ಸ್ನೇಹಿತೆ ಜೊತೆ ಬೆಡ್​ರೂಮ್​ನಲ್ಲಿ ನಿವೇದಿತಾ ಗೌಡ ಇದೇನಿದು? ವಿಡಿಯೋ ನೋಡಿ ಫ್ಯಾನ್ಸ್​ ಶಾಕ್​!

By Suchethana D  |  First Published Oct 13, 2024, 3:51 PM IST

 ಸ್ನೇಹಿತೆ ಜೊತೆ ಬೆಡ್​ರೂಮ್​ನಲ್ಲಿ ಬಿಗ್​ಬಾಸ್​  ಖ್ಯಾತಿಯ ನಿವೇದಿತಾ ಗೌಡ ರೀಲ್ಸ್ ಮಾಡಿದ್ದಾರೆ. ಆದರೆ ಇದರ ವಿಡಿಯೋ ನೋಡಿ ಫ್ಯಾನ್ಸ್ ಶಾಕ್​ ಆಗಿದ್ದೇಕೆ?
 


ಬಿಗ್​ಬಾಸ್​ ಖ್ಯಾತಿಯ ನಿವೇದಿತಾ ಗೌಡ ಅವರು ಇತ್ತೀಚಿನ ದಿನಗಳಲ್ಲಿ ಸಕತ್​ ಹಾಟ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲ ತಿಂಗಳುಗಳಿಂದ ಸ್ನೇಹಿತೆಯೊಬ್ಬರ ಜೊತೆ ರೀಲ್ಸ್​ ಶುರುವಿಟ್ಟುಕೊಂಡಿದ್ದಾರೆ. ಗಾಯಕ ಚಂದನ್​ ಶೆಟ್ಟಿ ಅವರಿಂದ ಡಿವೋರ್ಸ್​ ಪಡೆದ ಮೇಲೆ ಸ್ನೇಹಿತೆಯ ಜೊತೆಗೆ ರೀಲ್ಸ್​ ಹೆಚ್ಚಾಗಿದೆ.  ಬಳಕುವ ಬಳ್ಳಿಯಂತಿರೋ ನಿವೇದಿತಾ, ಎದೆಗೆ ಪ್ಲಾಸ್ಟಿಕ್​ ಸರ್ಜರಿ ಮಾಡಿಸಿಕೊಂಡ್ರಾ ಎಂದು ಪ್ರತಿಬಾರಿಯೂ ಅವರಿಗೆ ಕಮೆಂಟ್ಸ್​ಗಳ ಸುರಿಮಳೆಯೇ ಆಗುತ್ತಿದೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ನಟಿ ಧಾರಾಳವಾಗಿ ದೇಹ ಪ್ರದರ್ಶನ ಮಾಡುತ್ತಲೇ ರೀಲ್ಸ್​ ಮಾಡುತ್ತಿರುವ ಕಾರಣ, ತೀರಾ ಕೆಟ್ಟದಾಗಿರೋ ಕಮೆಂಟ್ಸ್​ ಜಾಸ್ತಿಯಾಗುತ್ತಿವೆ. ಇದೇ ಕಾರಣಕ್ಕೆ ಚಂದನ್​ ಶೆಟ್ಟಿ ಡಿವೋರ್ಸ್​ ಪಡೆದುಕೊಂಡದ್ದು, ರೀಲ್ಸ್ ಮಾಡುವುದಕ್ಕಾಗಿಯೇ ವಿಚ್ಛೇದನ ಪಡೆದ ಮೊದಲ ಮಹಿಳೆ... ಹೀಗೆ ಏನೇನೋ ಕಮೆಂಟ್ಸ್​ ಮಾಡಿ ನಿವೇದಿತಾರ ತೇಜೋವಧೆ ಮಾಡಲಾಗುತ್ತಿದೆ. ಡಿವೋರ್ಸ್ ಬಳಿಕ ಈಕೆಯನ್ನು ಸುಮ್ಮನೆ ಇರಲು ಬಿಡುತ್ತಲೇ ಇಲ್ಲ, ಸದಾ ಟ್ರೋಲ್​ ಮಾಡುತ್ತಲೇ ಕಾಲ ಕಳೆಯುತ್ತಿದ್ದಾರೆ ನೆಟ್ಟಿಗರು. ಆದರೆ ಇದ್ಯಾವುದಕ್ಕೂ ಇದುವರೆಗೆ ನಿವೇದಿತಾ ತಲೆ ಕೆಡಿಸಿಕೊಂಡವರೇ ಅಲ್ಲ!

