
ಧಾರಾವಾಹಿಗಳು, ರಿಯಾಲಿಟಿ ಶೋಗಳು, ಗೆಮ್ ಶೋಗಳಿಂದ ವೀಕ್ಷಕರ ಮನಗೆದ್ದಿರುವ ಜೀ ಕನ್ನಡ ವಾಹಿನಿಯಲ್ಲಿ ಈಗಾಗಲೇ ಡ್ರಾಮಾ ಜೂನಿಯರ್ಸ್, ಸರಿಗಮಪ, ವೀಕೆಂಡ್ ವಿಥ್ ರಮೇಶ್, ಕಾಮಿಡಿ ಕಿಲಾಡಿಗಳು, ಡಾನ್ಸ್ ಕರ್ನಾಟಕ ಡಾನ್ಸ್, ಜೋಡಿ ನಂಬರ್ 1, ಸೂಪರ್ ಕ್ವೀನ್‌ನಂತಹ ಅನೇಕ ಜನಮೆಚ್ಚಿದ ರಿಯಾಲಿಟಿ ಶೋಗಳನ್ನು ಜನರ ಮುಂದಿಟ್ಟು ಅದರಲ್ಲಿ ಯಶಸ್ವೀ ಆಗಿರುವ ಜೀ ಕನ್ನಡ ಈಗ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದೆ.
ಹೊಚ್ಚ ಹೊಸ ರಿಯಾಲಿಟಿ ಶೋ ಫ್ಯಾಮಿಲಿ ನಂಬರ್ ಇದೇ ಆಗಸ್ಟ್ 2 ರಿಂದ ರಾತ್ರಿ 9 ಗಂಟೆಗೆ ನಿಮ್ಮನ್ನು ಮನರಂಜಿಸಲಿದೆ. ಕನ್ನಡ ಕಿರುತೆರೆ ಇತಿಹಾಸದಲ್ಲಿಯೇ ಇದು ವಿಭಿನ್ನ ಪ್ರಯತ್ನವಾಗಿದ್ದು ನಿಮ್ಮ ನೆಚ್ಚಿನ ತಾರೆಯರು ಅವರ ಕುಟುಂಬದವರ ಜೊತೆಗೆ ಹೇಗೆ ಇರುತ್ತಾರೆ ಎಂಬುದನ್ನು ನಿಮ್ಮ ತನಕ ತಲುಪಿಸುವುದೇ ಈ ರಿಯಾಲಿಟಿ ಶೋ ದ ಮುಖ್ಯ ಉದ್ದೇಶ.
ಈ ರಿಯಾಲಿಟಿ ಶೋನಲ್ಲಿ ಸಕ್ಕತ್ ಟ್ವಿಸ್ಟ್ ಜೊತೆಗೆ ಫನ್ ಇರಲಿದ್ದು ನಿಮಗೆ 100% ಮನರಂಜನೆ ಸಿಗೋದಂತೂ ಗ್ಯಾರಂಟಿ. ಅಷ್ಟೇ ಅಲ್ಲದೇ ಪ್ರತಿ ವಾರ ವಿಭಿನ್ನ ಬಗೆಯ ರೌಂಡ್ಸ್ ಇರಲಿದ್ದು ಯಾರು ಹೇಗೆ ಪರ್ಫಾರ್ಮ್ ಮಾಡ್ತಾರೆ ಎನ್ನುವುದಕ್ಕೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ.
ತರಲೆ ಮಾತು, ವಿಭಿನ್ನ ನಿರೂಪಣಾ ಶೈಲಿಯಿಂದ ಕನ್ನಡಿಗರ ಮನಗೆದ್ದ ನಿರಂಜನ್ ದೇಶಪಾಂಡೆ ಅವರು ಫ್ಯಾಮಿಲಿ ನಂ.1 ನ ನಿರೂಪಣಾ ಜವಾಬ್ದಾರಿಯನ್ನು ಹೊತ್ತುಕೊಂಡರೆ ʼಗೋಲ್ಡನ್ ಕ್ವೀನ್ʼ ಅಮೂಲ್ಯ, ಎವರ್‌ಗ್ರೀನ್ ಚೆಲುವೆ, ರಾಜಕಾರಣಿ ತಾರಾ ಅನುರಾಧ, ನಟ ಶರಣ್ ಅವರು ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಇನ್ನು ರಜತ್-ಅಕ್ಷತಾ, ಸುಜಯ್-ಸಿಂಚನ, ಪ್ರಿಯ ಕೇಸರಿ-ಶಿವರಾಂ,ಅಲ್ಲು ರಘು-ಸುಶ್ಮಿತಾ, ಮಲ್ಲಯ್ಯ-ನೀಲಮ್ಮ, ಮೋಹನ್ ಕುಮಾರ್-ಪಲ್ಲವಿ, ವಿಶಾಲ್ ಹೆಗ್ಡೆ-ಪ್ರಿಯ, ಶಿಲ್ಪಿ-ಶೈಲೇಶ್, ಸಮೀರ್ ಆಚಾರ್ಯ-ಶ್ರಾವಣಿ ತಮ್ಮ ಕುಟುಂಬದವರೊಡನೆ ಸೇರಿ ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಲಿದ್ದಾರೆ..
ಸಂಬಂಧ, ಒಗ್ಗಟ್ಟಿಗೆ ಬೆಲೆಕೊಡುವ ಕೊಡುವ ವಿಭಿನ್ನ ಕಾನ್ಸೆಪ್ಟ್ ಇರುವ ಹೊಚ್ಚಹೊಸ ರಿಯಾಲಿಟಿ ಶೋ 'ನಾವು ನಮ್ಮವರು'! ಇಲ್ಲಿ ಸ್ಪರ್ಧಿಗಳು ಅನೇಕ ಟ್ವಿಸ್ಟ್ಸ್ ಇರುವ ಬೇರೆ ಬೇರೆ ಟಾಸ್ಕ್‌ಗಳಲ್ಲಿ ತಮ್ಮ ಕುಟುಂಬದವರ ಜೊತೆ ಸೇರಿ ಭಾಗವಹಿಸಲಿದ್ದಾರೆ. ಸಂಬಂಧಗಳನ್ನು ಸಂಭ್ರಮಿಸೋ 'ನಾವು ನಮ್ಮವರು' ರಿಯಾಲಿಟಿ ಶೋ ಕುಟುಂಬದ ಹಳೆಯ ನೆನಪುಗಳನ್ನು ಸೆಲೆಬ್ರಿಟಿ ಸ್ಪರ್ಧಿಗಳ ಮೂಲಕ ವೀಕ್ಷಕರ ಮುಂದಿಡುವ ಕನ್ನಡಿ! ಸಂಬಂಧಗಳ ಬೇರನ್ನು ಗಟ್ಟಿ ಮಾಡುವ ಹೊಸ ರಿಯಾಲಿಟಿ ಶೋ 'ನಾವು ನಮ್ಮವರು' ಇದೇ ಆಗಸ್ಟ್ 2 ರಿಂದ ರಾತ್ರಿ 9 ಗಂಟೆಗೆ ನಿಮ್ಮ ಜೀ ಕನ್ನಡದಲ್ಲಿ!
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.