ಬೇಕಾಬಿಟ್ಟಿ ಥಾರ್‌ ಚಲಾಯಿಸಿ ಬೈಕ್‌ಗೆ ಗುದ್ದಿದ ರಕ್ಷಕ್‌ ಬುಲೆಟ್‌, ಯುವಕನ ಕಾಲು ಮುರಿತ!

Published : Aug 01, 2025, 08:33 PM ISTUpdated : Aug 01, 2025, 08:45 PM IST
rakshak bullet

ಸಾರಾಂಶ

ನಟ ರಕ್ಷಕ್ ಬುಲೆಟ್ ಅವರ ಥಾರ್ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನ ಕಾಲು ಮುರಿತವಾಗಿದೆ. ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ಬೆಂಗಳೂರು (ಆ.1): ನಟ ರಕ್ಷಕ್‌ ಬುಲೆಟ್‌ (Rakshak Bullet,) ಮತ್ತೊಂದು ಅವಾಂತರ ಮಾಡಿಕೊಂಡಿದ್ದಾರೆ. ಬೇಕಾಬಿಟ್ಟಿ ಥಾರ್‌ ಕಾರು ಚಲಾಯಿಸಿ ಬೈಕ್‌ಗೆ (car accident ) ಢಿಕ್ಕಿ ಹೊಡೆದಿದ್ದಾರೆ. ರಕ್ಷಕ್‌ ಬುಲೆಟ್ ಎಡವಟ್ಟಿನಿಂದ ಯುವಕನ ಕಾಲು ಮುರಿತವಾಗಿದೆ. ಅಜಾಗರೂಕತೆಯಿಂದ ಜೀಪ್ ಚಲಾಯಿಸಿದ್ದರಿಂದ ಬೈಕ್‌ಗೆ ಕಾರು ಢಿಕ್ಕಿಯಾಗಿದೆ. ಗುರುವಾರ ಬೆಳಗ್ಗೆ 11.30 ಸುಮಾರಿಗೆ ಅಪಘಾತ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ.

ವೇಣುಗೋಪಾಲ ಎಂಬ ಯುವಕನ ಬೈಕ್ ಗೆ ರಕ್ಷಕ್ ಅವರ ಕೆಂಪು ಬಣ್ಣದ ಥಾರ್‌ ಕಾರು ಢಿಕ್ಕಿಯಾಗಿದೆ. ಈ ವೇಳೆ ಬೈಕ್‌ನಲ್ಲಿ ವೇಣುಗೋಪಾಲ್‌ ಹಾಗೂ ಆತನ ಸ್ನೇಹಿತೆ ಇದ್ದರು ಎನ್ನುವುದು ಗೊತ್ತಾಗಿದೆ. ಮಾನ್ಯತಾ ಟೆಕ್ ಪಾರ್ಕ್‌ನ ಶಿವರಾಜ್ ಕುಮಾರ್ ಮನೆ ತಿರುವಿನಲ್ಲಿ ಆಕ್ಸಿಡೆಂಟ್ ನಡೆದಿದೆ. ಆಕ್ಸಿಡೆಂಟ್ ಆದ ನಂತರ ಟ್ಯಾಕ್ಸಿಯಲ್ಲಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಹೆಬ್ಬಾಳ ಬಳಿಯ ಖಾಸಗಿ ಆಸ್ಪತ್ರೆಗೆ ವೇಣುಗೋಪಾಲ್ ಅವರನ್ನು ದಾಖಲಿಸಲಾಗಿದೆ. ಆಕ್ಸಿಡೆಂಟ್ ಅದ ಪರಿಣಾಮ ವೇಣುಗೋಪಾಲ್ ಎಡಗಾಲಿನ ಮೂಳೆ ಮುರಿತವಾಗಿದೆ. ಶಿಡ್ಲಘಟ್ಟ ಮೂಲದ ಯುವಕ ವೇಣುಗೋಪಾಲ ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದ ಎನ್ನಲಾಗಿದ್ದು, ಸದ್ಯ ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಪ್ರಥಮ್‌ ಮೇಲೆ ಹಲ್ಲೆ ಕೇಸ್‌ನಲ್ಲಿ ರಕ್ಷಕ್‌ ಬುಲೆಟ್‌ ಹೆಸರು ಕೇಳಿ ಬಂದಿತ್ತು. ಸ್ವತಃ ರಕ್ಷಕ್‌ ಬುಲೆಟ್‌ ಪ್ರಥಮ್‌ನನ್ನು ದೊಡ್ಡಬಳ್ಳಾಪುರಕ್ಕೆ ಕರೆದುಕೊಂಡು ಹೋಗಿದ್ದ ಎನ್ನಲಾಗಿತ್ತು. ಕೊನೆಗೆ ಸ್ವತಃ ಪ್ರಥಮ್‌,ದೊಡ್ಡಬಳ್ಳಾಪುರದಲ್ಲಿ ನನ್ನ ಮೇಲೆ ದರ್ಶನ್‌ ಅಭಿಮಾನಿಗಳು ಹಲ್ಲೆ ಮಾಡಿರುವುದಕ್ಕೂ ರಕ್ಷಕ್‌ ಬುಲೆಟ್‌ಗೂ ಯಾವುದೇ ಸಂಬಂಧವಿಲ್ಲ ಎಂದಿದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

BBK 12 ಗಿಲ್ಲಿ ನಟನ ಗುಣ ಹೇಳುತ್ತಲೇ Bigg Boss Winner ಯಾರೆಂದು​ ಹಿಂಟ್​ ಕೊಟ್ಟೇ ಬಿಟ್ರು ಶಿವರಾಜ್​ ಕುಮಾರ್!
Bigg Boss ನೆಚ್ಚಿನ ಸ್ಪರ್ಧಿಗೆ ವೋಟ್​ ಹಾಕಲು ಕೊನೆ ಅವಕಾಶ: ಯಾವಾಗ, ಹೇಗೆ? ಇಲ್ಲಿದೆ ಫುಲ್​ ಡಿಟೇಲ್ಸ್​