ಪೇಜಾವರ ಮಠದ(Pejawar) ಹಿರಿಯ ಹಿರಿಯ ಶ್ರೀಗಳ ಬಗ್ಗೆ ಹೇಳಿಕೆ ನೀಡಿ ಭಾರೀ ಟೀಕೆಗೆ ಗುರಿಯಾದ ಗಾಯಕ ಹಂಸಲೇಖ(Hamsalekha) ಅವರು ಸರಿಗಮಪ ರಿಯಾಲಿಟಿ ಶೋ ಬಿಡುತ್ತಿದ್ದಾರಾ ? ಕಾರ್ಯಕ್ರಮದಲ್ಲಿ ಜಡ್ಜ್ ಆಗಿ ಹೊಸಬರ ಎಂಟ್ರಿಯಾಗುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಈಗಾಗಲೇ ಚರ್ಚೆ ಶುರುವಾಗಿದೆ. ಕಾರ್ಯಕ್ರಮದಿಂದ ಹಂಸಲೇಖ ಅವರು ಹೊರ ಹೋಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಹೇಳಿಕೆ ಕೊಟ್ಟ ಬೆನ್ನಲ್ಲೇ ತೀವ್ರ ವಿರೋಧ ಎದುರಾಗಿ ಹಂಸಲೇಖ ಅವರು ಕ್ಷಮೆ ಕೇಳಿಯೂ ಆಗಿದೆ. ಹಿರಿಯ ಗಾಯಕರ ವಿರುದ್ಧ ಈಗಾಗಲೇ ದೂರು ಕೂಡಾ ದಾಖಲಾಗಿದೆ. ಅವರು ಸೋಷಿಯಲ್ ಮೀಡಿಯಾ ಮೂಲಕ ತಮ್ಮ ತಪ್ಪಿಗೆ ಕ್ಷಮೆ ಯಾಚಿಸಿದ್ದರು. ಈ ನಡುವೆ ಅವರ ಆರೋಗ್ಯ ಕುರಿತ ವದಂತಿಗಳೂ, ಶೋ ಬಿಡುತ್ತಿರುವ ಬಗ್ಗೆಯೂ ಮಾತುಗಳು ಕೇಳಿ ಬಂದಿವೆ. ಇದಕ್ಕೆ ಹಂಸಲೇಖ ಅವರು ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.
Hamsalekha Controversy: ಹಂಸಲೇಖ ವಿರುದ್ಧ ದೂರು ನೀಡಿದ್ದವರ ಮೇಲೆ ಪ್ರತಿದೂರು
ನಾನು ಅನಾರೋಗ್ಯಕ್ಕೀಡಾಗಿದ್ದೇನೆ ಎಂದು ರಾಜ್ಯದ ಹಲವು ಭಾಗಗಳಿಂದ ಕರೆಗಳು ಬರುತ್ತಿವೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನಿಮ್ಮ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ, ನನಗೆ ಏನೂ ಸಮಸ್ಯೆಯಾಗಿಲ್ಲ, ಆರೋಗ್ಯವಾಗಿದ್ದೇನೆ, ನಿಮ್ಮ ಪ್ರೀತಿ ಗಳಿಸಲು ನಾನು ಸಾಕಷ್ಟು ಶ್ರಮ ಹಾಕಿದ್ದು, ಕಷ್ಟ ಸಹ ಪಟ್ಟಿದ್ದೇನೆ, ಅದರ ಸುಖವನ್ನು ಇಂದು ಕಾಣುತ್ತಿದ್ದೇನೆ ಎಂದು ಹಂಸಲೇಖ ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ. ನನ್ನ ಮಾತು ವಿವಾದವಾದ ನಂತರ ಲಕ್ಷಾಂತರ ಮಂದಿ ಅಭಿಮಾನಿಗಳು ನನ್ನ ಪರ ಮಾತನಾಡುತ್ತಿದ್ದಾರೆ. ಅಭಿಮಾನಿಗಳ ಪ್ರೀತಿ ಆವೇಶವಾಗುವುದು ಬೇಡ, ಆವೇಶ ಅವಘಡಗಳಿಗೆ ಕಾರಣವಾಗುವುದು ಸಹ ಬೇಡ, ಅಭಿಮಾನ ಹಾಡಿನಂತಿರಲಿ ಎಂದು ವಿನಂತಿ ಮಾಡಿಕೊಂಡಿದ್ದಾರೆ.
