ಚಿನ್ನುಮರಿ ಚಂದನಾ ಅನಂತಕೃಷ್ಣ ಅವರ ಮದುವೆ ಸಂಬಂಧದಲ್ಲಿ ಮದುಮಗ ಪ್ರತ್ಯಕ್ಷ್ ಅವರನ್ನು ಹೇಗೆ ರೆಡಿ ಮಾಡಲಾಗಿತ್ತು ಎನ್ನುವ ವಿಡಿಯೋ ವೈರಲ್ ಆಗಿದೆ.
ಚಿನ್ನುಮರಿ ಎಂದರೆ ಸಾಕು... ಸೀರಿಯಲ್ ಪ್ರಿಯರ ಕಣ್ಮುಂದೆ ಬರುವುದು ಸೈಕೋ ಜಯಂತ್ ಪತ್ನಿ ಜಾಹ್ನವಿ. ಗಂಡ ತನ್ನನ್ನು ಜೀವಕ್ಕಿಂತ ಹೆಚ್ಚಾಗಿ ಹುಚ್ಚನಂತೆ ಪ್ರೀತಿಸುತ್ತಾನೆ ಎಂದು ತಿಳಿದುಕೊಂಡಿರೋ ಜಾಹ್ನವಿಗೆ ಈಗ ತಾನೇ ತನ್ನ ಗಂಡನ ನಿಜವಾದ ಮುಖ ಗೊತ್ತಾಗುತ್ತಿದೆ. ತನ್ನನ್ನು ಪ್ರೀತಿಸಲು ಆತ ಯಾವ ಮಟ್ಟಿಗೆ ಇಳಿಯುತ್ತಿದ್ದಾನೆ ಎನ್ನುವ ವಿಷಯ ಈಗಷ್ಟೇ ಈ ಪೆದ್ದು ಪತ್ನಿಗೆ ಗೊತ್ತಾಗುತ್ತಿದೆ. ತಾನು ಊಟ ಕೊಟ್ಟೆ ಎನ್ನುವ ಕಾರಣಕ್ಕೆ ಸೆಕ್ಯುರಿಟಿ ಗಾರ್ಡ್ ಅನ್ನು ಥಳಿಸಿರುವುದರಿಂದ ಹಿಡಿದು, ತನ್ನ ಪ್ರೀತಿಯ ಮೊಲವನ್ನು ಬಿಟ್ಟು ಬಂದಿದ್ದು ಅಷ್ಟೇ ಅಲ್ಲದೇ ತಮ್ಮ ಸ್ವಂತ ಮನೆಯವರ ಮೇಲೂ ಕಾಳಜಿ ಮಾಡಿದರೆ ಗಂಡನಿಗೆ ವಿಪರೀತ ಕೋಪ ಬರುತ್ತದೆ ಎಂಬೆಲ್ಲಾ ವಿಷಯ ಈಗ ಅರಿವಿಗೆ ಬರುತ್ತಿದೆ. ಸೀರಿಯಲ್ ಟ್ವಿಸ್ಟ್ ಪಡೆದುಕೊಳ್ಳುತ್ತಿರುವ ನಡುವೆಯೇ ನಿಜ ಜೀವನದಲ್ಲಿಯೂ ಹಸೆಮಣೆ ಏರಿದ್ದಾಳೆ ಚಿನ್ನುಮರಿ. ಈ ಚಿನ್ನುಮರಿಯ ರಿಯಲ್ ಹೆಸರು ಚಂದನಾ ಅನಂತಕೃಷ್ಣ. ನಿನ್ನೆ ಇವರ ಮದುವೆ ಅದ್ಧೂರಿಯಾಗಿ ನಡೆದಿದೆ. ಉದ್ಯಮಿ ಆಗಿರುವ ಪ್ರತ್ಯಕ್ಷ್ ಅವರ ಜೊತೆ ಚಂದನಾ ಮದುವೆ ನಡೆದಿದ್ದು ಕಿರುತೆರೆ ಕಲಾವಿದರು ಸೇರಿದಂತೆ ಹಲವರು ಮದುವೆಗೆ ಬಂದು ಶುಭ ಹಾರೈಸಿದ್ದಾರೆ.
ಮದುವೆಗೆ ಸಂಬಂಧಿಸಿದ ಹಲವಾರು ವಿಡಿಯೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಮದುವೆಯ ಜತೆಗೆ ಪ್ರೀ ವೆಡ್ಡಿಂಗ್ ಫೋಟೋಶೂಟ್‌ನಲ್ಲಿಯೂ ಚಂದನಾ ಅನಂತಕೃಷ್ಣ ಮತ್ತು ಪ್ರತ್ಯಕ್ಷ್ ಮಿಂಚಿದ್ದರು. ಲಾಲ್‌ಬಾಗ್, ಮಲ್ಲೇಶ್ವರ ಸೇರಿ ಹಲವೆಡೆ ಪಲ್ಲವಿ ಅನುಪಲ್ಲವಿ ಸಿನಿಮಾದ ನಗುವ ನಯನ ಮಧುರ ಮೌನ ಹಾಡಿಗೆ ಹೆಜ್ಜೆ ಹಾಕಿದ್ದರು. ಇದೀಗ ಇನ್ನೊಂದು ವೈರಲ್ ವಿಡಿಯೋದಲ್ಲಿ, ಉದ್ಯಮಿ ಪ್ರತ್ಯಕ್ಷ್ ಅವರನ್ನು ಮದುಮಗನನ್ನಾಗಿ ಹೇಗೆ ಅಲಂಕಾರ ಮಾಡಿದ್ದರು ಎನ್ನುವ ವಿಡಿಯೋ ಅನ್ನು ಬಸವರಾಜ ಹುಬ್ಬಳ್ಳಿ ಎನ್ನುವವರು ಶೇರ್ ಮಾಡಿಕೊಂಡಿದ್ದಾರೆ. ಇದರಲ್ಲಿ ಪ್ರತ್ಯಕ್ಷ್ ಅವರಿಗೆ ಮದುಮನ ಟಚ್ ಅಪ್ ಕೊಟ್ಟಿರುವುದನ್ನು ನೋಡಬಹುದಾಗಿದೆ. ಅಂದಹಾಗೆ, ಪ್ರತ್ಯಕ್ಷ್ ಅವರು, ನಟ, ದಿವಂಗತ ಉದಯ್ ಹುತ್ತಿನಗದ್ದೆ ಹಾಗೂ ಲಲಿತಾಂಜಲಿ ಉದಯ್ ಅವರ ಪುತ್ರ.
