ಒಂದು ಪ್ಲ್ಯಾಸ್ಟಿಕ್ ಬಾಕ್ಸ್‌ನ ಎರಡೂ ಬದಿಯಲ್ಲಿ ಹಗ್ಗಗಳಿಂದ ಕಟ್ಟಲಾಗಿದೆ. ಅದನ್ನು ಎರಡು ಸ್ಪರ್ಧಿಗಳ ಸೊಂಟಕ್ಕೆ ಬಿಗಿಯಲಾಗಿದೆ. ಅದನ್ನು ಇಟ್ಟುಕೊಂಡು ಓಡುವ ಟಾಸ್ಕ್ ಅನ್ನು ಬಿಗ್‌ಬಾಸ್ ಮನೆಯ ಸ್ಪರ್ಧಿಗಳಿಗೆ ನೀಡಿರುವಂತಿದೆ. ಈ ಟಾಸ್ಕ್‌ನಲ್ಲಿಯೇ ಪರಸ್ಪರ ತಳ್ಳಿಕೊಳ್ಳುವ, ಕಿರುಚಾಡಿಕೊಳ್ಳುವ ಸನ್ನಿವೇಶಗಳು ಸೃಷ್ಟಿಯಾಗಿವೆ.
ಬೆಳಗಿನ ಪ್ರೋಮೊದಲ್ಲಿ ತುಕಾಲಿ ಸಂತೋಷ್ ಅವರ ಹಾಸ್ಯದ ಹೊನಲಿನ ಝಲಕ್ ಕೊಟ್ಟಿದ್ದ JioCinema ಮಧ್ಯಾಹ್ನದ ಪ್ರೋಮೊದಲ್ಲಿ ಮನೆಯೊಳಗಿನ ಟಾಸ್ಕ್ ಕ್ಲ್ಯಾಶ್ ಅನ್ನು ಕಾಣಿಸಿದೆ. ನಿನ್ನೆ ಎದುರಾಳಿ ತಂಡದ ಸ್ಫರ್ಧಿಗಳ ಮುಖದ ಮೇಲೆ ವಿವಿಧ ಭಾವಗಳನ್ನು ಮೂಡಿಸುವ ಟಾಸ್ಕ್ ಅನ್ನು ಬಿಗ್‌ಬಾಸ್ ನೀಡಿದ್ದರು. ಹಾಗೆ ನೋಡಿದರೆ ಕೃತಕವಾಗಿ ಪ್ರಯತ್ನಿಸಿ ಆಯಾ ಭಾವವನ್ನು ಮೂಡಿಸಲು ಯಾರೂ ಯಶಸ್ವಿಯಾಗಿರಲಿಲ್ಲ. ಆದರೆ ಇಂದಿನ ಟಾಸ್ಕ್‌ನಲ್ಲಿ ತುಂಬ ಸಹಜವಾಗಿಯೇ ಎಲ್ಲ ಭಾವಗಳೂ ವ್ಯಕ್ತವಾಗುತ್ತಿರುವ ಹಾಗಿದೆ.
ಒಂದು ಪ್ಲ್ಯಾಸ್ಟಿಕ್ ಬಾಕ್ಸ್‌ನ ಎರಡೂ ಬದಿಯಲ್ಲಿ ಹಗ್ಗಗಳಿಂದ ಕಟ್ಟಲಾಗಿದೆ. ಅದನ್ನು ಎರಡು ಸ್ಪರ್ಧಿಗಳ ಸೊಂಟಕ್ಕೆ ಬಿಗಿಯಲಾಗಿದೆ. ಅದನ್ನು ಇಟ್ಟುಕೊಂಡು ಓಡುವ ಟಾಸ್ಕ್ ಅನ್ನು ಬಿಗ್‌ಬಾಸ್ ಮನೆಯ ಸ್ಪರ್ಧಿಗಳಿಗೆ ನೀಡಿರುವಂತಿದೆ. ಈ ಟಾಸ್ಕ್‌ನಲ್ಲಿಯೇ ಪರಸ್ಪರ ತಳ್ಳಿಕೊಳ್ಳುವ, ಕಿರುಚಾಡಿಕೊಳ್ಳುವ ಸನ್ನಿವೇಶಗಳು ಸೃಷ್ಟಿಯಾಗಿವೆ. ಇಷ್ಟು ವಾರಗಳ ಕಾಲ ದ್ವೇಷದ ವಾತಾವರಣಕ್ಕಿಂತ ನಗೆಯ ಹೊನಲು ಹೆಚ್ಚು ಹರಿದಿತ್ತು. ಆದರೆ, ಇಂದು ಬೆಳಗಿನ ಬಳಿಕ, ಟಾಸ್ಕ್ ನೆಪ ಎಂಬಂತೆ ಬಿಗ್ ಬಾಸ್ ಮನೆಯಲ್ಲಿ ದ್ವೇಷದ ವಾತಾವರಣ ಹರಡಿದೆ.
