ಬಿಗ್ ಬಾಸ್ ಮನೆಯಿಂದ ಹೊರಹೋಗ್ಬಿಟ್ರಾ ಸಂಗೀತಾ ಶೃಂಗೇರಿ; ಕಾರ್ತಿಕ್ ಮಾತಿಗೆ ಡೋಂಟ್ ಕೇರ್ ಅಂದಿದ್ದು ಯಾಕೆ?

By Shriram Bhat  |  First Published Nov 22, 2023, 12:42 PM IST

‘ನಾನು ನಾನಲ್ದೆ, ಬೇರೆ ಯಾರೋ ಆಗ್ತಿದೀನಿ ಅನಿಸ್ತಿದೆ’ ಎಂದು ಸಂಗೀತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ತಲೆಯೊಳಗೆ ಪ್ರೆಷರ್ ಜಾಸ್ತಿ ಆಗ್ತಿದೆ ಎಂದು ಫ್ರೆಸ್ಟ್ರೇಟ್ ಆಗಿದ್ದಾರೆ. ಅವರನ್ನು ಸಮಾಧಾನ ಮಾಡಲು ಬಂದ ಕಾರ್ತಿಕ್‌ಗೆ ಕೈ ಮುಗಿದಿದ್ದಾರೆ. ಹಾಗೆಯೇ, ‘ನಿಮಗೆ ಬೇಕಾದಾಗ ಜಗಳ ಆಡ್ತೀರಾ. ಬೇಕಾದಾಗ ಸಮಾಧಾನ ಮಾಡ್ತೀರಾ?’ ಎಂದು ಕಾರ್ತಿಕ್ ಅವರನ್ನು ಕುಟುಕಿದ್ದಾರೆ. 


ಬಿಗ್ ಬಾಸ್ ಕನ್ನಡ ಸೀಸನ್ 10 ಗೇಮ್ ಶೋದಲ್ಲಿ ಹೊಸ ಹೊಸ ತಿರುವುಗಳು, ಘಟನೆಗಳು ನಡೆಯುತ್ತಿದ್ದು ಭಾರೀ ಗಮನ ಸೆಳೆಯುತ್ತಿದೆ. ತನ್ನ ಸ್ನೇಹಿತರಿಂದ ದೂರವಾಗಿ ವಿನಯ್ ತಂಡ ಸೇರಿಕೊಂಡಿದ್ದ ಸಂಗೀತಾ, ಕಾರ್ತಿಕ್‌ ತಲೆಬೋಳಿಸಿಕೊಳ್ಳುವ ಸವಾಲ್‌ ಕೂಡ ಹಾಕಿದ್ದರು. ಹಾಗೆಯೇ ತನಿಷಾ ಮೆಣಸಿನಕಾಯಿ ತಿನ್ನಲೂ ಕಾರಣರಾಗಿದ್ದರು. 
ಸ್ನೇಹಿತರ ನೋವಿಗೆ ಕಾರಣರಾದ ಬಗ್ಗೆ ಅವರಲ್ಲಿ ಪಶ್ಚಾತ್ತಾಪ ಹುಟ್ಟಿದೆಯಾ? ಅದೇ ಅವರು ಮನೆಯಿಂದ ಹೊರಬರಲೂ ಕಾರಣವಾಯ್ತಾ? ಇಂಥದ್ದೊಂದು ಅನುಮಾನ JioCinema ಬಿಡುಗಡೆ ಮಾಡಿದ ಇಂದಿನ ಪ್ರೋಮೊ ನೋಡಿದರೆ ಹುಟ್ಟದೇ ಇರದು.

