ಹಾಟ್‌ ಲುಕ್‌ನಲ್ಲಿ ಹಿಟ್ಲರ್‌ ಕಲ್ಯಾಣದ ಲೀಲಾ: ಬಾಲಿವುಡ್‌ ಮಲೈಕಾ ಮಾತ್ರ ಆಗ್ಬೇಡಮ್ಮಾ ಎಂದು ಕಿವಿಮಾತು!

By Suchethana DFirst Published Jun 22, 2024, 8:41 PM IST
Highlights

ಹಿಟ್ಲರ್‌ ಕಲ್ಯಾಣದ ಎಡವಟ್ಟು ಲೀಲಾ ಮಲೈಕಾ ವಸುಪಾಲ್‌ ಹಾಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ಹೇಳ್ತಿರೋದೇನು?
 

ಲೀಲಾ ಎಂದಾಕ್ಷಣ ಎಲ್ಲರ ನೆನಪಿಗೆ ಬರುವುದು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗ್ತಿದ್ದ ಹಿಟ್ಲರ್​ ಕಲ್ಯಾಣ ಸೀರಿಯಲ್​ನ ಪೆದ್ದು ಲೀಲಾ. ಈ ಸೀರಿಯಲ್​ ಕೆಲ ತಿಂಗಳ ಹಿಂದೆ ಅಂತ್ಯ ಕಂಡಿದೆ. ತರಾತುರಿಯಲ್ಲಿ ಸೀರಿಯಲ್​ ಮುಗಿಸಲಾಯಿತಾದರೂ ಪೆದ್ದು ನಾಯಕಿ ಲೀಲಾ ಪಾತ್ರ ಎಲ್ಲರ ಮನಸ್ಸಿನಲ್ಲಿಯೂ ಅಚ್ಚಳಿಯದೇ ಉಳಿದಿದೆ. ಲೀಲಾ ಪಾತ್ರಧಾರಿಯ ನಿಜವಾದ ಹೆಸರು ಮಲೈಕಾ ವಸುಪಾಲ್​. ಇದೀಗ ಮಲೈಕಾ ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಹಾಟ್‌ ಆಗಿ ಕಾಣಿಸುತ್ತಿದ್ದೀರಿ, ಇಷ್ಟಕ್ಕೇ ಸೀಮಿತವಾಗಿರಲಿ ಎನ್ನುತ್ತಲೇ ಬಾಲಿವುಡ್‌ ಮಲೈಕಾ ಅರೋರಾ ಅವರಂತೆ ಆಗಬೇಡಿ ಎಂದು ಕಿವಿಮಾತು ಹೇಳುತ್ತಿದ್ದಾರೆ. ಮಲೈಕಾ ಅರೋರಾ ತಮ್ಮ ಡ್ರೆಸ್‌ಗಳಿಂದಲೇ ಸದಾ ಟ್ರೋಲ್‌ ಆಗ್ತಿರೋರು. ಅವರಂತೆ ಆಗಬೇಡಿ ಎನ್ನುವುದು ಅಭಿಮಾನಿಗಳ ಮಾತು. 

ಅಷ್ಟಕ್ಕೂ ಈ ಮಲೈಕಾಗೂ, ಬಾಲಿವುಡ್ ಮಲೈಕಾಗೂ ನಂಟಿದೆ. ಹೌದು! ಮಲೈಕಾ ಹೆಸರು ಇವರಿಗೆ ಬರುವ ಹಿಂದೆ ಒಂದು ಕಥೆಯೇ ಇದೆ. 1998ರಲ್ಲಿ ಬಿಡುಗಡೆಯಾಗಿದ್ದ ದಿಲ್‌ ಸೇ ಚಿತ್ರದ ಚೈಯ್ಯಾ ಚೈಯ್ಯಾ ಹಾಡು ಸಕತ್‌ ಹಿಟ್‌ ಆಗಿತ್ತು. ಆಗ ಮಲೈಕಾ ಅರೋರಾ ಅವರಿಗೆ ಬಹುದೊಡ್ಡ ಹೆಸರೇ ಬಂದಿತ್ತು. ಎಲ್ಲರ ಬಾಯಿಯಲ್ಲೂ ಮಲೈಕಾ ಅವರ ಹೆಸರು ಓಡಾಡುತ್ತಿತ್ತು. ಈ ಹಾಡಿಗೆ ಮಲೈಕಾ ಅರೋರಾ ಸೊಂಟ ಬಳುಕಿಸಿದ ರೀತಿಗೆ ಎಲ್ಲರೂ ಫಿದಾ ಆಗಿದ್ದರು. ಅದೇ ಟೈಂನಲ್ಲಿ ಹುಟ್ಟಿದ್ದೇ ದಾವಣಗೆರೆಯ ಮಲೈಕಾ. ಈ ಮಲೈಕಾ  ಹುಟ್ಟು ಹೆಸರು ಕೂಡ ಮ ಅಕ್ಷರದಲ್ಲಿ ಬಂದ ಹಿನ್ನೆಲೆಯಲ್ಲಿ ಮ ಅಕ್ಷರದ ಹೆಸರಿಗಾಗಿ ಹುಡುಕಾಟ ನಡೆಸಿದ್ದರಂತೆ. ಆಗ ಮಲೈಕಾ ಅವರ ಹೆಸರು ಇಟ್ಟರಂತೆ. ಈ ಕುರಿತು ಮಲೈಕಾ ಹೇಳಿದ್ದರು. ಮಲೈಕಾಗೆ ಇರುವ ಕೆಲವು ಅರ್ಥಗಳ ಕುರಿತೂ ನಟಿ ಹೇಳಿದ್ದಾರೆ. ಒಂದು ದೇಶದಲ್ಲಿರುವ ಹೂವಿನ ಹೆಸರು, ಮಲೈ ಎಂದರೆ ಕೆನೆ ಹಾಗೂ ಮಲೈಕಾ ಎಂದರೆ ಬಾಲಿವುಡ್‌ ನಟಿ ಎಂದಿದ್ದರು. ಅಂದಹಾಗೆ ಮಲೈಕಾ ಅರೋರಾ ಅವರಿಗೆ 49 ವರ್ಷ ವಯಸ್ಸಾದರೆ ಕನ್ನಡದ ಮಲೈಕಾಗೆ 25 ವರ್ಷ ವಯಸ್ಸು.  

