ಶಾಕಿಂಗ್ ನ್ಯೂಸ್: ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್ ಪೂಜಾರಿ ನಿಧನ

Published : May 12, 2025, 07:11 AM ISTUpdated : May 12, 2025, 07:31 AM IST
ಶಾಕಿಂಗ್ ನ್ಯೂಸ್: ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್ ಪೂಜಾರಿ ನಿಧನ

ಸಾರಾಂಶ

ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ ರಾಕೇಶ್ ಪೂಜಾರಿ ವಿಧಿವಶರಾಗಿದ್ದಾರೆ. ಅವರು ಕಳೆದ ರಾತ್ರಿ  ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. 

ಉಡುಪಿ (ಮೇ.12): ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ ರಾಕೇಶ್ ಪೂಜಾರಿ ವಿಧಿವಶರಾಗಿದ್ದಾರೆ. ಅವರು ಕಳೆದ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ನಿನ್ನೆಯಷ್ಟೇ ಕಾಂತಾರ ಪ್ರಿಕ್ವೆಲ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ರಾಕೇಶ್, ಖಾಸಗಿ ಕಾರ್ಯಕ್ರಮವೊಂದರಲ್ಲಿ ನಿನ್ನೆಯೇ ಪಾಲ್ಗೊಂಡಿದ್ದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿದೆ. ಲೋ ಬಿಪಿಯಿಂದ ಸಹ ಸಮಸ್ಯೆ ಕಾಣಿಸಿಕೊಂಡಿತ್ತು ಎಂಬ ಮಾಹಿತಿ ಇದೆ. 

ಸುಸ್ತು ಅಂತ ಸ್ನೇಹಿತರ ಬಳಿ ಹೇಳಿದಾಗ ತಕ್ಷಣ ರಾಕೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದರು ಎಂಬ ಮಾಹಿತಿಯನ್ನು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಮಧ್ಯರಾತ್ರಿ 1 ಗಂಟೆಗೆ ಇಹಲೋಕ ತ್ಯಜಿಸಿರೋ ರಾಕೇಶ್, ಕೊನೆಯದಾಗಿ ದಸ್ತಕ್ ಸಿನಿಮಾದ ಪ್ರೀಮಿಯರ್ ಶೋ ನಲ್ಲಿ ಭಾಗಿಯಾಗಿದ್ರು. ಅಲ್ಲದೇ ಇತ್ತಿಚೆಗಷ್ಟೇ ಆಕ್ಸಿಡೆಂಟ್ ಆಗಿತ್ತು, ಹೆಲ್ತ್ ಇಶ್ಯೂ ಇರಲಿಲ್ಲ ಎಂದು ತಿಳಿದು ಬಂದಿದೆ. ಸದ್ಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. 

ಹೂಡೆ ನಿವಾಸಿಗಳಾದ ದಿನಕರ್ ಪೂಜಾರಿ ಮತ್ತು ಶಾಂಭವಿ ದಂಪತಿಗಳ ಪುತ್ರ ರಾಕೇಶ್ ಪೂಜಾರಿ. ಇವರು ತಮ್ಮ ಶಾಲಾ ಶಿಕ್ಷಣವನ್ನು ಕೆಮ್ಮಣ್ಣು ಕಾರ್ಮೆಲ್ ಹೈಸ್ಕೂಲ್ ಮತ್ತು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಪಡೆದಿದ್ದಾರೆ. ರಾಕೇಶ್ ಮಂಗಳೂರಿನ ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ಕಡ್ಲೆ ಬಜಿಲ್ ತುಳು ಕಾರ್ಯಕ್ರಮದಲ್ಲಿ ನಟಿಸಿದ್ದರು. ಅವರು ಪೈಲ್ವಾನ್, ಇದು ಎಂತ ಲೋಕವಯ್ಯ ಕನ್ನಡದಲ್ಲಿ ಮತ್ತು ಪೆಟ್ಕಮ್ಮಿ, ಅಮ್ಮೆರ್ ಪೊಲೀಸ್, ಪಮ್ಮನ್ನೆ ದಿ ಗ್ರೇಟ್, ಉಮಿಲ್ ಮತ್ತು ಇಲ್ಲೊಕ್ಕೆಲ್ ತುಳುವಿನಲ್ಲಿ ನಾಟಕಗಳು, ಸ್ಕಿಟ್‌ಗಳು ಮತ್ತು ಚಲನಚಿತ್ರಗಳಲ್ಲಿಯೂ ನಟಿಸಿದ್ದಾರೆ. ಅವರು ಬಲೆ ತೆಲಿಪಾಲೆ, ಮೇ 22, ಸ್ಟಾರ್, ತೂಯಿನಾಯೆ ಪೋಯೆ ಮುಂತಾದ ಕರಾವಳಿ ರಿಯಾಲಿಟಿ ಶೋಗಳಲ್ಲಿ ಪ್ರದರ್ಶನ ನೀಡಿದ್ದಾರೆ.