ಇದೀಗ ಅದೇ ಸ್ನೇಹಿತೆಯ ಜೊತೆ ಬೆಡ್​ರೂಮ್​ನಲ್ಲಿ ನಿವೇದಿತಾ ತುಂಟಾಟವಾಡಿದ್ದಾರೆ. ಸುಮ್ಮನೇ ಸ್ನೇಹಿತೆಯನ್ನು ಅಪ್ಪಿಕೊಂಡಿದ್ದಾರೆ. ಇಬ್ಬರೂ ಸ್ನೇಹಿತೆಯರು ತುಂಬಾ ಕ್ಲೋಸ್​​ ಫ್ರೆಂಡ್ಸ್​ ರೀತಿಯಲ್ಲಿ ನಗುತ್ತಿದ್ದಾರೆ. ಆದರೆ ಇದಕ್ಕೂ ನೆಟ್ಟಿಗರು ಸುಮ್ಮನೇ ಬಿಟ್ಟಿಲ್ಲ. ಬೆಡ್​ರೂಮ್​ನಲ್ಲಿ ಈ ಪರಿಯ ಚೆಲ್ಲಾಟ ಮಾಡಿದ್ರೆ ಇದನ್ನು ಏನು ಅಂದುಕೊಳ್ಳಬೇಕು ಎಂದು ಪ್ರಶ್ನಿಸುತ್ತಿದ್ದಾರೆ. ಅದರಲ್ಲಿಯೂ ನಿವೇದಿತಾ ಸ್ನೇಹಿತೆಯ ಬಟ್ಟೆಯ ಬಟನ್​ ಬಿಚ್ಚುವಂತೆ ಮಾಡಿದ್ದು, ಇದಕ್ಕೆ ಸಕತ್​ ನೆಗೆಟಿವ್​ ಕಮೆಂಟ್ಸ್​ ಬರುತ್ತಿದೆ. ಇನ್ನು ಕೆಲವರು ಇಬ್ಬರು ಸ್ನೇಹಿತೆಯರು ಸುಮ್ಮನೇ ಎಂಜಾಯ್​ ಮಾಡಬಾರದಾ? ಅದಕ್ಕೂ ಕೆಟ್ಟ ಕಮೆಂಟ್ಸ್​ ಯಾಕೆ ಎಂದು ಕಮೆಂಟ್ಸ್​ ಹಾಕುತ್ತಿರುವವರ ವಿರುದ್ಧ ಕಿಡಿ ಕಾರುತ್ತಿದ್ದಾರೆ. ಕೆಲ ದಿನಗಳ ಹಿಂದೆ ಇದೇ ಸ್ನೇಹಿತೆ ಜೊತೆ ನಿವೇದಿತಾ ರೀಲ್ಸ್​ ಮಾಡಿ  ಕಮೆಂಟ್ಸ್​ ಸೆಕ್ಷನ್​ ಆಫ್​ ಮಾಡಿದ್ದರು.  ಯಾವುದಕ್ಕೂ ಹೆದರಾಕೆ ಈಗ ಹೀಗೇಕೆ ಮಾಡಿದ್ದಾರೆ ಎನ್ನುವುದು ಮಾತ್ರ ತುಂಬಾ ಕುತೂಹಲ ಎನಿಸಿತ್ತು.

Tap to resize

Latest Videos

undefined

ಬಿಂದಾಸ್​ ನಿವೇದಿತಾಗೆ ಇದೇನಾಯ್ತು? ಗೆಳತಿ ಜತೆ ಲವ್​ಸಾಂಗ್​ ಮಾಡಿ ಕಮೆಂಟ್​ ಸೆಕ್ಷನ್ನೇ ಆಫ್​ ಮಾಡಿಬಿಟ್ರಲ್ಲಾ?