ಖ್ಯಾತ ಸಂಗೀತ ನಿರ್ದೇಶಕ, ಸಿನಿಮಾ ಸಾಹಿತಿ ನಾದ ಬ್ರಹ್ಮ ಹಂಸಲೇಖ (Hamsalekha) ಅವರು ಪೇಜಾವರ ಶ್ರೀಗಳ ಕುರಿತು ಆಡಿದ ಮಾತುಗಳಿಗೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆಗೆ ಗ್ರಾಸವಾಗಿತ್ತು. ನೆಟ್ಟಿಗರು ಹಂಸಲೇಖ ಮಾತುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರು ವಿಡಿಯೋ ಮುಖಾಂತರ ಕ್ಷಮೆ ಕೇಳಿದ್ದರು.
ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ನಾದಬ್ರಹ್ಮ ಹಂಸಲೇಖ ಪೇಜಾವರ ಶ್ರೀಗಳ (pejavara sri)ವಿರುದ್ಧ ಹೇಳಿಕೆ ನೀಡಿದ್ದರು. ಮೇಲುಜಾತಿ ಹಾಗೂ ಕೀಳುಜಾತಿ, ಜಾತಿತಾರತಮ್ಯ, ಜಾತಿ ಪಿಡುಗು ವಿಚಾರವಾಗಿ ಮಾತನಾಡುತ್ತಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಳಿಕ ಅಂಬೇಡ್ಕರ್ ವಿಚಾರವನ್ನು ಕೂಡ ಉಲ್ಲೇಖಿಸಿದ್ದರು. ಇಲ್ಲಿ ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಮಾತನಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವಿವಾದ ಹುಟ್ಟುಹಾಕಿತ್ತು.
ವಿಡಿಯೋ ಮೂಲಕ ಕ್ಷಮೆ:
ಫೇಸ್ ವಿಡಿಯೋ ಮೂಲಕ ಕ್ಷಮೆಯಾಚಿಸಿರುವ ಹಂಸಲೇಖ ಅವರು, ನನಗೆ ಗೊತ್ತಿದೆ. ಎಲ್ಲಾ ಮಾತುಗಳಿಗೂ ಅದು ವೇದಿಕೆಯಲ್ಲ, ತಪ್ಪು. ಆ ವೇದಿಕೆಯಲ್ಲಿ ನುಡಿದರೆ ಮುತ್ತಿನಹಾರದಂತಿರಬೇಕು ಎಂದು ಇರಬೇಕಿತ್ತು. ಆದರೆ, ತಪ್ಪಾಗಿದೆ. ಅಸ್ಪ್ರಶ್ಯತೆ ಎಂಬುದು ನಮ್ಮ ದೇಶಕ್ಕೆ ಅಂಟಿದ ಶಾಪ. ಈ ಅನಿಷ್ಠವನ್ನು ತೊಡೆದು ಹಾಕುವುದಕ್ಕೆ ಪೇಜಾವರರಂಥ ಗುರುಹಿರಿಯರು ಅಪಾರ ಪ್ರಯತ್ನ ನಡೆಸುತ್ತಿದ್ದಾರೆ. ಅದರ ಬಗ್ಗೆ ನನಗೆ ಆ ಬಗ್ಗೆ ಅಪಾರ ಗೌರವವಿದೆ ಎಂದಿದ್ದಾರೆ.
ನಾನು ಒಬ್ಬ ಸಂಗೀತಗಾರ. ನಮಗ್ಯಾಕೆ ಟ್ರೋಲು, ಕಂಟ್ರೋಲ್ ಆಗಿರುವುದು ನಮ್ಮ ಕೆಲಸ. ನನಗೆ ಯಾರಿಗೂ ನೋವು ಕೊಡಲು ಇಷ್ಟವಿಲ್ಲ. ನನ್ನ ಸಂಗೀತದಂತೆ ನನ್ನ ಮಾತು, ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ಆದರೆ, ಎಲ್ಲಾ ಅನಿಷ್ಠಗಳನ್ನು ತೊಡೆದು ಹಾಕುವ ದಿಸೆಯಲ್ಲಿ ನನ್ನ ಪಾತ್ರವೂ ಯಾವುದೇ ಮೂಲಕ ಇದ್ದರೆ ಅದನ್ನು ನಾನು ಮಾಡಿಯೇ ಮಾಡುತ್ತೇನೆ ಎಂದು ಹೇಳಿದ್ದಾರೆ.