ರೇಕ್ಷಕರು ಜೋರಾಳಿ ಶಿಳ್ಳೆ ಹಾಕಿದ್ದಾರೆ. ದೆ ಕಾಲ್​ ಮಿ ಓ.ಜಿ ಅಂದ್ರೆ ಒರಿಜಿನಲ್​ ಗ್ಯಾಂಗ್​ಸ್ಟರ್​ ಎನ್ನುವ ಹಾಡಿನ ಹಿನ್ನೆಲೆಯಲ್ಲಿ ಶಿವಣ್ಣ ಭರ್ಜರಿ ಸ್ಟೆಪ್​  ಹಾಕುತ್ತಿದ್ದಂತೆಯೇ ವೇದಿಕೆ ಮೇಲೆ ಮಿಂಚು ಸೃಷ್ಟಿಯಾಗಿದೆ. ಈ ಕಾರ್ಯಕ್ರಮದ ಪ್ರಸಾರ ನವೆಂಬರ್​ 11ರಂದು ನಡೆದಿದ್ದು, ಅದರ ಪ್ರೊಮೋ ಸಕತ್​ ವೈರಲ್​ ಆಗುತ್ತಿದೆ. ಅಂದಹಾಗೆ, ಈ ರೀತಿ ಭರ್ಜರಿ ಡ್ಯಾನ್ಸ್​ ಮಾಡಿದ್ದು, ಜೀ ಕನ್ನಡ ವಾಹಿನಿ ನವೆಂಬರ್​ 10 ಮತ್ತು 11ರಂದು ನಡೆಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ. ಇದರಲ್ಲಿ ಜೀ ವಾಹಿನಿಯ ಸೀರಿಯಲ್​ ನಟ-ನಟಿಯರು ಹಾಗೂ  ತಂತ್ರಜ್ಞರು ಸೇರಿದಂತೆ ಧಾರಾವಾಹಿಯ ತೆರೆ ಮರೆಯಲ್ಲಿ ಶ್ರಮಿಸಿರುವವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲು ಸಿನಿ ಕ್ಷೇತ್ರದ ದಿಗ್ಗಜರನ್ನು ಕರೆಸಲಾಗಿತ್ತು. ಅವರಲ್ಲಿ ಒಬ್ಬರು ಶಿವರಾಜ್​  ಕುಮಾರ್​. ಅತಿಥಿಯಾಗಿ ಬಂದಿದ್ದ ಕಲಾವಿದರು ಕೂಡ ವೇದಿಕೆಯ ಮೇಲೆ ಪ್ರದರ್ಶನ ಮಾಡಿದ್ದರು. ಇತ್ತೀಚಿಗಷ್ಟೇ ಬಿಡುಗಡೆಯಾಗಿರುವ ಘೋಸ್ಟ್​ ಚಿತ್ರದ ಹಾಡಿಗೆ ಭರ್ಜರಿ ಸ್ಟೆಪ್​ ಹಾಕಿದ್ರು. 

ಘೋಸ್ಟ್​ ಚಿತ್ರದ ಬಗ್ಗೆ ಹೇಳುವುದಾರೆ, ಇದು ಕಳೆದ ಅಕ್ಟೋಬರ್​ 19ರಂದು ರಿಲೀಸ್​ ಆಗಿದೆ.  ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಕರ್ನಾಟಕ ಸೇರಿದಂತೆ ಇಡೀ ಭಾರತದ ಹಲವು ಕಡೆ ರಿಲೀಸ್ ಆಗಿ ಸಕ್ಸಸ್ ಪ್ರದರ್ಶನ ಕಾಣುತ್ತಿದೆ. ಘೋಸ್ಟ್ ಸಿನಿಮಾದಲ್ಲಿ ನಟ ಶಿವಣ್ಣ ನಾಯಕರಾಗಿ ನಟಿಸಿದ್ದಾರೆ. ಬಾಲಿವುಡ್ ನಟ ಅನುಪಮ್ ಖೇರ್ ಪ್ರಮುಖ ಪಾತ್ರವೊಂದಲ್ಲಿ ಕಾಣಿಸಿಕೊಂಡಿದ್ದಾರೆ.  ಸದ್ಯ ಕನ್ನಡದ ಸೆಂಚುರಿ ಸ್ಟಾರ್  ಶಿವಣ್ಣ ಅವರ ಘೋಸ್ಟ್ ಹವಾ ರಾಜ್ಯದ ತುಂಬ ವ್ಯಾಪಿಸಿದೆ.

ಅತ್ತೆಯನ್ನು ಸಕತ್​ ಇಂಪ್ರೆಸ್​ ಮಾಡೋದು ಹೇಗೆ? ಶ್ರೀಮಸ್ತು ಶುಭಮಸ್ತು ಸೊಸೆ ಸಿರಿ ಹೇಳಿದ್ದಾರೆ ಕೇಳಿ...
 