ಹೆಂಡತಿ- ಅಸ್ಟ್ರಾಲಾಜಿ ಇಬ್ರಲ್ಲಿ ಹೆಚ್ಚು ಪ್ರೀತಿಸೋದು ಯಾರನ್ನು ಅಂತ ಕೇಳಿದ್ರೆ ಹೀಗೆ ಹೇಳೋದಾ ಗುರೂಜಿ?
ಇನ್ನು ಚಂದನಾ ಅವರು ಮದುವೆಯಾಗುತ್ತಿರುವ ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದು, ಚಿತ್ರನಟ ದಿವಂಗತ ಉದಯ್ ಹುತ್ತಿನಗದ್ದೆ - ನಟಿ ಲಲಿತಾಂಜಲಿ ದಂಪತಿಯ ಮಗನಾಗಿದ್ದಾರೆ. ನಟಿ ಚಂದನಾ ಅವರು ಚಿನ್ನುಮರಿ ಆಗುವ ಮುನ್ನ, ರಾಜಾ ರಾಣಿ ಸೀರಿಯಲ್‌ನಲ್ಲಿ ನಟಿಸಿದ್ದರು. ಆದರೆ ಇವರ ಫೇಮಸ್ ಆಗಿದ್ದು, ಬಿಗ್ ಬಾಸ್ ಮನೆಗೆ ಹೋಗಿ ಬಂದ ಮೇಲೆ. ಬಿಗ್ ಬಾಸ್ ಕನ್ನಡ 7 ಹಾಗೂ 'ಭರ್ಜರಿ ಬ್ಯಾಚುಲರ್ಸ್' ಕಾರ್ಯಕ್ರಮಗಳಲ್ಲಿ ಇವರು ಸ್ಪರ್ಧಿಸಿದ್ದರು. ಹೂಮಳೆ ಸೀರಿಯಲ್‌ನಲ್ಲಿ ಕಾಣಿಸಿಕೊಂಡಿದ್ದ ನಟಿ ಚಂದನಾ ಅನಂತಕೃಷ್ಣ ಇದೀಗ ಲಕ್ಷ್ಮೀ ನಿವಾಸ ಸೀರಿಯಲ್ ಮೂಲಕ ಜನಪ್ರಿಯತೆ ಗಳಿಸುತ್ತಿದ್ದಾರೆ.
ಇನ್ನು ಪ್ರತ್ಯಕ್ಷ್ ಕುರಿತು ಹೇಳುವುದಾದರೆ, ಮೂಲತಃ ಚಿಕ್ಕಮಗಳೂರಿನವರು. ಇವರ ತಂದೆ ಉಯದ್ ಅವರು, ಕೆಲ ವರ್ಷ ಹಲವು ಚಿತ್ರಗಳಲ್ಲಿ ನಟಿಸಿದರು. 1987ರಲ್ಲಿ ತೆರೆ ಕಂಡಿದ್ದ ಆರಂಭ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ್ದವರು. ಅಗ್ನಿಪರ್ವ , ಶುಭ ಮಿಲನ , ಜಯಭೇರಿ , ಉದ್ಭವ , ಅಮೃತ ಬಿಂದು , ಶಿವಯೋಗಿ ಅಕ್ಕಮಹಾದೇವಿ , ಉಂಡು ಹೋದ ಕೊಂಡು ಹೋದ , ಕ್ರಮ ಮುಂತಾದ ಚಿತ್ರಗಳಲ್ಲಿ ಇವರು ಬಣ್ಣ ಹಚ್ಚಿದ್ದಾರೆ. ಬಳಿಕ ಅವರು, ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮುಂದುವರೆಸಿದರು. ಚಿಕ್ಕಮಗಳೂರಿನಲ್ಲಿ ಕಾಫಿ ಎಸ್ಟೇಟ್ ಹೊಂದಿದ್ದಾರೆ. 2022ರಲ್ಲಿ ಅವರು ನಿಧನರಾಗಿದ್ದು, ಪ್ರತ್ಯಕ್ಷ್ ಅವರೂ ಕಾಫಿ ಎಸ್ಟೇಟ್ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.
ಐಶ್ವರ್ಯ- ಅಭಿಷೇಕ್ ಕಲಹಕ್ಕೆ ಇದೇ ಕಾರಣನಾ? ಕಂಗನಾ ಕಂಡ್ರೆ ಆಗದವರೂ ಈ ಮಾತನ್ನು ಒಪ್ತಿರೋದ್ಯಾಕೆ?