ಹೊಸ ಲುಕ್​ನಲ್ಲಿ 'ಪುಟ್ಟಕ್ಕನ ಮಕ್ಕಳು' ವಿಲನ್​ ರಾಜೇಶ್ವರಿ: ಸೋ ಸ್ವೀಟ್​, ನಮ್​ ಕ್ರಷ್​ ಎಂದ ಫ್ಯಾನ್ಸ್​

By Suvarna News  |  First Published Jul 13, 2023, 6:47 PM IST

ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ವಿಲನ್​ ಪಾತ್ರಧಾರಿಯಾಗಿರುವ ರಾಜೇಶ್ವರಿಯವರು ಫೋಟೋಶೂಟ್​ ಮಾಡಿಸಿಕೊಂಡಿದ್ದು ಫ್ಯಾನ್ಸ್​ ಫಿದಾ ಆಗಿದ್ದಾರೆ.
 


ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಟಿಆರ್​ಪಿಯಲ್ಲಿಯೂ ಸದಾ ಟಾಪೆಸ್ಟ್​ ಸ್ಥಾನವನ್ನು ಉಳಿಸಿಕೊಂಡು ಬಂದಿದೆ. ಗಂಡ ಬಿಟ್ಟು ಇನ್ನೊಂದು ಮದುವೆಯಾದರೂ ಪುಟ್ಟಕ್ಕ ತನ್ನ ಮೂರು ಹೆಣ್ಣುಮಕ್ಕಳಾದ  ಸಹನಾ,  ಸ್ನೇಹಾ ಮತ್ತು  ಸುಮಾ ಅವರನ್ನು ಹೇಗೆ ಕಷ್ಟಪಟ್ಟು ಸಾಕುತ್ತಿದ್ದಾಳೆ ಎನ್ನುವ ಕಥಾಹಂದರವನ್ನು ಈ ಧಾರಾವಾಹಿ ಹೊಂದಿದೆ. ಚಿಕ್ಕದೊಂದು ಕ್ಯಾಂಟೀನ್​ ನಡೆಸಿಕೊಂಡು ಮಕ್ಕಳನ್ನು ಈಕೆ ಸಾಕುವ ಪರಿಯಿಂದ ಉತ್ತೇಜನಗೊಂಡು ನಿಜ ಜೀವನದಲ್ಲಿ ಎಷ್ಟೋ ತಾಯಂದಿರು ತಮಗೆ ಇದು ಸ್ಫೂರ್ತಿ ಕೊಟ್ಟಿದೆ ಎಂದೂ ಹೇಳಿದ್ದುಂಟು. ತಮ್ಮ ಕಥೆ ಕೂಡ ಪುಟ್ಟಕ್ಕನ ಕಥೆಗಿಂತ ಭಿನ್ನವಾಗಿಲ್ಲ ಎಂದು ಮಾಧ್ಯಮದ ಮುಂದೆ ಬಂದು ಕಣ್ಣೀರಾಕಿದ್ದೂ ಇದೆ. ಹಾಗೆ ಪುಟ್ಟಕ್ಕನಲ್ಲಿ ತಮ್ಮತನವನ್ನು ಕಂಡುಕೊಳ್ಳುವಷ್ಟರ ಮಟ್ಟಿಗೆ ಈ ಧಾರಾವಾಹಿ ಮನೆಮಾತಾಗಿದ್ದು ಟಿಆರ್​ಪಿಯಲ್ಲಿಯೂ ಮುಂದಿದೆ. ಇದೀಗ ಧಾರಾವಾಹಿ ಕುತೂಹಲ ಹಂತಕ್ಕೆ ತಲುಪಿದ್ದು, ಎರಡನೆಯ ಮಗಳು ಸ್ನೇಹಾ ಎಂಬ ಗಟ್ಟಿಗಿತ್ತಿಯ ಮದುವೆಯ ಕೋಲಾಹಲದ ವರೆಗೆ ಬಂದು ನಿಂತಿದೆ.

