ಹತ್ತು ಹಲವು ವಿಶೇಷತೆಗಳಿಂದ ಕೂಡಿರುವ 'ಬೊಂಬಾಟ್ ಭೋಜನ ಶೋ' 1000 ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿದ್ದು ಸಾವಿರದ ಸಂಚಿಕೆಯಲ್ಲಿ ಕನ್ನಡ ಚಿತ್ರರಂಗದ ಕನಸಿನ ರಾಣಿ ಖ್ಯಾತಿಯ ನಟಿ ಮಾಲಾಶ್ರೀ ಭಾಗಿಯಾಗಲಿದ್ದಾರೆ.
ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಪಾತ್ರಕ್ಕೆ ಮಸಾಲೆ ಹಾಕಿ ನಗುವನ್ನು ಹಂಚಿದ ಶ್ರೀ ಸಿಹಿಕಹಿ ಚಂದ್ರುರವರು ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಬೊಂಬಾಟ್ ಭೋಜನ' ಕಾರ್ಯಕ್ರಮದಲ್ಲಿ ಪಾತ್ರೆಗೆ ಮಸಾಲೆ ಹಾಕಿ ಭೋಜನ ಪ್ರಿಯರಿಗೆ ರಸದೌತಣವನ್ನು ಬಡಿಸುತ್ತ ಅಮೋಘ 1000 ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿದೆ.
ಬೊಂಬಾಟ್ ಭೋಜನದ ಮೂರನೇ ಆವೃತ್ತಿ ಇದಾಗಿದ್ದು, ಈ ಆವೃತ್ತಿಯು ಸಾಕಷ್ಟು ವೈಶಿಷ್ಟ್ಯತೆಗಳಿಂದ ತುಂಬಿದೆ. ನಮ್ಮೂರ ಊಟ, ಮನೆ ಊಟ, ಸವಿ ಊಟ, ಕೈ ರುಚಿ, ಅಂಗೈಯಲ್ಲಿ ಆರೋಗ್ಯ, ಅಂದ ಚೆಂದ ಹಾಗೂ ಅತಿಥಿ ದೇವೋಭವ ಎಂಬ ವಿಭಾಗಗಳನ್ನು ಹೊಂದಿದ್ದು ಮನೆ ಮಂದಿಯ ಮನಗೆದ್ದು ಮನೆ ಮಾತಾಗಿದೆ.
ಸುಮಲತಾ ಎದುರೇ ಮಾಲಾಶ್ರೀ ಹೇಳಿದ್ರು; ಅಂಬರೀಷ್ ಜತೆ ಸುಮಲತಾ ಬಂದಾಗೆಲ್ಲ ಹೊಟ್ಟೆಕಿಚ್ಚು ಆಗ್ತಿತ್ತು..!
ಹೀಗೆ ಹತ್ತು ಹಲವು ವಿಶೇಷತೆಗಳಿಂದ ಕೂಡಿರುವ 'ಬೊಂಬಾಟ್ ಭೋಜನ ಶೋ' 1000 ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿದ್ದು ಸಾವಿರದ ಸಂಚಿಕೆಯಲ್ಲಿ ಕನ್ನಡ ಚಿತ್ರರಂಗದ ಕನಸಿನ ರಾಣಿ ಖ್ಯಾತಿಯ ನಟಿ ಮಾಲಾಶ್ರೀ ಭಾಗಿಯಾಗಲಿದ್ದಾರೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇದೇ ಮಂಗಳವಾರ, 26 ಡಿಸೆಂಬರ್ 2023ರಂದು ಮಧ್ಯಾಹ್ನ 12 ಗಂಟೆಗೆ ಈ ಸಂಚಿಕೆ ಪ್ರಸಾರವಾಗಲಿದೆ. ಈ ಬೊಂಬಾಟ್ ಭೋಜನ ಶೋವನ್ನು ಹಿರಿಯ ನಟ ಸಿಹಿ ಕಹಿ ಚಂದ್ರು ನಡೆಸಿಕೊಡುತ್ತಿದ್ದಾರೆ.
ಲೂನಾದಲ್ಲಿ ಓಡಾಡ್ತಾ ಇದ್ದವ್ನ ಲ್ಯಾಂಬೋರ್ಗಿನಿ ಹತ್ತಿಸಿದ್ರಿ; ಮಂಡ್ಯ ಫ್ಯಾನ್ಸ್ ರಿಯಾಕ್ಷನ್ ನೋಡಿ!
ಅಂದಹಾಗೆ, ನಟಿ ಮಾಲಾಶ್ರೀ ಮಗಳು ಆರಾಧನಾ ದರ್ಶನ್ ಅಭಿನಯದ ಕಾಟೇರ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಕಾಟೇರ ಚಿತ್ರವು ಇದೇ ತಿಂಗಳು 29 ರಂದು, 29 ಡಿಸೆಂಬರ್ 2023ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಕ್ರಾಂತಿ ಬಳಿಕ ತೆರೆಗೆ ಬರಲಿರುವ ಈ ಕಾಟೇರ ಚಿತ್ರವನ್ನು ನೋಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಒಟ್ಟಿನಲ್ಲಿ, ಬೊಂಬಾಟ್ ಬೋಜನದ 1000ದ ಸಂಚಿಕೆಯನ್ನು ಮಾಲಾಶ್ರೀ ಹಾಗೂ ಸಿಹಿಕಹಿ ಚಂದ್ರು ಅವರೊಂದಿಗೆ ನೋಡಲು ಮರೆಯದಿರಿ.
ಕಾಟೇರ ನಿರ್ದೇಶಕ ತರುಣ್ ಸುಧೀರ್ ಭವಿಷ್ಯ ಹೇಳಿದ ಜಗಪತಿ ಬಾಬು; ದರ್ಶನ್ ಬಗ್ಗೆ ಏನು ಹೇಳಿದ್ರು ನೋಡಿ!