
ಮುಂಬೈ (ನ.18) ಬಿಗ್ ಬಾಸ್ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಆಗಿ ಮಾರ್ಪಟ್ಟಿದೆ. ಹಲವು ಭಾಷೆಗಳಲ್ಲಿ ಬಿಗ್ ಬಾಸ್ ಶೋ ನಡೆಯುತ್ತಿದೆ. ಇದೀಗ ಬಿಗ್ ಬಾಸ್ ಮಾಜಿ ಸ್ಪರ್ಧಿಯ ಮನೆಗೆ ಬೆಂಕಿ ಬಿದ್ದಿದೆ. ಮನೆಯ ಪಿಠೋಪಕರಣ, ವಸ್ತಗಳು ಸಂಪೂರ್ಣ ನಾಶವಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿರುವ ಘಟನ ಮುಂಬೈನ ಗೋರೇಗಾಂವ್‌ನಲ್ಲಿ ನಡೆದಿದೆ. ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಶಿವ್ ಠಾಕ್ರೆಯ ಗುರುಗಾಂವ್ ಮನೆ ಬೆಂಕಿಗೆ ಆಹುತಿಯಾಗಿದೆ.
ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಲಾಗಿದೆ. ಹೀಗಾಗಿ ತಕ್ಷಣವೇ ಅಗ್ನಿಶಾಮಕ ದಳ ಶಿವ್ ಠಾಕ್ರೆ ಮನೆಯತ್ತ ಆಗಮಿಸಿದೆ. ಗೋರೇಗಾಂವ್‌ನ ಪ್ರತಿಷ್ಟಿತ ಅಪಾರ್ಟ್‌ಮೆಂಟ್‌ಲ್ಲಿರುವ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಹಲವು ಮಹಡಿಗಳ ಮೇಲಿರು ಮನಯೆಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ದಳ ಸಿಬ್ಬಂದಿ ಕೆಲ ಹೊತ್ತು ಹರಸಾಹಸ ಮಾಡಬೇಕಾಯಿತು. ಸತತ ಪ್ರಯತ್ನದ ಫಲವಾಗಿ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ದಳ ಯಶಸ್ವಿಯಾಗಿತ್ತು.
ಅದೃಷ್ಠವಶಾತ್ ಶಿವ್ ಠಾಕ್ರೆ ಹಾಗೂ ಆತನ ಕುಟುಂಬಸ್ಥರಿಗೆ ಯಾವುದೇ ಹಾನಿಯಾಗಿಲ್ಲ. ಘಟನೆಯಲ್ಲಿ ಯಾವುದೇ ರೀತಿ ಪ್ರಾಣಾಪಾಯ ಸಂಭವಿಸಿಲ್ಲ. ಇತ್ತ ಅಕ್ಕ ಪಕ್ಕದ ಮನೆಯವರಿಗೂ ಸುರಕ್ಷಿತವಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಎಲ್ಲರೂ ಅಪಾರ್ಟ್‌ಮೆಂಟ್‌ನಿಂದ ಕೆಳಕ್ಕೆ ಬಂದಿದ್ದಾರೆ.
ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಆದರೆ ಅಷ್ಟರೊಳಗೆ ಮನೆ ಬಹುತೇಕ ಸುಟ್ಟು ಭಸ್ಮವಾಗಿದೆ. ಮನೆಯ ವಸ್ತುಗಳು, ಪಿಠೋಪಕರಣ ಸೇರಿದಂತೆ ಎಲ್ಲವೂ ಸುಟ್ಟು ಕರಕಲಾಗಿದೆ. ಶಿವ್ ಠಾಕ್ರೆ ಮನೆಯ ಬೆಂಕಿ ದುರಂತದ ಕುರಿತಿ ಸೆಲೆಬ್ರೆಟಿ ಫೋಟೋಗ್ರಾಫರ್ ವೈರಲ್ ಭಯಾನಿ ವಿಡಿಯೋ ಹಂಚಿಕೊಂಡಿದ್ದಾರೆ.
ಘಟನ ಕುರಿತು ಶಿವ್ ಠಾಕ್ರೆ ಸ್ಪಷ್ಟನೆ ನೀಡಿದ್ದಾರೆ. ಇಂದು ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ದುರಂತದಲ್ಲಿ ಮನೆ ಸುಟ್ಟು ಹೋಗಿದೆ. ಆದರೆ ಅದೃಷ್ಠವಶಾತ್ ಯಾರಿಗೂ ಹಾನಿಯಾಗಿಲ್ಲ. ಎಲ್ಲರು ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇತ್ತ ಹಲವು ಫಾಲೋವರ್ಸ್ ಹಾಗೂ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.ಬೆಂಕಿ ಹೊತ್ತಿಕೊಳ್ಳಲು ಕಾರಣ ಸ್ಪಷ್ಟವಾಗಿಲ್ಲ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.