ಈ ಧಾರಾವಾಹಿಯಲ್ಲಿ ಪುಟ್ಟಕ್ಕನ ಪಾತ್ರಧಾರಿ, ನಟಿ ಉಮಾಶ್ರಿ ಅವರಷ್ಟೇ ಸಕತ್​ ಫೇಮಸ್​ ಆಗಿರೋ ನಟಿಯೆಂದರೆ ಪುಟ್ಟಕ್ಕನ ಸವತಿ ಅರ್ಥಾತ್​ ಪತಿಯ ಎರಡನೆಯ ಪತ್ನಿಯ ಪಾತ್ರದಲ್ಲಿ ನಟಿಸ್ತಿರೋ ರಾಜೇಶ್ವರಿ. ಹೌದು. ರಾಜೇಶ್ವರಿ ಎಂದಾಕ್ಷಣ ಧಾರಾವಾಹಿ ಪ್ರಿಯರ ಕಣ್ಣಮುಂದೆ ಈ ಪುಟ್ಟಕ್ಕನ ಮಕ್ಕಳ ಧಾರಾವಾಹಿಯ ವಿಲನ್​ ಪಾತ್ರವೇ ಹಾದುಹೋಗುವಷ್ಟರ ಮಟ್ಟಿಗೆ ರಾಜೇಶ್ವರಿ (Rajeshwari) ಪಾತ್ರ ಜೀವ ತುಂಬಿದೆ. ಗಂಡ ಇಲ್ಲದಿದ್ದರೂ ಕ್ಷಣ ಕ್ಷಣಕ್ಕೂ ನೋವನ್ನೇ ಪುಟ್ಟಕ್ಕ ಅನುಭವಿಸುತ್ತಿದ್ದರೂ ಅವರ ಮನೆಯ ಸಮೀಪವೇ ಇದ್ದು, ಕ್ಷಣ ಕ್ಷಣಕ್ಕೂ ಆಕೆಗೆ ತೊಂದರೆ ಕೊಡುವಲ್ಲಿ ಈ ಸವತಿ ರಾಜೇಶ್ವರಿಯದ್ದು ಎತ್ತಿದ ಕೈ. ಪುಟ್ಟಕ್ಕನ ಪತಿಯನ್ನು ಬುಟ್ಟಿಗೆ ಹಾಕಿಕೊಂಡು ಮದುವೆಯಾದರೂ ಪುಟ್ಟಕ್ಕನಿಗೆ ತೊಂದರೆ ಕೊಡುವುದು ಎಂದರೆ ಈಕೆಗೆ ಅದೇನೋ ಖುಷಿ. ರಾಜೇಶ್ವರಿ ಬಂದರೆ ಅದೆಷ್ಟೋ ಮನೆಯಲ್ಲಿ ಆಕೆಗೆ ಹಿಡಿಶಾಪ ಹಾಕುವುದೂ ಇದೆ. ಥೇಟ್​ ವಿಲನ್​ನಂತೆ ಪಾತ್ರ ಮಾಡಿ ಆ ಪಾತ್ರಕ್ಕೆ ಜೀವ ತುಂಬುತ್ತಿರುವ ಈ ರಾಜೇಶ್ವರಿಯವರ ನಿಜವಾದ ಹೆಸರು ಹಂಸ ನಾರಾಯಣಸ್ವಾಮಿ @ ಹಂಸ ಪ್ರತಾಪ್​ (Hamsa Pratap)

Tap to resize

Latest Videos

ಪಟಪಟ ಮಾತನಾಡುವ ಸಿಕ್ರೆ ಸಾಕಾ? ಮದ್ವೆಯಾಗುವ ಹುಡುಗನ ಬಗ್ಗೆ ಅನುಶ್ರೀ ಹೇಳಿದ್ದೇನು?

