
ಬೆಂಗಳೂರು (ಮೇ.26): ಸಹ ನಟಿ ಮೇಲೆ ಬಲಾತ್ಕಾರ ಆರೋಪದಡಿ ನಟ ಮನು ಮಡೇನೂರು ಬಂಧನ ಪ್ರಕರಣದ ತನಿಖೆ ಮುಂದುವರೆದಿದ್ದು, ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಸಂತ್ರಸ್ತೆ ಹಾಗೂ ಆರೋಪಿಯ ತಲಾ ಎರಡು ಮೊಬೈಲ್‌ಗಳನ್ನು ಜಪ್ತಿ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ(ಎಫ್‌ಎಸ್‌ಎಲ್) ಕಳುಹಿಸಿದ್ದಾರೆ. ಪ್ರಕರಣದ ಆರೋಪಿ ಮನು ವಿಚಾರಣೆ ಮುಂದುವರೆಸಿರುವ ಪೊಲೀಸರು ಆತನ ಹೇಳಿಕೆ ದಾಖಲಿಸುತ್ತಿದ್ದಾರೆ. ಸಂತ್ರಸ್ತೆಯ ದೂರು ಆಧರಿಸಿ ಆರೋಪಿಯನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಈ ನಡುವೆ ಇಬ್ಬರ ನಾಲ್ಕು ಮೊಬೈಲ್‌ಗಳನ್ನು ಜಪ್ತಿ ಮಾಡಿ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ.
ಸಂತ್ರಸ್ತೆ ತನ್ನ ದೂರಿನಲ್ಲಿ ಮನು ತನ್ನ ಮೇಲೆ ಬಲಾತ್ಕಾರ ಮಾಡುವುದನ್ನು ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಆದರೆ, ಮನು ಮೊಬೈಲ್‌ಗಳಲ್ಲಿ ಆ ರೀತಿಯ ಯಾವುದೇ ವಿಡಿಯೋಗಳು ಪತ್ತೆಯಾಗಿಲ್ಲ. ಹೀಗಾಗಿ ತನ್ನ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಆ ವಿಡಿಯೋಗಳನ್ನು ಡಿಲೀಟ್ ಮಾಡಿರುವ ಸಾಧ್ಯತೆಯಿದೆ. ಹೀಗಾಗಿ ಪೊಲೀಸರು ಡಿಲೀಟ್ ಆಗಿರುವ ದತ್ತಾಂಶವನ್ನು ಪುನಃ ಪಡೆಯಲು ಮೊಬೈಲ್‌ಗಳನ್ನು ಎಫ್‌ಎಸ್‌ಎಲ್‌ಗೆ ರವಾನಿಸಿದ್ದಾರೆ.
ಕೆಲ ನಟ-ನಟಿಯರ ವಿಚಾರಣೆ ಸಾಧ್ಯತೆ: ಈ ನಡುವೆ, ಸಂತ್ರಸ್ತೆ ಹಾಗೂ ಆರೋಪಿ ಮನು ನಡುವೆ ಕಳೆದ 31 ತಿಂಗಳಲ್ಲಿ ನಡೆದಿರುವ ಸಾವಿರಾರು ವಾಟ್ಸಾಪ್ ಸಂದೇಶಗಳನ್ನು ಸಂಗ್ರಹಿಸಿ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇಬ್ಬರ ನಡುವಿನ ಆಡಿಯೋ-ವಿಡಿಯೋ ಸಂಭಾಷಣೆ ವೇಳೆ ಕೆಲ ಕಿರುತೆರೆ ಹಾಗೂ ಬೆಳ್ಳಿತೆರೆಯ ನಟ-ನಟಿಯರ ಹೆಸರು ಪ್ರಸ್ತಾಪವಾಗಿರುವುದರಿಂದ ಶೀಘ್ರ ಆ ನಟ-ನಟಿಯರಿಗೂ ಪೊಲೀಸರು ನೋಟಿಸ್ ಜಾರಿಗೊಳಿಸಿ ಹೇಳಿಕೆ ದಾಖಲಿಸಲು ಸಿದ್ಧತೆ ನಡೆಸಿದ್ದಾರೆ.
ಪ್ರಕರಣದ ಹಿನ್ನೆಲೆ: ಮೂರು ವರ್ಷದ ಹಿಂದೆ ಕಿರುತೆರೆ ಕಾಮಿಡಿ ಶೋವೊಂದರಲ್ಲಿ ಸ್ಪರ್ಧಿಗಳಾಗಿದ್ದ ಮನು ಮತ್ತು ಸಂತ್ರಸ್ತೆ ಸ್ನೇಹಿತರಾಗಿದ್ದರು. ಈ ವೇಳೆ ಮನು ಮದುವೆಯಾಗುವುದಾಗಿ ನಂಬಿಸಿ ಸಂತ್ರಸ್ತೆ ಮೇಲೆ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದರು. ಪರಿಣಾಮ ಸಂತ್ರಸ್ತೆ ಎರಡು ಬಾರಿ ಗರ್ಭವತಿಯಾಗಿದ್ದು, ಆರೋಪಿ ಮನು ಗರ್ಭಪಾತ ಮಾಡಿಸಿದ ಆರೋಪ ಕೇಳಿ ಬಂದಿದೆ. ಮದುವೆಯಾಗುವಂತೆ ಕೇಳಿದ್ದಕ್ಕೆ ಸಂತ್ರಸ್ತೆ ಮೇಲೆ ದೈಹಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದರು. ಈ ಸಂಬಂಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಮತ್ತೊಂದು ಆಡಿಯೋ ವೈರಲ್: ಸಂತ್ರಸ್ತೆಯನ್ನು ಮದುವೆಯಾಗಿರುವುದಾಗಿ ಆರೋಪಿ ಮನು ಹೇಳಿದ್ದಾರೆ ಎನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಾನು ಆಕೆಯನ್ನು ಮದುವೆಯಾಗಿದ್ದಾನೆ. ಎಲ್ಲಿ ಬೇಕಾದರೂ ಹೇಳುತ್ತೇನೆ. ಆಕೆ ನನ್ನ ಹೆಂಡತಿ. ನಾನು ಆಕೆಗೆ ಏನು ಬೇಕಾದರೂ ಮಾಡುತ್ತೇನೆ. ಗಂಡ-ಹೆಂಡತಿ ವಿಚಾರದಲ್ಲಿ ಯಾರೂ ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ ಎಂದು ಮನು ಆಡಿಯೋದಲ್ಲಿ ಹೇಳಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.