ನಿವೇದಿತಾ- ಚಂದನ್​ಶೆಟ್ಟಿ ದಾಂಪತ್ಯಕ್ಕೆ ನಾಲ್ಕು ವರ್ಷ: ಹೊಸ ಚಿತ್ರದ ರೊಮ್ಯಾಂಟಿಕ್​ ಮೂಡ್​ನಲ್ಲಿ ದಂಪತಿ

By Suvarna News  |  First Published Feb 27, 2024, 1:17 PM IST

ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ನಾಲ್ಕನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಜೊತೆಯಾಗಿ ನಟಿಸುತ್ತಿರುವ ಕ್ಯಾಂಡಿ ಕ್ರಶ್​ ಚಿತ್ರದ ಸಾಂಗ್​ ಶೇರ್​ ಮಾಡಿಕೊಂಡಿದ್ದಾರೆ. 
 


ಬಾರ್ಬಿಡಾಲ್​ ಎಂದೇ ಫೇಮಸ್​ ಆಗಿರೋ ನಿವೇದಿತಾ ಗೌಡ ಇತ್ತೀಚಿಗೆ ರೀಲ್ಸ್​ ಮಾಡುವುದು ಹೆಚ್ಚುತ್ತಲೇ ಇದೆ. ದಿನಕ್ಕೊಂದರಂತೆ ಡ್ರೆಸ್​ ಮಾಡಿಕೊಂಡು ರೀಲ್ಸ್​ ಮಾಡುತ್ತಾರೆ. ಇವರ ಸೌಂದರ್ಯಕ್ಕಾಗಿಯೇ ಫ್ಯಾನ್ಸ್​ ಸಂಖ್ಯೆ ಸಕತ್​ ಹೆಚ್ಚಿದೆ. ಇದೇ  ಕಾರಣಕ್ಕೆ ಇವರು ಇನ್​ಸ್ಟಾಗ್ರಾಮ್​ನಲ್ಲಿ ವಾರಕ್ಕೆ ಏನಿಲ್ಲವೆಂದರೂ ನಾಲ್ಕೈದು ವಿಡಿಯೋ ಅಪ್​ಲೋಡ್​  ಮಾಡುತ್ತಾರೆ. ಹಲವೊಮ್ಮ ಸಿಂಗಲ್​ ಆಗಿ, ಕೆಲವೊಮ್ಮೆ ಪತಿ ಚಂದನ್​ ಶೆಟ್ಟಿ ಜೊತೆ ಈಕೆ ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್​ ಹಾಕುತ್ತಿರುತ್ತಾರೆ. ಇವರು ಹಾಕುವ ಎಲ್ಲಾ ವಿಡಿಯೋಗಳು ಸಕತ್​ ಸುದ್ದಿ ಮಾಡುತ್ತೆ.  ಈಕೆ ಏನೇ ಡ್ರೆಸ್ ಹಾಕಿದ್ರೂ ತುಂಬಾ ಮುದ್ದಾಗಿ ಕಾಣುವ ಕಾರಣ ಕಮೆಂಟ್​ಗಳ ಸುರಿಮಳೆಯೇ ಆಗುತ್ತದೆ. ಅದರ ಜೊತೆ ಅಷ್ಟೇ ಟ್ರೋಲ್​ಗಳೂ ಬರುತ್ತವೆ. ಟ್ರೋಲ್​ಗೆ ಜಗ್ಗದೇ  ನಿವೇದಿತಾ ಹಲವಾರು ವಿಡಿಯೋಗಳನ್ನು ಶೇರ್​ ಮಾಡುತ್ತಲೇ ಇರುತ್ತಾರೆ. ಇದಕ್ಕೆ ಪರ-ವಿರೋಧ ಕಮೆಂಟ್​ಗಳ ಸುರಿಮಳೆಯಾಗುತ್ತಲೇ ಇರುತ್ತದೆ.  ಕಮೆಂಟ್​ಗಳು ಏನೇ ಇದ್ದರೂ ನಟಿ ಮಾತ್ರ ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ಆ್ಯಕ್ಟೀವ್​ ಆಗಿದ್ದಾರೆ. 

