
ಪುಟ್ಟಕ್ಕನ ಮಕ್ಕಳು (Puttakkana Makkalu) ಸೀರಿಯಲ್‌ನಲ್ಲಿ ಸದ್ಯ ಬಂಗಾರಮ್ಮ ಸತ್ತು ಹೋಗಿದ್ದು, ಸೀರಿಯಲ್ ಬೇರೆ ಬೇರೆ ತಿರುವುಗಳನ್ನು ಪಡೆದುಕೊಳ್ಳುತ್ತಾ ಸಾಗಿದೆ. ಅದೇನೇ ಇದ್ದರೂ ಪುಟ್ಟಕ್ಕ ಪಾತ್ರಧಾರಿಯಾಗಿರುವ ಉಮಾಶ್ರೀ ಮಾತ್ರ ಅದೇ ವರ್ಚಸ್ಸನ್ನು ಉಳಿಸಿಕೊಂಡು ಸೀರಿಯಲ್ ಅನ್ನು ಮುನ್ನಡೆಸುತ್ತಿದ್ದಾರೆ. ತಮ್ಮೆಲ್ಲ ಪಾತ್ರಗಳಿಗೆ ಪರಕಾಯ ಪ್ರವೇಶ ಮಾಡಿದಂತೆ ನಟಿಸುತ್ತಲೇ ಚಿತ್ರಪ್ರಿಯರ ಕಣ್ಮಣಿಯಾಗಿದ್ದಾರೆ ನಟಿ ಉಮಾಶ್ರೀ. ಈಗ 68ರ ಹರೆಯದಲ್ಲಿಯೂ ಅವರ ಮಾಗಿದ ನಟನೆಗೆ ಮನಸೋಲದವರೇ ಇಲ್ಲ.
ಅದರಲ್ಲಿಯೂ ಈಗ ಪುಟ್ಟಕ್ಕನ ಮಕ್ಕಳು ಸೀರಿಯಲ್‌ನಲ್ಲಿ ಪುಟ್ಟಕ್ಕನ ಪಾತ್ರದಲ್ಲಿನ ಅವರ ನಟನೆಗೆ ಕಣ್ಣೀರು ಹಾಕಿದವರು ಅದೆಷ್ಟೋ ಮಂದಿ. ಅವರು ಮಾಡುವ ಪ್ರತಿಯೊಂದು ಪಾತ್ರಗಳಲ್ಲೂ ಸ್ವಂತಿಕೆ, ಜೀವಂತಿಕೆ ಇದೆ. ರಂಗಭೂಮಿ ಮತ್ತು ಚಲನಚಿತ್ರರಂಗಗಳಲ್ಲಿ ಛಾಪು ಮೂಡಿಸಿರುವ ಪ್ರತಿಭಾನ್ವಿತ ಅಭಿನೇತ್ರಿ ಇವರು. ನಟಿಯ ಭಾವುಕತೆಯಲ್ಲಾಗಲಿ, ಹಾವ ಭಾವಗಳಲ್ಲಾಗಲಿ, ಅಭಿವ್ಯಕ್ತಿಯಲ್ಲಾಗಲಿ ಅವರ ಸಮಕ್ಕೆ ಇರುವ ಕಲಾವಿದರು ಅಪರೂಪವೆಂಬುದು ಚಿತ್ರಪ್ರಿಯರ ಅಭಿಪ್ರಾಯ. ಕೆಲವೊಂದು ವೈಶಿಷ್ಟ್ಯಪೂರ್ಣ ಪಾತ್ರಗಳಲ್ಲಿ ಕಣ್ಣುಗಳಲ್ಲಿಯೇ ತುಂಬಿಕೊಡುತ್ತಾರೆ. ಹಲವು ವಿವಿಧ ಪಾತ್ರಗಳಲ್ಲಿ ಲೀಲಾಜಾಲವಾಗಿ ನಟಿಸಿರುವ ಇವರು ಹಾಸ್ಯ ಪಾತ್ರಗಳಿಗೆ ತುಂಬಾ ಪ್ರಸಿದ್ಧರಾಗಿದ್ದಾರೆ.
ಇದೀಗ ಅವರು ಪುಟ್ಟಕ್ಕನ ಮಕ್ಕಳು ಸೀರಿಯಲ್ ಶೂಟಿಂಗ್ ವೇಳೆ ಫೈಟಿಂಗ್ ದೃಶ್ಯವೊಂದನ್ನು ಡಿವಿ ಡ್ರೀಮ್ಸ್ ಯುಟ್ಯೂಬ್ ಚಾನೆಲ್ ಶೇರ್ ಮಾಡಿಕೊಂಡಿದೆ. ಸಹನಾಳನ್ನು ಕಿಡ್ನ್ಯಾಪ್ ಮಾಡಿರುವ ದೃಶ್ಯವಿದು. ಇದೇ ಸಮಯದಲ್ಲಿ ಬಂಗಾರಮ್ಮನಿಗೆ ಶೂಟ್ ಮಾಡಿ ಸಾಯಿಸುವ ದೃಶ್ಯವೂ ಇದೆ. ಈ ಸಂದರ್ಭದಲ್ಲಿ ಉಮಾಶ್ರೀ ಅವರು ಈ ವಯಸ್ಸಿನಲ್ಲಿಯೂ ಹೇಗೆ ಫೈಟಿಂಗ್ ಸೀನ್ ಮಾಡಿದ್ದಾರೆ ಎನ್ನುವುದನ್ನು ಇದರಲ್ಲಿ ನೋಡಬಹುದಾಗಿದೆ. ನಿರ್ದೇಶಕರು ಕಟ್ ಕಟ್ ಹೇಳಿದರೂ, ಬಿಡದ ಉಮಾಶ್ರೀ ಕೊನೆಯ ಪಂಚ್ ಎನ್ನುವಂತೆ ವಿಲನ್ ಒಬ್ಬನನ್ನು ಒದ್ದಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ.
ಇನ್ನು ಉಮಾಶ್ರೀ ಸಿನಿಮಾ ಕುರಿತು ಹೇಳುವುದೇ ಬೇಡ. 325 ಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸತತ ಐದು ಬಾರಿ ಕರ್ನಾಟಕ ರಾಜ್ಯ ಪ್ರಶಸ್ತಿಯನ್ನು ಪಡೆದ ಏಕೈಕ ಕನ್ನಡ ನಟಿ ಎನಿಸಿದ್ದಾರೆ. ರಾಜಕೀಯದಲ್ಲಿ ಸಕ್ರಿಯವಾಗಿರುವ ಇವರು ಕರ್ನಾಟಕ ರಾಜ್ಯ ಸರ್ಕಾರದ ಶಾಸನ ಸಭೆಯ ಸದಸ್ಯರಾಗಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಇತರ ಹಿಂದುಳಿದ ವರ್ಗ ಇಲಾಖೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 2013 ರಲ್ಲಿ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ಇವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾಗಿ ಕಾರ್ಯ ನಿರ್ವಹಿಸಿದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.