ಎಂ ಜಿ ಶ್ರೀನಿ ನಿರ್ದೇಶನದ ಘೋಸ್ಟ್‌ ಸಿನಿಮಾವನ್ನು ಎರಡೇ ವಾಕ್ಯಗಳಲ್ಲಿ ವಿವರಿಸಬಹುದು: ಪ್ರತಿಯೊಂದು ಕ್ರಿಯೆಗೂ ಅದನ್ನು ಮಾಡುವವರಿಗೂ ಗೊತ್ತಿಲ್ಲದ ಕಾರಣವೊಂದು ಇದ್ದೇ ಇರುತ್ತದೆ. ನಾಯಕನಾದವನು ಮಿಕ್ಕವರಿಂದ ತನಗೇನು ಬೇಕೋ ಅದನ್ನು ಮಾಡಿಸಬೇಕೇ ಹೊರತು, ಅದನ್ನು ಅವರು ಯಾಕೆ ಮಾಡಬೇಕು ಎಂದು ಹೇಳಬಾರದು. ಕನ್‌ಫ್ಯೂಷನ್ನೇ ಇಲ್ಲ ಮತ್ತು ಕನ್‌ಫ್ಯೂಷನ್ನೇ ಎಲ್ಲಾ. ಇತ್ತೀಚಿನ ಸಿನಿಮಾಗಳ ಚಿತ್ರಕತೆಯಂತೆ ಶ್ರೀನಿ ಕೂಡ ಅತ್ಯಂತ ಕಾಂಪ್ಲಿಕೇಟೆಡ್‌ ಆದ ಚಿತ್ರಕತೆಯೊಂದನ್ನು ಹೆಣೆದಿದ್ದಾರೆ. ಅದನ್ನು ಪೂರ್ತಿ ಅರ್ಥಮಾಡಿಕೊ‍ಳ್ಳಬೇಕಿದ್ದರೆ ಗದ್ದೆ ಬಯಲನ್ನು ಡ್ರೋನ್ ಹಾಕಿಕೊಂಡು ನೋಡಬೇಕು. ಈ ವಾಕ್ಯದ ಅರ್ಥವೇನು ಎಂದು ತಿಳಿಯಲು   ಸಿನಿಮಾ ನೋಡಬೇಕು. ಸಿನಿಮಾ ನೋಡಿದ ನಂತರವೂ ಡ್ರೋನ್‌ನಲ್ಲಿ ಕಂಡ ಕಟ್ಟಡದ ನಕ್ಷೆ, ಘೋಸ್ಟ್‌ಗೆ ಹೇಗೆ ಗೊತ್ತಾಗುತ್ತದೆ ಎಂಬುದು ಥಟ್ಟನೆ ತಿಳಿಯುವುದಿಲ್ಲ. ಶ್ರೀನಿ ಏಕಕಾಲಕ್ಕೆ ಪಾತ್ರಗಳಿಗೂ ನೋಡುಗರಿಗೂ ಸವಾಲು ಒಡ್ಡುತ್ತಾ ಹೋಗುತ್ತಾರೆ. ಪರಿಸ್ಥಿತಿಯನ್ನು ನಿಗೂಢವಾಗಿಸುತ್ತಾ, ಮತ್ತೆ ತಿಳಿಯಾಗಿಸುತ್ತಾ, ಸುಮ್ಮನೆ ನನ್ನ ಹಿಂದೆ ಬನ್ನಿ ಎಂದು ಬಚ್ಚಿಟ್ಟ ನಿಧಿಯೊಂದನ್ನು ತೋರಿಸಲು ಕರೆದೊಯ್ಯುವ ಕಾಪಾಲಿಕನಂತೆ ಮುಂದೆ ಸಾಗುತ್ತಾರೆ. ಪ್ರೇಕ್ಷಕನ ಕೆಲಸ ಇಷ್ಟೇ: ನಿರ್ದೇಶಕನನ್ನು ಕಣ್ಮುಚ್ಚಿಕೊಂಡು ಹಿಂಬಾಲಿಸುವುದು.

