
ಕಿರುತೆರೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಬೆಸ್ಟ್ ಕೊರಿಯೋಗ್ರಾಫರ್ ಆಗಿ ಗುರುತಿಸಿಕೊಂಡಿರುವ ಮುರುಗಾನಂದ ನಟಿ ಇಷಿತಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ, ಇದೇ ಮೊದಲ ಬಾರಿಗೆ ಕಿರುತೆರೆ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅನ್‌ಸ್ಕ್ರೀನ್ ಕಾಣಿಸಿಕೊಳ್ಳುತ್ತಿದ್ದಂತೆ ಮುರುಗಾ ಅವರಿಗೆ ಜನಪ್ರಿಯತೆ ಹೆಚ್ಚುತ್ತಿದೆ.
ಇದೀಗ ಬಹುಭಾಷಾ ನಟ ಕಮಲ್ ಹಾಸನ್ ಜೊತೆ ಕೆಲಸ ಮಾಡುವುದಕ್ಕೆ ಅವರಿಗೆ ಅವಕಾಶ ಸಿಕ್ಕಿದೆ, ಎಂದು ಸ್ವತಃ ಮುರುಗಾ ಅವರು ಬರೆದು ಕೊಂಡಿದ್ದಾರೆ. ಕಮಲ್ ಪಕ್ಕದಲ್ಲಿ ನಿಂತಿರುವ ಫೋಟೋ ಹಂಚಿಕೊಂಡು 'ವಿಕ್ರಂ ಸಿನಿಮಾಗೋಸ್ಕರ ಕಮಲ್ ಹಾಸನ್ ಅವರ ಜೊತೆ ಕೆಲಸ ಮಾಡುತ್ತಿದ್ದೀನಿ. ತುಂಬಾ ಖುಷಿ, ಉತ್ಸುಕತೆ ಇದೆ,' ಎಂದು ಬರೆದುಕೊಂಡಿದ್ದಾರೆ. ಕಿರುತೆರೆ ನಟಿಯರು ಹಾಗೂ ಅಭಿಮಾನಿಗಳು ಕಾಮೆಂಟ್‌ನಲ್ಲಿ ಶುಭ ಹಾರೈಸಿದ್ದಾರೆ.
'ರಾಜಾ ರಾಣಿ' ಶೋ ಮೂಲಕ ವೀಕ್ಷಕರಿಗೆ ಹತ್ತಿರವಾಗುತ್ತಿರುವ ಮುರುಗಾನಂದ ಹಾಗೂ ಇಷಿತಾ ಅತಿ ಹೆಚ್ಚು ಮನೋರಂಜನೆ ನೀಡುತ್ತಿರುವ ಜೋಡಿಗಳಾಗಿದ್ದು, ಒಂದು ವಾರ ಬೆಸ್ಟ್ ರಾಜಾ ರಾಣಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಇವರಿಬ್ಬರು ಎಂಗೇಜ್‌ಮೆಂಟ್ ಮಾಡಿಕೊಂಡು ಎರಡು ವರ್ಷಗಳ ಆ್ಯನಿವರ್ಸರಿಯನ್ನೂ ಆಚರಿಸಿಕೊಂಡಿದ್ದಾರೆ. ರೊಮ್ಯಾಂಟಿಕ್ ಆಗಿರುವ ಫೋಟೋವೊಂದನ್ನು ಹಂಚಿ ಕೊಂಡಿದ್ದಾರೆ. ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ ಇಷಿತಾ ಬಣ್ಣದ ಲೋಕದಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದರು. ರಿಯಾಲಿಟಿ ಶೋ ಮೂಲಕ ಕಮ್ ಬ್ಯಾಕ್ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.