ಇವರ ಸೌಂದರ್ಯಕ್ಕಾಗಿಯೇ ಫ್ಯಾನ್ಸ್​ ಸಂಖ್ಯೆ ಸಕತ್​ ಹೆಚ್ಚಿದೆ. ಇದೇ  ಕಾರಣಕ್ಕೆ ಇವರು ಇನ್​ಸ್ಟಾಗ್ರಾಮ್​ನಲ್ಲಿ ವಾರಕ್ಕೆ ಏನಿಲ್ಲವೆಂದರೂ ನಾಲ್ಕೈದು ವಿಡಿಯೋ ಅಪ್​ಲೋಡ್​  ಮಾಡುತ್ತಾರೆ. ಬಾರ್ಬಿ ಡಾಲ್ ಎಂದೂ ಅಭಿಮಾನಿಗಳಿಂದ ಕರೆಸಿಕೊಳ್ತಿರೋ ಈಕೆ ಹಾಕುವ ವಿಡಿಯೋ (Video), ಫೋಟೋಗಳಿಗಾಗಿಯೇ ಫ್ಯಾನ್ಸ್ ಕಾತರದಿಂದ ಕಾಯ್ತಾ ಇರ್ತಾರೆ.      ಈಕೆ ಏನೇ ಡ್ರೆಸ್ ಹಾಕಿದ್ರೂ ತುಂಬಾ ಮುದ್ದಾಗಿ ಕಾಣುವ ಕಾರಣ ಕಮೆಂಟ್​ಗಳ ಸುರಿಮಳೆಯೇ ಆಗುತ್ತದೆ. ಅದರ ಜೊತೆ ಅಷ್ಟೇ ಟ್ರೋಲ್​ಗಳೂ ಬರುತ್ತವೆ. ಟ್ರೋಲ್​ಗೆ ಜಗ್ಗದೇ  ನಿವೇದಿತಾ ಹಲವಾರು ವಿಡಿಯೋಗಳನ್ನು ಶೇರ್​ ಮಾಡುತ್ತಲೇ ಇರುತ್ತಾರೆ. ಇದಕ್ಕೆ ಪರ-ವಿರೋಧ ಕಮೆಂಟ್​ಗಳ ಸುರಿಮಳೆಯಾಗುತ್ತಲೇ ಇರುತ್ತದೆ.  ಕಮೆಂಟ್​ಗಳು ಏನೇ ಇದ್ದರೂ ನಟಿ ಮಾತ್ರ ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ಆ್ಯಕ್ಟೀವ್​ ಆಗಿದ್ದಾರೆ. 

Tap to resize

Latest Videos

 

ಇದೀಗ ನಿವೇದಿತಾ  ಮತ್ತು ಚಂದನ್​ ಶೆಟ್ಟಿ ಅವರು ನಾಲ್ಕನೆಯ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದಾರೆ. 2020ರ ಇದೇ ದಿನ ಮದ್ವೆಯಾಗಿದ್ದ ಜೋಡಿಗೆ ಈಗ ನಾಲ್ಕನೇ ಮದುವೆ ದಿನದ ಸಂಭ್ರಮ. ಈ ಸಂದರ್ಭದಲ್ಲಿ ಜೊತೆಯಾಗಿ ರೊಮ್ಯಾನ್ಸ್​ ಮಾಡಿದ ವಿಡಿಯೋ ಒಂದನ್ನು ನಿವೇದಿತಾ ಶೇರ್​ ಮಾಡಿಕೊಂಡಿದ್ದಾರೆ. ಇವರಿಬ್ಬರೂ ಜೊತೆಯಾಗಿ ನಟಿಸ್ತಿರೋ ಕ್ಯಾಂಡಿ ಕ್ರಶ್​ ಮೂವಿಯ ಮೇಕಿಂಗ್​ ವಿಡಿಯೋ ಇದಾಗಿದ್ದು, ಜೋಡಿ ಇದರಲ್ಲಿ ತುಂಬಾ ಮುದ್ದಾಗಿ ಕಾಣಿಸುತ್ತಿದ್ದಾರೆ.