ರಾಷ್ಟ್ರವಾದಿ, ದೂರದೃಷ್ಟಿಯುಳ್ಳ ಶಂಕರ್‌ನಾಗ್ ಹುಟ್ಟುಹಬ್ಬ: ಆಟೋರಾಜನ ಸ್ಮರಿಸಿದ ಫ್ಯಾನ್ಸ್!
ವಿನಯ್-ಕಾರ್ತಿಕ್ ನಡುವೆ ತಳ್ಳಾಡುವಿಕೆಗಳು ನಡೆದಿದ್ದರೆ, ಸಂಗೀತಾ ಅವರನ್ನು ಪರೋಕ್ಷವಾಗಿ ಅಣುಕಿಸುವ ಮೂಲಕ ವಿನಯ್ ಇನ್ನಷ್ಟು ಕೆಣಕಿದ್ದಾರೆ. ಇಷ್ಟು ಕಾಲ ಪ್ರಣಯ ಪಕ್ಷಿಗಳಂತೆ ಬಿಗ್ ಬಾಸ್ ಮನೆಯಲ್ಲಿ ಓಡಾಡಿಕೊಂಡಿದ್ದ ಸಂಗೀತಾ-ಕಾರ್ತಿಕ್ ಜೋಡಿ, ಈಗ ಶತ್ರುಗಳಂತೆ ಆಡುತ್ತಿರುವುದನ್ನು ಸ್ವತಃ ಅಲ್ಲಿರುವ ಬಿಗ್ ಬಾಸ್ ಸ್ಪರ್ಧಿಗಳಿಗೇ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಮತ್ತದೇ ‘ಫೇರ್ ಗೇಮ್’ ಚರ್ಚೆ ಏರುದನಿಯಲ್ಲಿಯೇ ಮುನ್ನೆಲೆಗೆ ಬಂದಿದೆ. ಅಷ್ಟಕ್ಕೂ ಈ ಟಾಸ್ಕ್‌ನ ಸ್ವರೂಪವೇನು? ಸ್ಪರ್ಧಿಗಳು ಜಿದ್ದಾಜಿದ್ದಿಗೆ ಬಿದ್ದು ಜಗಳವಾಡಲು ಕಾರಣವೇನು? ತಿಳಿದುಕೊಳ್ಳಲು JioCinemaದಲ್ಲಿ ಬಿಗ್‌ಬಾಸ್ ಕನ್ನಡ ನೇರಪ್ರಸಾರವನ್ನು ವೀಕ್ಷಿಸಿ.
ಕಾರ್ತಿಕ್ ಆರ್ಯನ್ ಜೊತೆ ಬ್ರೇಕ್ ಅಪ್: ಮೌನ ಮುರಿದು, ಬಾಲಿವುಡ್‌ನಲ್ಲಿ ಯಾವುದೂ ಶಾಶ್ವತವಲ್ಲವೆಂದ ಸಾರಾ ಆಲಿ ಖಾನ್
ಬಿಗ್ ಬಾಸ್ ಕನ್ನಡ ಸೀಸನ್ 10ನಲ್ಲಿ ಏನೇನು ನಡೆಯುತ್ತಿದೆ, ಏನೇನು ನಿರೀಕ್ಷೆಗಳು ನೆರವೇರುತ್ತಿವೆ ಎಂಬುದನ್ನು ಈ ಸೀಸನ್‌ನಲ್ಲಿ ಒಳ್ಳೆಯ ಅವಕಾಶಗಳಿವೆ. ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ. ಪ್ರತಿದಿನದ ಎಪಿಸೋಡ್‌ಗಳನ್ನು Colors Kannada ದಲ್ಲಿ ರಾತ್ರಿ 9.30ಕ್ಕೆ, ಶನಿವಾರ-ಭಾನುವಾರ ರಾತ್ರಿ 9.00ಕ್ಕೆ ವೀಕ್ಷಿಸಬಹುದು.