ಸೋಶಿಯಲ್ ಮೀಡಿಯಾದಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಿಗ್‌ಬಾಸ್ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ವಿಚಾರಣೆ ಬುಧವಾರ ನಡೆಯಲಿದೆ.
ಬೆಂಗಳೂರು (ಮಾ.25): ಸೋಶಿಯಲ್ ಮೀಡಿಯಾದಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಕ್ಕೆ ಸಂಬಂಧಪಟ್ಟಂತೆ ಮಾಜಿ ಬಿಗ್‌ಬಾಸ್ ಸ್ಪರ್ಧಿಗಳಾದ ವಿನಯ್ ಗೌಡ ಹಾಗೂ ರಜತ್ ಕಿಶನ್‌ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಲ್ಲಿಂದಲೇ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪ್ರಕರಣದ ಸ್ಥಳ ಮಹಜರು ನಡೆಸಿದ ಬಳಿಕ ಇಬ್ಬರನ್ನೂ ಕೆಸಿ ಜನರಲ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿತ್ತು. ಆ ಬಳಿಕ ಇಬ್ಬರನ್ನೂ ಕೋರಮಂಗಲದ ಬಳಿ ಇರುವ ಜಡ್ಜ್ ನಿವಾಸದ ಎದುರು ಪ್ರಸ್ತುತ ಪಡಿಸಲಾಯಿತು. ಈ ವೇಳೆ 24ನೇ ಎಜಿಸಿಎಂ ನ್ಯಾಯಾಧೀಶರು ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಬೆಳಗ್ಗೆ ಕೋರ್ಟ್ ಎದುರು ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ.
ಇಬ್ಬರೂ ಕೂಡ ಜಾಮೀನು ಅರ್ಜಿಯನ್ನೂ ಸಲ್ಲಿಕೆ ಮಾಡಿದ್ದು, ಇದರ ವಿಚಾರಣೆ ಕೂಡ ಬುಧವಾರ ಕೋರ್ಟ್‌ನಲ್ಲಿ ನಡೆಯಲಿದೆ. ಜಡ್ಜ್ ಆದೇಶದ ಬೆನ್ನಲ್ಲಿಯೇ ಇಬ್ಬರೂ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಯಿತು. ರಜತ್ ಕಿಶನ್‌ರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ಮಾಡಲು ಕಾರು ಏರುತ್ತಿದ್ದಂತೆ ಅವರ ಪತ್ನಿ ಅಕ್ಷಿತಾ ಕಣ್ಣೀರಿಟ್ಟಿದ್ದಾರೆ.
ಡೆವಿಲ್ ಸಿನಿಮಾದ ನಾಯಕ ದರ್ಶನ್, ಖಳನಾಯಕ ವಿನಯ್ ಗೌಡಗೆ ರಿಯಲ್ ಡೆವಿಲ್ ಆದ ಎಸಿಪಿ ಚಂದನ್!