ಒಂದು ಬಹುಸಮುಚ್ಛಯವುಳ್ಳ ಜೈಲು. ಅದರೊಳಗೆ ನುಗ್ಗುವ ಉಗ್ರರು. ಅವರ ಅಂಕಿತದಲ್ಲಿರುವ ಕೈದಿಗಳು. ಅವರ ಪೈಕಿ ಒಬ್ಬನ ಹುಡುಕಾಟದಲ್ಲಿರುವ ನಾಯಕ. ಅಲ್ಲಿ ಬಚ್ಚಿಡಲಾಗಿದೆ ಎಂದು ಊಹಿಸಲಾದ ಬಂಗಾರದ ಗಟ್ಟಿ, ಅದರ ಹಿಂದೊಂದು ಕರುಣಾಜನಕ ಕತೆ, ಆ ಕತೆಯ ಹಿಂದೊಬ್ಬ ಮಹಾನ್ ಗ್ಯಾಂಗ್‌ಸ್ಟರ್‌- ಹೀಗೆ ಶ್ರೀನಿ ಹೆಣೆಯುವ ಕತೆಯೊಳಗೆ ಹತ್ತಾರು ಕತೆಗಳು ಸೇರಿಕೊಂಡಿವೆ. ಇಂಥ ಸಿನಿಮಾಗಳ ಸದ್ಗುಣ ಎಂದರೆ ಅವು ನಮ್ಮನ್ನು ಆಲೋಚನೆ ಮಾಡಲು ಬಿಡುವುದಿಲ್ಲ. ಕಿವಿಗೆ ಅಪ್ಪಳಿಸುವ ಸದ್ದು ಮತ್ತು ಧಗಧಗನೆ ಉರಿಯವ ಸ್ಕ್ರೀನು, ಅಲ್ಲಿ ಆಗೀಗ ಚಿಮ್ಮುವ ಗುಂಡು, ಸಿಡಿಯುವ ಕೆಂಡದುಂಡೆ, ಸದ್ದು ಮಾಡುವ ಟೆಲಿಫೋನು, ವಿಕಾರವಾಗಿ ಓಡಾಡಿಕೊಂಡಿರುವ ಪಾತ್ರಧಾರಿಗಳು- ಎಲ್ಲವೂ ನಮ್ಮನ್ನು ನಮಗೆ ಗೊತ್ತೇ ಇಲ್ಲದ ಒಂದು ಲೋಕಕ್ಕೆ ಒಯ್ಯುತ್ತವೆ. ಚಿತ್ರದಲ್ಲಿ ನಾಯಕ ಮೊಲ ಮತ್ತು ಆಮೆಯ ಕತೆ ಹೇಳಿಸುತ್ತಾನೆ. ಕೊನೆಗೂ ಓಟದಲ್ಲಿ ಗೆಲ್ಲುವುದು ಆಮೆಯೋ ಮೊಲವೋ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಗುವುದಿಲ್ಲ. ಎಲ್ಲವೂ ಮುಕ್ತಾಯವಾಯಿತು ಅನ್ನುವ ಹೊತ್ತಿಗೆ, ಸತ್ತುಬಿದ್ದ ರಾವಣ ಎದ್ದುಕೂತಂತೆ ಮತ್ತೊಂದು ಕತೆ ಶುರುವಾಗುತ್ತದೆ. ಅದು ಎರಡನೆಯ ಭಾಗಕ್ಕೆ ಮುನ್ನುಡಿ. ಶ್ರೀನಿ ಈ ಮಹಾಯಾನಕ್ಕೆ ಮಹೇಂದ್ರ ಸಿಂಹ ಜತೆಯಾಗಿದ್ದಾರೆ. ಎಷ್ಟು ಬೇಕೋ ಅಷ್ಟನ್ನು ಎಷ್ಟು ಸಮರ್ಥವಾಗಿ ತೋರಿಸಬೇಕೋ ಅಷ್ಟು ಅಚ್ಚುಕಟ್ಟಾಗಿ ತೋರಿಸಿದ್ದಾರೆ. ಅರ್ಜುನ್ ಜನ್ಯ ಕಿವಿಗಡಚಿಕ್ಕುವ ಹಿನ್ನೆಲೆ ಸಂಗೀತ ನೀಡಿ ನಮ್ಮ ಥಿಂಕಿಂಗ್‌ ಟೈಮ್‌ನ್ನು ಶೂನ್ಯ ಮಾಡುತ್ತಾರೆ. 
 

ಅವಳ ಡ್ರೆಸ್ಸು, ಆಭರಣ ಇಷ್ಟ ಆಗಲ್ಲ: ಸೀತಾರಾಮದ ವಿಲನ್​ ಭಾರ್ಗವಿಯ ಅಮ್ಮ ಗಿರಿಜಾ ಲೋಕೇಶ್​ ಹೇಳಿದ್ದೇನು?

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಏನೂ ಮಾಡದೆ ಸ್ಪಂದನಾ ಸೋಮಣ್ಣ Bigg Boss ಮನೇಲಿ ಇರೋದು ಹೇಗೆ? ಕಿಚ್ಚ ಸುದೀಪ್‌ ಬಿಚ್ಚಿಟ್ಟ ಸತ್ಯ ಏನು?
Bigg Boss: ದುಷ್ಮನ್‌ಗೂ ಯಾರೂ ಹೀಗೆ ಮಾಡಲ್ಲ- ಕೊನೆಗೂ ರಿವೀಲ್‌ ಆಯ್ತು ರಘು ದ್ವೇಷದ ಕಾರಣ