ಗರ್ಭಪಾತ ಆಗಿದ್ದೇ ಗೊತ್ತಾಗಿಲ್ಲ ಮುದ್ದೆ ರೀತಿಯಲ್ಲಿ ಮಗು ಬಂದು ಬಿಡ್ತು: ನಯನಾ ಕಣ್ಣೀರು

'ಕಾಮಿಡಿ ಕಿಲಾಡಿಗಳು' ಸೀಸನ್ 3ರ ವಿಜೇತರಾಗಿ ಗಮನ ಸೆಳೆದ ರಾಕೇಶ್, ಹಾಸ್ಯಪ್ರಿಯ ವ್ಯಕ್ತಿತ್ವದಿಂದ ಅಭಿಮಾನಿಗಳ ಮನ ಗೆದ್ದಿದ್ದರು.  ಕಿರುತೆರೆಯ ಜೊತೆ ಜೊತೆಗೆ ಚಿತ್ರರಂಗದಲ್ಲೂ ಅವರು ನಟನ ಚಾತುರ್ಯ ಮೆರೆದಿದ್ದರು. ಇನ್ನು ರಾಕೇಶ್ ಅವರ ಅಗಲಿಕೆ ಕನ್ನಡ ರಂಗಭೂಮಿ ಮತ್ತು ಕಿರುತೆರೆಗೆ ಭಾರಿ ನಷ್ಟವಾಗಿದೆ. ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳು ಈ ದುಃಖದ ಸುದ್ದಿ ಕೇಳಿ ಶೋಕದಲ್ಲಿ ಮುಳುಗಿದ್ದಾರೆ. ರಾಕೇಶ್ ಪೂಜಾರಿ ಅವರ ನಿಧನದಿಂದ ಎಲ್ಲರಿಗೂ ಶಾಕ್‌ ಆಗಿದ್ದು, ಅದೇ ಕಾರ್ಯಕ್ರಮದಲ್ಲಿ ಜಡ್ಜ್ ಆಗಿದ್ದ ನಟಿ ರಕ್ಷಿತಾ ಪ್ರೇಮ್ ಅವರು ಕೂಡ 'ಮಿಸ್ ಯೂ ಮಗನೇ.. ನಾನು ಇನ್ಯಾವತ್ತೂ ನಿನ್ನ ಜೊತೆ ಮಾತನಾಡಲು ಆಗಲ್ಲ, ಕಾಮಿಡಿ ಕಿಲಾಡಿ ನನ್ನ ಹೃದಯಕ್ಕೆ ಹತ್ತಿರವಾದ ಕಾರ್ಯಕ್ರಮ. ನೀನು ಅದರಲ್ಲಿ ಒಂದು ಶಕ್ತಿ ಆಗಿದ್ದೆ. ನಿನ್ನಂತಹ ಅದ್ಭುತ ವ್ಯಕ್ತಿ ನಮ್ಮ ಹೃದಯಲ್ಲಿ ನೆಲೆಸಿರುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Lakshmi Nivasa: ಇವಳೇ ಅವಳು, ಮನೆಯಲಿ ಇಷ್ಟುದಿನ ಇದ್ದವಳು! ಸತ್ಯ ರಿವೀಲ್​ ಆಗೋಯ್ತು, ಬಾಯಿ ಬಿಡ್ತಾಳಾ ವಿಶ್ವನ ಅಮ್ಮ?
Naa Ninna Bidalaare: ಗಂಡ ಬೇರೊಬ್ಬಳನ್ನು ಅಪ್ಪಿಕೊಂಡ್ರೆ ಖುಷಿ ಪಡುವ ಜಗತ್ತಿನ ಏಕೈಕ ಹೆಂಡ್ತಿ ಈಕೆ!