
ಪ್ರೀಮಿಯರ್ ಪದ್ಮಿನಿ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮದಲ್ಲಿ ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾದ ‘ಚೆಲುವಿನ ಚಿತ್ತಾರ’ ಚಿತ್ರದ ಪಪ್ಪುಸಿ ಖ್ಯಾತಿಯ ನಟ ರಾಕೇಶ್ ಕುಟುಂಬಕ್ಕೆ ‘ಪ್ರೀಮಿಯರ್ ಪದ್ಮಿನಿ’ ಚಿತ್ರತಂಡದ ವತಿಯಿಂದ 1 ಲಕ್ಷ ರು. ಸಹಾಯ ಧನ ನೀಡಲಾಯಿತು. ನಿರ್ಮಾಪಕಿ ಶ್ರುತಿ ನಾಯ್ಡು ಅವರ ಪರವಾಗಿ ನಟ ರಾಕೇಶ್ ಅವರ ತಾಯಿ ಆಶಾರಾಣಿ ಅವರಿಗೆ ದರ್ಶನ್ ಚೆಕ್ ವಿತರಿಸಿದರು. ನಂತರ ಮಾತನಾಡಿದ ಶ್ರುತಿ ನಾಯ್ಡು, ‘ರಾಕೇಶ್ ಕುಟುಂಬ ಈಗ ಆರ್ಥಿಕ ಸಂಕಷ್ಟದಲ್ಲಿದೆ. ರಾಕೇಶ್ ತಾಯಿ ಆಶಾರಾಣಿ ಅವರು ಕೂಡ ಕಲಾವಿದರು. ನಟಿಯಾಗಿ ನನಗೂ ಪರಿಚಯ ಇದ್ದಾರೆ. ಅವರ ಸಂಕಷ್ಟಕ್ಕೆ ಸಣ್ಣ ರೀತಿಯಲ್ಲಿ ಸ್ಪಂದಿಸುವ ಉದ್ದೇಶದೊಂದಿಗೆ ಈ ಆರ್ಥಿಕ ನೆರವು ನೀಡಲಾಗಿದೆ’ ಎಂದು ಹೇಳಿದರು.
ಈ ಸಮಾಜಮುಖಿ ಕಾರ್ಯಕ್ರಮ ನಿರಂತರವಾಗಿ ನಡೆಯಲಿದೆ ಎಂಬುದಾಗಿ ಹೇಳಿದರು. ‘ನಟಿ ಬಿ.ವಿ. ರಾಧಾ ಅವರ ಹೆಸರಲ್ಲಿ ಪ್ರತಿ ವರ್ಷ ಅಸಹಾಯಕರಿಗೆ, ಆರ್ಥಿಕ ತೊಂದರೆಗೆ ಸಿಲುಕಿದ ಕಲಾವಿದರಿಗೆ ನಮ್ಮ ಸಂಸ್ಥೆಯ ಮೂಲಕ 1 ಲಕ್ಷರು. ಧನ ಸಹಾಯ ನೀಡಲು ನಿರ್ಧರಿಸಿದ್ದೇವೆ’ ಎಂದರು.
ರಕ್ಷಿತ್ ಶೆಟ್ಟಿಯಿಂದ ಜಗ್ಗೇಶ್ ಚಿತ್ರದ ಆಡಿಯೋ ಲಾಂಚ್!
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.