ಸ್ಟಾರ್ ಸುವರ್ಣದಲ್ಲಿ ಸದ್ಯದಲ್ಲೇ ಶುರುವಾಗಲಿದೆ ವರಲಕ್ಷ್ಮಿಯ ಕಥೆ 'ಲಕ್ಷ್ಮಿ ಟಿಫಿನ್ ರೂಮ್'

Published : Mar 01, 2024, 01:01 PM ISTUpdated : Mar 01, 2024, 01:29 PM IST
ಸ್ಟಾರ್ ಸುವರ್ಣದಲ್ಲಿ ಸದ್ಯದಲ್ಲೇ ಶುರುವಾಗಲಿದೆ ವರಲಕ್ಷ್ಮಿಯ ಕಥೆ  'ಲಕ್ಷ್ಮಿ ಟಿಫಿನ್ ರೂಮ್'

ಸಾರಾಂಶ

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಇದೇ ಮೊದಲ ಬಾರಿಗೆ ಸ್ಟಾರ್ ಸುವರ್ಣ ವಾಹಿನಿಯ ಧಾರಾವಾಹಿ ಮೂಲಕ ವಿಶೇಷ ಪಾತ್ರದಲ್ಲಿ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಹೊಸದೊಂದು ಸೀರಿಯಲ್ ಶುರುವಾಗುತ್ತಿದೆ. ಅದು 'ಲಕ್ಷ್ಮಿ ಟಿಫಿನ್ ರೂಮ್'. ಕಥಾ ನಾಯಕಿ ವರಲಕ್ಷ್ಮಿ ನೇರ ನುಡಿಯನ್ನು ಹೊಂದಿರೋಳು, ಎಂತಹ ಸಂದರ್ಭದಲ್ಲೂ ಈಕೆ ನ್ಯಾಯದ ಪರ ನಿಲ್ಲುವ ಗಟ್ಟಿಗಿತ್ತಿ. ಐಎಎಸ್ ಮಾಡಬೇಕೆಂಬ ಕನಸನ್ನು ಕಂಡಿರುತ್ತಾಳೆ. ಆದರೆ ಪರಿಸ್ಥಿತಿಯ ಕೈಗೊಂಬೆಯಾಗಿ, ಹೆಣ್ಣು ಮಕ್ಕಳು ಕೇವಲ ಅಡುಗೆ ಮನೆಗೆ ಸೀಮಿತ ಎಂಬ ಮನಸ್ಥಿತಿಯಿರುವ ಮನೆತನಕ್ಕೆ ಸೊಸೆಯಾಗಿ ಹೋಗುತ್ತಾಳೆ. 

ಆ ಮನೆಯ ರೀತಿ ರಿವಾಜುಗಳು, ಕಟ್ಟುಪಾಡುಗಳನ್ನು ಭೇದಿಸಿ ತನ್ನ ಗಂಡನ ಮನೆಯಲ್ಲಿರುವ ಎಲ್ಲಾ ಸವಾಲುಗಳನ್ನು ಎದುರಿಸಿ, ವರಲಕ್ಷ್ಮಿ ತನ್ನ ಐಎಎಸ್ ಕನಸನ್ನು ನನಸಾಗಿಸುತ್ತಾಳಾ ? ಈ ಮೂರುಗಂಟಿನ ಬಂಧ, ವರಲಕ್ಷ್ಮಿ ಕನಸುಗಳನ್ನು ಕಟ್ಟಿಹಾಕುತ್ತಾ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ. ಹೆಣ್ಣೊಬ್ಬಳು ಕೂಡು ಕುಟುಂಬಕ್ಕೆ ಸೊಸೆಯಾಗಿ ಹೋದಾಗ ತನ್ನ ಕನಸನ್ನು ನನಸಾಗಿಸಲು ಏನೆಲ್ಲಾ ಕಷ್ಟಗಳನ್ನು ಎದುರಿಸಬೇಕಾಗುತ್ತೆ ಎಂಬುದನ್ನು ಈ ಕಥೆಯಲ್ಲಿ ಅತ್ಯದ್ಭುತವಾಗಿ ತೋರಿಸಲಾಗಿದೆ.

ಡಾಲಿ ಧನಂಜಯ್ ಸಿನಿಮಾ ಹೀರೋ 'ಪತಿ'ಯಾದ್ರು; ನಾಗಭೂಷಣ್‌ಗೆ ಜೋಡಿಯಾದ್ರು ಮಲೈಕಾ!

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಇದೇ ಮೊದಲ ಬಾರಿಗೆ ಸ್ಟಾರ್ ಸುವರ್ಣ ವಾಹಿನಿಯ ಧಾರಾವಾಹಿ ಮೂಲಕ ವಿಶೇಷ ಪಾತ್ರದಲ್ಲಿ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಜೊತೆಗೆ ಸುನೇತ್ರ ಪಂಡಿತ್, ಅನಂತವೇಲು, ವಚನ್, ಮಧುಮಿತಾ, ವಿಜಯಲತಾ, ಕಾವ್ಯ, ಪ್ರೀತಮ್ ಮಕ್ಕಿಹಾಳಿ, ಭಗತ್ ಸೇರಿದಂತೆ ಇನ್ನು ಅನೇಕ ಕಲಾವಿದರು ಈ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ.  

ಬಹಳಷ್ಟು ಸ್ಟಾರ್ ನಟರ ಜೊತೆ ನಟಿಸಿದ್ದ ಮಾಲಾಶ್ರೀ ನಟ ವಿಷ್ಣುವರ್ಧನ್‌ಗೆ ಯಾಕೆ ಜೋಡಿಯಾಗಲಿಲ್ಲ?

ಇದೇ ಸೋಮವಾರದಿಂದ (04 ಮಾರ್ಚ್ 2024)) ಸಂಜೆ 6.30 ಕ್ಕೆ ಶುರುವಾಗ್ತಿದೆ ಪ್ರೀತಿ, ಆಕಾಂಕ್ಷೆ ಒಳಗೊಂಡ ವರಲಕ್ಷ್ಮಿಯ ಕಥೆ 'ಲಕ್ಷ್ಮಿ ಟಿಫಿನ್ ರೂಮ್'  ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಕಡಲು,ಸೂರ್ಯ ಹಾಗೂ ನನ್ನ ಕಿರಣಾ… ಪತಿ ಜೊತೆ ಶ್ವೇತಾ ಚೆಂಗಪ್ಪ ಸ್ಪೆಷಲ್ ಡೇಟ್
ಈಡೇರಿದ ಪ್ರಾರ್ಥನೆ; ಪತಿಯೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದ ಗಾಯಕಿ ಸುಹಾನಾ ಸೈಯದ್