 ಅಂದಹಾಗೆ, ಈ ಸ್ನೇಹಿತೆಯ ಹೆಸರು  ವಾಣಿ ಜಿ.ಎಸ್​.   ಈ ಹೊಸ ಗೆಳತಿ ಯಾರು ಎಂಬ ಬಗ್ಗೆ ಅಭಿಮಾನಿಗಳು ತಡಕಾಡುತ್ತಿದ್ದಾರೆ.  ವಾಣಿ ಅವರು ಕೂಡ ಸೋಷಿಯಲ್​ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ಅವರು ಇನ್​ಸ್ಟಾಗ್ರಾಮ್​ನಲ್ಲಿ ಇದಾಗಲೇ ಹಲವಾರು ರೀಲ್ಸ್​ ಮಾಡಿ ಶೇರ್​ ಮಾಡಿದ್ದಾರೆ. ಅಷ್ಟಕ್ಕೂ,  ವಿಚ್ಛೇದನದ ಬಳಿಕ,  ನಿವೇದಿತಾ ಮೇಲೆ ಕೋಪ ಮಾಡಿಕೊಳ್ಳುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಪತಿ ಚಂದನ್​  ಶೆಟ್ಟಿ ಅವರಿಂದ ನಿವೇದಿತಾ ವಿಚ್ಛೇದನ ಪಡೆದ ಮೇಲೆ ಬಹುತೇಕ ಎಲ್ಲರೂ ನಿವೇದಿತಾ ಅವರನ್ನೇ ದೂರುತ್ತಿದ್ದಾರೆ. 

 

ಚಂದನ್​ ಶೆಟ್ಟಿ ತುಂಬಾ ಒಳ್ಳೆಯವರು, ಅವರ ಜೀವನ ಹಾಳು ಮಾಡಿಬಿಟ್ಟೆ ಎಂದೆಲ್ಲಾ ಸೋಷಿಯಲ್​ ಮೀಡಿಯಾದಲ್ಲಿ ಬೈಗುಳಗಳ ಸುರಿಮಳೆಯಾಗುತ್ತಲೇ ಇದೆ. ಇವರಿಬ್ಬರೂ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು ನಿಜವಾದರೂ ಅದರಲ್ಲಿ ನಿವೇದಿತಾ ಅವರದ್ದೇ ತಪ್ಪಿದೆ ಎನ್ನುವುದು ಚಂದನ್​ ಶೆಟ್ಟಿ ಅಭಿಮಾನಿಗಳ ಮಾತು. ಇದೇ ಕಾರಣಕ್ಕೆ, ನಿವೇದಿತಾ ಅವರ ವಿಡಿಯೋ ಕಂಡಾಗಲೆಲ್ಲಾ ಅವರ ವಿರುದ್ಧ ಕಮೆಂಟ್​ಗಳೇ ಹರಿದಾಡುತ್ತಿವೆ. ಆದರೆ ಇದ್ಯಾವುದಕ್ಕೂ ನಿವೇದಿತಾ ತಲೆ ಕೆಡಿಸಿಕೊಳ್ಳುತ್ತಿಲ್ಲ. ಆದರೆ ಕಳೆದ ಬಾರಿ  ಕಮೆಂಟ್ಸ್​ ಸೆಕ್ಷನ್​ ಆಫ್​ ಮಾಡಿದ್ದ ಕಾರಣ, ಇದೀಗ ಅದರ ಬಗ್ಗೆನೇ ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. 

ಚಂದನ್​ ಶೆಟ್ಟಿ ಹುಟ್ಟುಹಬ್ಬಕ್ಕೆ ನಿವೇದಿತಾ ಹೀಗೆ ವಿಷ್​? ವಿಡಿಯೋ ನೋಡಿ ತಲೆ ಬಿಸಿ ಮಾಡ್ಕೊಂಡ ಫ್ಯಾನ್ಸ್​!

click me!