
ಮೇರು ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ನಡೆಸಿಕೊಟ್ಟಿದ್ದ ‘ಎದೆ ತುಂಬಿ ಹಾಡುವೆನು’ ರಿಯಾಲಿಟಿ ಶೋ ಕಾರ್ಯಕ್ರಮ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮತ್ತೆ ಹೊಸ ರೂಪದಲ್ಲಿ ಪ್ರಸಾರವಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಸಂಗೀತ ನಿರ್ದೇಶಕ ಹಂಸಲೇಖ, ಗಾಯಕ ರಾಜೇಶ್ ಕೃಷ್ಣನ್ ತೀರ್ಪುಗಾರರಾಗಿರುತ್ತಾರೆ.
ಗಾಯನ ಸಂಬಂಧಿಸಿದ ರಿಯಾಲಿಟಿ ಶೋಗಳಲ್ಲೇ ಎದೆ ತುಂಬಿ ಹಾಡುವೆನು ಕಾರ್ಯಕ್ರಮಕ್ಕೆ ದೊಡ್ಡ ಹೆಸರಿದೆ. ಆ ಕಾರ್ಯಕ್ರಮ ಪ್ರಸಾರವಾಗಿ ಹಲವಾರು ವರ್ಷಗಳೇ ಕಳೆದುಹೋದರೂ ಆ ಹೆಸರು ಮಾತ್ರ ಇನ್ನೂ ಬಹಳಷ್ಟುಮಂದಿಯ ಹೃದಯದಲ್ಲಿದೆ. ಈ ಕಾರಣದಿಂದಲೇ ಎದೆ ತುಂಬಿ ಹಾಡುವೆನು ಕಾರ್ಯಕ್ರಮ ನಿರೀಕ್ಷೆ ಹುಟ್ಟಿಸಿದೆ. ಅಲ್ಲದೇ ಹಂಸಲೇಖ ಮತ್ತು ರಾಜೇಶ್ ಕೃಷ್ಣನ್ ತೀರ್ಪುಗಾರರಾಗಿ ಆಗಮಿಸುತ್ತಿರುವುದರಿಂದ ನಿರೀಕ್ಷೆ ಮತ್ತಷ್ಟುಹೆಚ್ಚಿದೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಮುಗಿದ ಕೂಡಲೇ ಎದೆ ತುಂಬಿ ಹಾಡುವೆನು ಕಾರ್ಯಕ್ರಮ ಪ್ರಸಾರವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.