ಬೆಳಕಿನ ಕವಿತೆ... ಎನ್ನುತ್ತಲೇ ಡಾನ್ಸ್ ವೇದಿಕೆ ಮೇಲೆ ಪ್ರೇಮಕಾವ್ಯ ಬರೆದ ತರುಣ್-ಸೋನಲ್ ನವದಂಪತಿ

By Suchethana D  |  First Published Aug 31, 2024, 5:04 PM IST

ಈಚೆಗಷ್ಟೇ ಮದುವೆಯಾಗಿರುವ ನಿರ್ದೇಶಕ ತರುಣ್​ ಸುಧೀರ್​ ಮತ್ತು ನಟಿ ಸೋನಲ್​ ಮೊಂಥೆರೋ ಡಾನ್ಸ್ ಕರ್ನಾಟಕ ಡಾನ್ಸ್​ ವೇದಿಕೆಯ ಮೇಲೆ ಪ್ರೇಮಕಾವ್ಯ ಬರೆದ್ದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ...
 


ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮೊಂಥೆರೋ ಅವರ ಅದ್ಧೂರಿ ವಿವಾಹ ಇದೇ 11ರಂದು ಬೆಂಗಳೂರಿನ ನಡೆದಿದೆ.  ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ಈ ಜೋಡಿ  ತಮ್ಮ ನಾಲ್ಕು ವರ್ಷದ  ಪ್ರೀತಿಗೆ ಮದುವೆ ಎಂಬ ಅಧಿಕೃತ ಮುದ್ರೆ ಒತ್ತಿದ್ದಾರೆ.  ಹಿಂದೂ ಸಂಪ್ರದಾಯದಂತೆ ಮದುವೆ ನಡೆದಿತ್ತು. ಸೋನಲ್​ ಅವರ ಹುಟ್ಟುಹಬ್ಬದಂದೇ ಮದುವೆಯಾಗಿದ್ದು  ವಿಶೇಷವೇ. ಈ ವಿವಾಹಕ್ಕೆ ಕನ್ನಡದ ಸ್ಟಾರ್ ಕಲಾವಿದರ ದಂಡು, ರಾಜಕೀಯ ಗಣ್ಯರು ಭಾಗಿಯಾದರು.  ದಕ್ಷಿಣ ಭಾರತ ಶೈಲಿಯಲ್ಲಿ ಕಲ್ಯಾಣ ಮಂಟಪದ ಅಲಂಕಾರ ಮಾಡಲಾಗಿತ್ತು. ವಿಷ್ಣುವಿನ ದಶಾವತಾರಗಳ ಮಧ್ಯೆ ಕಮಲ ಮಂಟಪ ನಿರ್ಮಾಣ ಮಾಡಲಾಗಿತ್ತು. ಕಲಾಂಜನಿ ವೆಡ್ಡಿಂಗ್ಸ್ ನ ಕಿರಣ್  ನೇತೃತ್ವದಲ್ಲಿ ಧಾರೆ ಮುಹೂರ್ತದ ಸೆಟ್  ಹಾಕಲಾಗಿತ್ತು. ಇದೀಗ ಈ ಜೋಡಿ ಕ್ರೈಸ್ತ ಸಂಪ್ರದಾಯದಂತೆ ಮಂಗಳೂರಿನಲ್ಲಿ ಮದುವೆ ಮಾಡಿಕೊಳ್ಳುತ್ತಿದ್ದಾರೆ.  ಮದುವೆಯ ಸಿದ್ಧತೆಗಳು ಆರಂಭವಾಗಿದ್ದು, ಮದುವೆ ಪೂರ್ವ ಕಾರ್ಯಕ್ರಮ ರೋಸ್ ಸಮಾರಂಭ ನೆರವೇರಿದೆ. ಸೆಪ್ಟೆಂಬರ್‌ 1 ರಂದು ಮದುವೆ ಸಮಾರಂಭ ನಡೆಯಲಿದೆ ಎಂದು ವರದಿಯಾಗಿದೆ.

ಇದರ ನಡುವೆಯೇ, ಈ ಜೋಡಿ ಡಾನ್ಸ್​ ಕರ್ನಾಟಕ ಡಾನ್ಸ್​ ವೇದಿಕೆಯ ಮೇಲೆ ಪ್ರೇಮದ ಕಿಚ್ಚು ಹೊತ್ತಿಸಿದ್ದಾರೆ. 2022ರಲ್ಲಿ ಬಿಡುಗಡೆಯಾದ ಬನಾರಸ್​ ಚಿತ್ರದ ಬೆಳಕಿನ ಕವಿತೆ, ಬೆರಗಿಗೆ ಸೋತೆ ಹಾಡಿಗೆ ಸ್ಟೆಪ್​ ಹಾಕಿದ್ದಾರೆ. ಈ ಚಿತ್ರದಲ್ಲಿ ಝೈದ್​ ಖಾನ್​ ಜೊತೆ ಸೋನಲ್​ ಅವರು ಹೀರೋಯಿನ್​ ಆಗಿ ನಟಿಸಿದ್ದರು. ಇದೇ ಕಾರಣದಿಂದ ಈ ಹಾಡನ್ನು ಡಿಕೆಡಿ ವೇದಿಕೆಯ ಮೇಲೆ ಆಯ್ಕೆ ಮಾಡಲಾಗಿದೆ. ಇವರಿಬ್ಬರೂ ರೊಮಾಂಟಿಕ್​ ಸ್ಟೆಪ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. 