ಮುದ್ದು ಮೊಗದ ಹಂಸ ಅವರನ್ನು ವಿಲನ್​ ಪಾತ್ರದಲ್ಲಿ ಕಲ್ಪನೆ ಮಾಡಿಕೊಳ್ಳುವುದು ಎಷ್ಟೋ ಮಂದಿಗೆ ಅರಗಿಸಿಕೊಳ್ಳಲಾಗದ ಸತ್ಯವೇ. ಆದರೂ ರಾಜೇಶ್ವರಿ ಪಾತ್ರದೊಳಕ್ಕೆ ಹೊಕ್ಕು ಸಾಕ್ಷಾತ್​ ಖಳನಾಯಕಿಯಾಗಿ ಮಿಂಚುತ್ತಿದ್ದಾರೆ ಹಂಸ. ಹಂಸ ಅವರು ನಟನೆ ಮಾತ್ರವಲ್ಲದೇ ಇನ್​ಸ್ಟಾಗ್ರಾಮ್​ನಲ್ಲಿಯೂ ಸಕತ್​ ಆ್ಯಕ್ಟೀವ್​ ಆಗಿದ್ದಾರೆ. ಒಂದು ಪಾತ್ರವನ್ನು ತೆರೆಯ ಮೇಲೆ ನೋಡಿದವರಿಗೆ ಅವರ ಅಸಲಿ ಮುಖ ಹೇಗಿದೆ ಎಂದು ತಿಳಿಯುವುದು ಕಷ್ಟವೇ. ಆದರೆ ನಟರ ಸಾಮಾಜಿಕ ಜಾಲತಾಣದಲ್ಲಿ (Social Media) ಅವರ ನಿಜವಾದ ರೂಪವನ್ನು ತಿಳಿಯಬಹುದು. ಅದೇ ರೀತಿ ಹಂಸ ಅವರ ಇನ್​ಸ್ಟಾಗ್ರಾಮ್​ ನೋಡಿದರೆ ಅರೆರೆ ಪುಟ್ಟಕ್ಕನ ಮಕ್ಕಳಿನ ರಾಜೇಶ್ವರಿ ಇವರು ಹೌದೋ ಅಲ್ವೋ ಅನ್ನುವಷ್ಟರ ಮಟ್ಟಿಗೆ ಡಿಫರೆಂಟ್​ ಆಗಿ ಕಾಣಿಸುತ್ತದೆ. 

ಅನೇಕ ಆ್ಯಂಗಲ್​ಗಳಲ್ಲಿ, ಬಗೆಬಗೆಯ ಡ್ರೆಸ್​ ತೊಟ್ಟು ಹಂಸ ಇನ್​ಸ್ಟಾಗ್ರಾಮ್​ನಲ್ಲಿ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತಲೇ ಇದ್ದಾರೆ. ಇಂದು ಕೂಡ ಹಲವಾರು ರೀತಿಯ ಡ್ರೆಸ್​ಗಳಲ್ಲಿ ಅವರು ಫೋಟೋಶೂಟ್​ (Photoshoot) ಮಾಡಿಸಿಕೊಂಡು ಅದನ್ನು ಶೇರ್​ ಮಾಡಿಕೊಂಡಿದ್ದಾರೆ. ರೆಡ್ ಬ್ಲೇಜರ್ ತೊಟ್ಟು, ಬ್ಲಾಕ್ ಕಲರ್ ಸೂಟ್, ಮಿಡಿ, ಮಿನಿ, ಫ್ರಾಕ್​, ಸಲ್ವಾರ್​, ಸೀರೆ... ಹೀಗೆ ವಿಭಿನ್ನ ಉಡುಗೆ ತೊಟ್ಟು ಅವರು ಫೋಟೋಶೂಟ್​ ಮಾಡಿಸಿಕೊಂಡಿದ್ದು ಅದರ ಫೋಟೋ ಶೇರ್​ ಮಾಡಿದ್ದಾರೆ. ಈ ಫೋಟೋಗಳಿಗೆ ಸಕತ್​ ಕಮೆಂಟ್​ಗಳ ಸುರಿಮಳೆಯಾಗುತ್ತಿದೆ. ಹಾರ್ಟ್​ ಎಮೋಜಿಗಳಿಂದ ಕಮೆಂಟ್​ಗಳು ತುಂಬಿದ್ದು ಹಲವಾರು ಮಂದಿ ಸೋ ಸ್ವೀಟ್​ ಎನ್ನುತ್ತಿದ್ದಾರೆ. ಇನ್ನು ಹಲವು ಫ್ಯಾನ್ಸ್​ ನೀವೇ ನಮ್​ ಕ್ರಷ್​ ಎನ್ನುತ್ತಿದ್ದಾರೆ.  ಅಂದಹಾಗೆ ಇವರು, ಕನ್ನಡದಲ್ಲಿ `ಧ್ರುವ',`ಅಮ್ಮ',`ರಾಜಾಹುಲಿ' ಮುಂತಾದ ಚಿತ್ರಗಳಲ್ಲಿಯೂ ನಟಿಸಿದ್ದಾರೆ.

Chaya Singh: 'ಅಮೃತಧಾರೆ' ಭೂಮಿಕಾ ರಿಯಲ್​ ಲೈಫ್​ ಪತಿ ಯಾರ್​ ಗೊತ್ತಾ?

click me!