ಸೇನಾ ಸಮವಸ್ತ್ರದಲ್ಲೇ ಕೆಬಿಸಿಗೆ ಬಂದ ಕರ್ನಲ್‌ ಖುರೇಷಿ,ವ್ಯೋಮಿಕಾ, ಪ್ರೇರಣಾ!

Published : Aug 14, 2025, 10:13 AM IST
amitabh bachchan KBC 17

ಸಾರಾಂಶ

ಕೌನ್ ಬನೇಗಾ ಕರೋಡ್‌ಪತಿಯಲ್ಲಿ ಸೇನಾಧಿಕಾರಿಗಳ ಸಮವಸ್ತ್ರ ಧಾರಣೆ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಮತ್ತು ಶಿವಸೇನೆ ಯುಬಿಟಿ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ನವದೆಹಲಿ (ಆ.14): ಬಾಲಿವುಡ್‌ ಬಿಗ್‌ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‌ಪತಿಯ ಸ್ವಾತಂತ್ರ್ಯ ದಿನಾಚರಣೆ ವಿಶೇಷದಲ್ಲಿ ಆಪರೇಷನ್ ಸಿಂದೂರದ ಪತ್ರಿಕಾಗೋಷ್ಠಿ ನೇತೃತ್ವ ವಹಿಸಿದ್ದ ಬೆಳಗಾವಿಯ ಸೊಸೆ ಕರ್ನಲ್ ಸೋಫಿಯಾ ಖುರೇಷಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್‌ ಮತ್ತು ನೌಕಾ ಕಮಾಂಡರ್ ಪ್ರೇರಣಾ ಸೇನಾ ಸಮವಸ್ತ್ರ ದಲ್ಲಿಯೇ ಕಾಣಿಸಿಕೊಳ್ಳಲಿದ್ದಾರೆ. ಆದರೆ ಇದಕ್ಕೆ ವಿಪಕ್ಷ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಮನರಂಜನಾ ಕಾರ್ಯಕ್ರಮದಲ್ಲಿ ಸಶಸ್ತ್ರ ಪಡೆ ಅಧಿಕಾರಿಗಳು ಸಮವಸ್ತ್ರ ಧರಿಸಿ ಭಾಗಿಯಾಗಿದ್ದಾರೆ. ಬಾಲಿವುಡ್ ನಟನಿಗೆ ಮಿಲಿಟರಿ ಕಾರ್ಯಾಚರಣೆ ಬಗ್ಗೆ ವಿವರಿಸುತ್ತಿದ್ದಾರೆ. ಯಾವುದೇ ಗಂಭೀರ ರಾಷ್ಟ್ರದಲ್ಲಿ ಈ ಬಗ್ಗೆ ಯೋಚಿಸಲಾಗದು. ಇದು ನರೇಂದ್ರ ಮೋದಿ ನೇತೃತ್ವದ ನವಭಾರತದ ದೃಶ್ಯ. ಸೇನೆಗೆ ಅವಮಾನ ಮಾಡಿದೆ' ಎಂದಿದೆ.

ಶಿವಸೇನೆ ಯುಬಿಟಿ ಬಣದ ನಾಯಕಿ ಪ್ರಿಯಾಂಕಾ ಚತುರ್ವೇದಿ ಟ್ವಿಟ್ ಮಾಡಿದ್ದು 'ಆಪರೇಷನ್ ಸಿಂದೂರದ ಭಾಗವಾಗಿದ್ದಸೇನಾಧಿಕಾರಿಗಳು ಸಮವಸ್ತ್ರ ಧರಿಸಿಯೇ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ಈ ಮೂಲಕ ಖಾಸಗಿ ಚಾನೆಲ್ ಹಣ ಮಾಡಿಕೊಳ್ಳಲು ಯತ್ನಿಸುತ್ತಿದೆ' ಎಂದಿದ್ದಾರೆ.

ನೆಟ್ಟಿಗರ ಕಿಡಿ: ಇನ್ನು ನೆಟ್ಟಿಗರು ಕೂಡ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ' ಈ ಮೂಲಕ ಒಂದು ರಾಷ್ಟ್ರೀಯವಾದಿ ಪಕ್ಷ ಕೆಲ ಮತಗಳನ್ನು ಪಡೆಯಲು ಬಯಸುತ್ತಿದೆ' ಎಂದಿದ್ದಾರೆ. ಇನ್ನು ಕೆಲವರು, 'ಮೋದಿಯವರು ಸೇನೆಯನ್ನು ತಮ್ಮ ಸಾರ್ವಜನಿಕ ಸಂಪರ್ಕ (ಪಿಆರ್) ರೀತಿ ರಾಜ ಕೀಯ ಸಾಧನವಾಗಿ ಬಳಸುತ್ತಿದ್ದಾರೆ' ಎಂದು ಕಿಡಿ ಕಾರಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

2 ಸತ್ಯ ಬಯಲು ಮಾಡಿದ 'ಲಕ್ಷ್ಮೀ ನಿವಾಸ' ನಿರ್ದೇಶಕರು, ವೀಕ್ಷಕರು ಫುಲ್ ಹ್ಯಾಪಿ
BBK 12: ಟಾಸ್ಕ್ ಆಡದೇ ಈ ವಾರದ ‘ಕ್ಯಾಪ್ಟನ್’ ಆದ ಸ್ಪಂದನಾ.. ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್!