Tap to resize

Latest Videos

ದರ್ಶನ್​ ನೆನೆದು ಕಣ್ಣೀರಾದ ತರುಣ್​ ಸುಧೀರ್​: ಜೈಲಿಗೆ ಹೋಗ್ತೇವೆ ಎಂದ ಸೋನಲ್ ಹೇಳಿದ್ದೇನು?

ಅಷ್ಟಕ್ಕೂ ಇವರಿಬ್ಬರ ಪ್ರೇಮಕ್ಕೆ ಕಾರಣವಾಗಿದ್ದು ಸದ್ಯ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇರುವ ದರ್ಶನ್​.  ತರುಣ್ ಸುಧೀರ್ ಅವರ ಆಪ್ತ ಸ್ನೇಹಿತರಾಗಿರುವ ದರ್ಶನ್ ಇವರ ಮದುವೆ ದಿನಾಂಕವನ್ನು ನಿಗದಿ ಮಾಡಿದ್ದರಂತೆ. ಆದರೆ ಜೈಲಿನಲ್ಲಿ ಇರುವ ಕಾರಣ, ಏನು ಮಾಡಬೇಕು ಎಂದು ಈ ಜೋಡಿಗೆ ತಿಳಿದಿರಲಿಲ್ಲ. ಕೊನೆಗೆ  ತರುಣ್ ಇತ್ತೀಚೆಗೆ ನಟ ದರ್ಶನ್ ಭೇಟಿ ಮಾಡಲು ಜೈಲಿಗೆ ಹೋಗಿ ಬಂದಿದ್ದರು. ಈ ವೇಳೆ ನಟ ದರ್ಶನ್ ನನಗಾಗಿ ನೀನು ನಿನ್ನ ಮದುವೆ ದಿನಾಂಕ ಮುಂದೂಡಿಕೆ ಮಾಡಿಕೊಳ್ಳಬೇಡ. ಅದೇ ದಿನಾಂಕದಲ್ಲಿ ನೀನು ಮದುವೆ ಮಾಡಿಕೋ, ನಾನು ಅಷ್ಟರೊಳಗೆ ಜೈನಿಂದ ಹೊರಗೆ ಬರುವುದಾಗಿ ಭರವಸೆ ನೀಡಿದ್ದರು. ಆದರೆ ಅವರಿಗೆ ಮದುವೆಗೆ ಬರಲು ಆಗಲಿಲ್ಲ. ಕೊನೆಗೆ ದಂಪತಿ ಅವರ ಆಶೀರ್ವಾದ ಪಡೆದಿದ್ದರು ಎನ್ನಲಾಗಿದೆ. 
 
ಅಂದಹಾಗೆ ತರುಣ್​ ಮತ್ತು ಸೋನಲ್​  ನಡುವಿನ ವಯಸ್ಸಿನ ಅಂತರ  11 ವರ್ಷ. ತರುಣ್ ಸುಧೀರ್‌ಗೆ 41 ವರ್ಷ ವಯಸ್ಸಾಗಿದೆ. ಇನ್ನು ನಟಿ ಸೋನಲ್ ಮೊಂಥೆರೋಗೆ 29 ವರ್ಷ ವಯಸ್ಸಾಗಿದೆ. ಸೋನಲ್‌  ಎಕ್ಕ ಸಕ್ಕ ಎಂಬ ತುಳು ಸಿನಿಮಾ ಮೂಲಕ ಎಂಟ್ರಿ ಕೊಟ್ಟರು.  ಬಳಿಕ ಯಮುನಕ್ಕ ಸೇರಿದಂತೆ ಕೆಲವು ತುಳು ಚಿತ್ರಗಳಲ್ಲಿ ನಟಿಸಿದ್ದಾರೆ. 2018ರಲ್ಲಿ ಅಭಿಸಾರಿಕೆ ಎನ್ನುವ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಎಂಟ್ರಿ ಕೊಟ್ಟರು. 2019ರಲ್ಲಿ ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡರು. ಬಳಿಕ ತರುಣ್ ನಿರ್ದೇಶನದ ರಾಬರ್ಟ್ ಚಿತ್ರದಲ್ಲಿ ಸೋನಲ್ ಪ್ರಮುಖ ಪಾತ್ರದಲ್ಲಿ ನಟಿಸಿದರು. ಆನಂತರ ಶುಗರ್‌ ಫ್ಯಾಕ್ಟರಿ, ಬನಾರಸ್‌, ಗರಡಿ, ಮದುವೆ ದಿಬ್ಬಣ, ಡೆಮೊ ಪೀಸ್‌, ಶಂಭೋ ಶಿವ ಶಂಕರ್‌ ಸಿನಿಮಾಗಳಲ್ಲಿ ನಟಿಸಿದರು. ಬಳಿಕ ಉಪೇಂದ್ರ ನಟನೆಯ ಬುದ್ಧಿವಂತ 2, ರೋಲೆಕ್ಸ್ ಹಾಗೂ ಮಾರ್ಗರೆಟ್ ಲವ್ ಆಫ್ ರಾಮಾಚಾರಿ ಚಿತ್ರದಲ್ಲಿ ಸೋನಲ್ ಅಭಿನಯಿಸಿದ್ದಾರೆ. 

ತರುಣ್​-ಸೋನಲ್​ ಮದುವೆಗೂ ಮುನ್ನ ನಟಿಯ ಭರ್ಜರಿ ಬ್ಯಾಚುಲರ್​ ಪಾರ್ಟಿ ಹೇಗಿತ್ತು ನೋಡಿ...!

click me!