Latest Videos

ಪ್ರಭಾವಿಗಳು ಆರೋಪಿಯಾದ್ರೆ ದಕ್ಷ ಪೊಲೀಸರಿಗೆ ಇದೇನಾ ಗತಿ? ಸತ್ಯಳ ಸ್ಥಿತಿಗೆ ಫ್ಯಾನ್ಸ್ ಹೇಳ್ತಿರೋದೇನು?

ಇನ್ನು ಮಲೈಕಾ ವಸುಪಾಲ್‌  ಕುರಿತು ಒಂದಿಷ್ಟು ಹೇಳುವುದಾದರೆ, ಅಪ್ಪ ಅಮ್ಮನ ಬಲವಂತಕ್ಕೆ ಓದಿದರೂ ಜಾಣೆಯಾದ ಮಲೈಕಾ ಇಂಜಿನಿಯರಿಂಗ್‌ ಪದವಿ ಪಡೆದಿದ್ದಾರೆ. ನಂತರ ನಟನೆಯ ಕನಸಿನ ಹಿಂದೆ ಬಿದ್ದಿದ್ದರು.  ಸಾಕಷ್ಟು ಸೀರಿಯಲ್ ತಂಡ ಸಂಪರ್ಕಿಸಿ ಅಡಿಷನ್‌ ಕೊಟ್ಟಿದ್ದರು.  ಅದಕ್ಕಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಸದಾ ಓಡಾಟ ಮಾಡಿದ್ದರು. ಕೊನೆಗೆ ಹಿಟ್ಲರ್‌ ಕಲ್ಯಾಣ ತಂಡದ ಕಣ್ಣಿಗೆ ಬಿದ್ದರು.  ಈ ಸೀರಿಯಲ್‌ಗೋಸ್ಕರ ಮಲೈಕಾ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಆಗಿದ್ದರು. ಬಳಿಕ ಉಪಾಧ್ಯಕ್ಷ ಸಿನಿಮಾದಲ್ಲಿ ನಾಯಕಿ ಪಾತ್ರ ಗಿಟ್ಟಿಸಿಕೊಂಡು ಮನೆ ಮಾತಾಗಿದ್ದಾರೆ.

 ಧಾರಾವಾಹಿಯಲ್ಲಿ ಈಕೆ ಎಡವಟ್ಟು ಅನಿಸಿಕೊಂಡರೂ, ಅಭಿಮಾನಿಗಳಿಗೆ ಅಚ್ಚು ಮೆಚ್ಚು. ಆಗಾಗ್ಗೆ ಸೋಷಿಯಲ್​ ಮೀಡಿಯಾದಲ್ಲಿ ರೀಲ್ಸ್​ ಮಾಡುತ್ತಾ ಜನರಿಗೆ ಹತ್ತಿರವಾಗುತ್ತಿದ್ದಾರೆ. ಧಾರಾವಾಹಿಯಲ್ಲಿ ಸೀರೆಯಲ್ಲಿಯೇ ಮಿಂಚುವ ಲೀಲಾ ಎಂಬ ಮುಗ್ಧ ಚೆಲುವೆ, ನಿಜ ಜೀವನದಲ್ಲಿ ಡ್ಯಾಷಿಂಗ್​ ಮಲೈಕಾ. ಹಾಟ್​ ಫೋಟೋಗಳನ್ನು ಶೇರ್​ ಮಾಡುತ್ತಾ ಯುವಕರ ಹೃದಯ ಕದಿಯುವ ಚೆಲುವೆ ಈಕೆ. ಇವರು ಸಿಕ್ಕಾಪಟ್ಟೆ ಗ್ಲ್ಯಾಮರಸ್ ಬೆಡಗಿ. ಯಾವ ಸಿನಿಮಾ ತಾರೆಗೂ ಈಕೆ ಕಡಿಮೆ ಇಲ್ಲ ಎನ್ನುವಂತೆ ಮಾಡರ್ನ್​ ಡ್ರೆಸ್​ನಲ್ಲಿಯೂ (Modern dress) ಮಿಂಚಿ ಫೋಟೋ ಶೇರ್​ ಮಾಡಿಕೊಳ್ಳುತ್ತಾರೆ.  ಇನ್ನು ಸೀರೆಯಲ್ಲಿ ಈಕೆ ಕಣ್ಣುಕುಕ್ಕಿಸುವುದು ಧಾರಾವಾಹಿಗಳಲ್ಲಿ ಪ್ರೇಕ್ಷಕರು ನೋಡಿಯೇ ಇರುತ್ತಾರೆ.
 

ಸತ್ಯ ಸೀರಿಯಲ್​ ದಿವ್ಯಾ-ಬಾಲಾ ದಂಪತಿ ಸಕತ್​ ರೀಲ್ಸ್​: ನಖರಾ ಬಿಟ್ಟು ಗಂಡನ ಜೊತೆ ಬಾಳು ಎಂದ ಫ್ಯಾನ್ಸ್​

click me!