ಏನ್ಮಾಡಿದ್ರೂ ನೀನು ರಶ್ಮಿಕಾ ಆಗಲ್ಲ, ಈಗ್ಲಾದ್ರೂ ರಾಮ ನಾಮ ಜಪಿಸ್ಬಾರ್ದಾ? ನಿವೇದಿತಾಗೆ ನೆಟ್ಟಿಗರ ಕ್ಲಾಸ್

ಇದಕ್ಕೆ ಹಲವಾರು ಮಂದಿ ಹಾರ್ಟ್​ ಎಮೋಜಿ ಹಾಕಿದ್ರೆ, ನಾಲ್ಕು ವರ್ಷವಾಯ್ತು ಇನ್ನಾದರೂ ಮಕ್ಕಳ ಕಡೆ ಗಮನ ಕೊಡಿ ಎಂದು ಕೆಲವರು ದಂಪತಿಗೆ ಬುದ್ಧಿ ಮಾತು ಹೇಳುತ್ತಿದ್ದಾರೆ. ಅದಕ್ಕೆ ಇನ್ನು ಕೆಲವರು ಈಕೆಯೇ ಇನ್ನೂ ಚಿಕ್ಕ ಮಗುವಿನ ರೀತಿ ಇದ್ದಾಳೆ, ಇಷ್ಟು ಬೇಗ ಮಕ್ಕಳ್ಯಾಕೆ ಎಂದು ನಿವೇದಿತಾ ಪರವಾಗಿ ಮಾತನಾಡುತ್ತಿದ್ದಾರೆ. ಅಂದಹಾಗೆ ಈ ಜೋಡಿ ಬಿಗ್​ಬಾಸ್​ ಮನೆಯಲ್ಲಿ ಪರಿಚಯವಾಗಿತ್ತು. ಅಲ್ಲಿಯೇ ಪ್ರೀತಿಗೆ ತಿರುಗಿ ಮದ್ವೆವರೆಗೂ ಮುಂದುವರೆಯಿತು. 2020ರ ಫೆಬ್ರವರಿ 26ರಂದು ಇವರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ಬಳಿಕ ಮಾತನಾಡಿದ್ದ ಚಂದನ ಶೆಟ್ಟಿ. ಮದುವೆಯಾಗಿದೆ, ಜವಾಬ್ದಾರಿ ಹೆಚ್ಚಿದೆ. ಇಷ್ಟು ದಿನ ಮನೆಯಲ್ಲಿ ಒಬ್ಬನೇ ಇರುತ್ತಿದ್ದೆ. ಇನ್ಮುಂದೆ ಹೆಂಡತಿ ಇರ್ತಾಳೆ ಎಂದಿದ್ದರು.  ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಶನ್ ಹಾಲ್‌ನಲ್ಲಿ ನಡೆದ ಈ ಮದುವೆಯಲ್ಲಿ  ಪುನೀತ್ ರಾಜ್‌ಕುಮಾರ್ ದಂಪತಿ, ಧ್ರುವ ಸರ್ಜಾ ದಂಪತಿ, ನಿರ್ದೇಶಕ ಚೇತನ್‌ಕುಮಾರ್, ರಘು ಶಾಸ್ತ್ರಿ, ನಟ ಶ್ರೇಯಸ್ ಮಂಜು, ಶೈನ್ ಶೆಟ್ಟಿ, ನಟಿ ಅದ್ವಿತಿ ಶೆಟ್ಟಿ, ನಿರೂಪಕ ಅಕುಲ್ ಬಾಲಾಜಿ, ನಿರಂಜನ್ ದೇಶಪಾಂಡೆ ಮುಂತಾದವರು ಮೈಸೂರಿನ ಸ್ಪೆಕ್ಟ್ರಾ ಕಲ್ಯಾಣ ಮಂಟಪಕ್ಕೆ ಹೋಗಿ ನವಜೋಡಿಗೆ ಶುಭ ಹಾರೈಸಿದ್ದರು. 

ಪ್ರೀತಿ ಅಂದ್ರೇನು ಅಂತ ನಿವೇದಿತಾ ಗೌಡಗೆ ಈಗ ಗೊತ್ತಾಯ್ತಂತೆ! ಮೂರು ವರ್ಷ ಬೇಕಾಯ್ತಾ ಕೇಳ್ತಿದ್ದಾರೆ ಫ್ಯಾನ್ಸ್​
 

click me!