
ಕಾರವಾರ (ಮಾ.24): ಖ್ಯಾತ ರಿಯಾಲಿಟಿ ಶೋ 'ಹಳ್ಳಿ ಹೈದ ಪ್ಯಾಟೆಗೆ ಬಂದ' ಸೀಸನ್-3ರ ಸ್ಪರ್ಧಿಯಾಗಿದ್ದ ಬಾವತೀಶ್ (28) ಅವರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿಕೆರೆ ಸಮೀಪ ಈ ದುರ್ಘಟನೆ ಸಂಭವಿಸಿದೆ. ಹಳಿಯಾಳ ತಾಲೂಕಿನ ವಾಡಗರಡೊಳ್ಳಿ ನಿವಾಸಿಯಾದ ಬಾವತೀಶ್ ಅವರು ತಮ್ಮ ಟಿವಿಎಸ್ ಮೊಫೆಡ್ ವಾಹನದಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ಗೆ ಅತೀ ವೇಗವಾಗಿ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.
ಡಿಕ್ಕಿಯ ರಭಸ ಎಷ್ಟಿತ್ತೆಂದರೆ, ಅಪಘಾತವಾದ ತಕ್ಷಣ ಅವರ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ತೀವ್ರವಾಗಿ ಗಾಯಗೊಂಡಿದ್ದ ಬಾವತೀಶ್ ಅವರು ರಸ್ತೆಯಲ್ಲೇ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಬಾವತೀಶ್ ಅವರು ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಗಳಿಸಿದ್ದರು. ಅವರ ಅನಿರೀಕ್ಷಿತ ಸಾವು ಕುಟುಂಬಸ್ಥರು ಹಾಗೂ ಅಭಿಮಾನಿ ವಲಯದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.