‘ನಾನು ನಾನಲ್ದೆ, ಬೇರೆ ಯಾರೋ ಆಗ್ತಿದೀನಿ ಅನಿಸ್ತಿದೆ’ ಎಂದು ಸಂಗೀತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ತಲೆಯೊಳಗೆ ಪ್ರೆಷರ್ ಜಾಸ್ತಿ ಆಗ್ತಿದೆ ಎಂದು ಫ್ರೆಸ್ಟ್ರೇಟ್ ಆಗಿದ್ದಾರೆ. ಅವರನ್ನು ಸಮಾಧಾನ ಮಾಡಲು ಬಂದ ಕಾರ್ತಿಕ್‌ಗೆ ಕೈ ಮುಗಿದಿದ್ದಾರೆ. ಹಾಗೆಯೇ, ‘ನಿಮಗೆ ಬೇಕಾದಾಗ ಜಗಳ ಆಡ್ತೀರಾ. ಬೇಕಾದಾಗ ಸಮಾಧಾನ ಮಾಡ್ತೀರಾ?’ ಎಂದು ಕಾರ್ತಿಕ್ ಅವರನ್ನು ಕುಟುಕಿದ್ದಾರೆ. ಅದನ್ನು ಕೇಳಿ ಸಂಗೀತಾ ಬಳಿಯಿಂದ ಕಾರ್ತಿಕ್ ಎದ್ದು ಹೋಗಿದ್ದಾರೆ. 

Tap to resize

Latest Videos

ಡಾಲಿ ಧನಂಜಯ್‌ ಸಿನಿಮಾದಲ್ಲಿ ರಮ್ಯಾ, ಶಿವರಾಜ್‌ ಕುಮಾರ್; ಯಾರಿಗೆ ಜೋಡಿಯಾಗ್ತಾರೆ ಸ್ಯಾಂಡಲ್‌ವುಡ್ ಕ್ವೀನ್?

‘ನನಗೆ ಈ ಗೇಮ್ ಆಡಲು ಇಷ್ಟವಿಲ್ಲ’ ಎಂದು ಸಂಗೀತಾ ಬಿಗ್‌ಬಾಸ್ ಬಳಿಯಲ್ಲಿ ಬಿಕ್ಕಿ ಬಿಕ್ಕಿ ವಿನಂತಿಸಿಕೊಂಡಿದ್ದಾರೆ. ಅದರ ಬೆನ್ನಿಗೇ ಮನೆಯ ಮುಖ್ಯದ್ವಾರ ತೆರೆದುಕೊಂಡಿರುವ ದೃಶ್ಯವೂ ಪ್ರೋಮೊದಲ್ಲಿದೆ. ಹಾಗಾದರೆ ಸಂಗೀತಾ ಮನೆಯಿಂದ ಹೊರಗೆ ಹೋದರಾ? ಅಥವಾ ಒಳಗೇ ಉಳಿದುಕೊಳ್ಳುತ್ತಾರಾ? ಈ ಕುತೂಹಲ ತಣಿಯಬೇಕು ಅಂದರೆ JioCinemaದಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಕನ್ನಡದ ನೇರಪ್ರಸಾರವನ್ನು ವೀಕ್ಷಿಸಬೇಕು.

ನಟ ಮೈ ತೋರಿಸಿದರೆ ನಿಮಗೆ ಓಕೆ, ನಟಿ ಮೈ ಕಂಡರೆ ಮಾತ್ರ 'ದೇಹ ಪ್ರದರ್ಶನ'ವೇ; ತನಿಷಾ ಮಾತು ಭಾರೀ ವೈರಲ್!

ಹಾಗಿದ್ದರೆ ಬಿಗ್‌ಬಾಸ್ ಮನೆಯಲ್ಲಿ ಏನಾಗುತ್ತಿದೆ? ಯಾರ ಮಧ್ಯೆ ಮನಸ್ತಾಪ ಮೂಡಿದೆ? ಯಾರು ಯಾರನ್ನು ದೂರ ಮಾಡಿಕೊಂಡಿದ್ದಾರೆ? ಹೊರಹೋಗುತ್ತಿರುವ ಸ್ಪರ್ಧಿ ಯಾರು? ಎಲ್ಲವನ್ನೂ ತಿಳಿಯಲು ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಬಹುದು. ಪ್ರತಿದಿನದ ಎಪಿಸೋಡ್‌ಗಳನ್ನು Colors Kannada ದಲ್ಲಿ ರಾತ್ರಿ 9.30ಕ್ಕೆ, ಶನಿವಾರ-ಭಾನುವಾರ ರಾತ್ರಿ 9.00ಕ್ಕೆ ವೀಕ್ಷಿಸಬಹುದು. 

click me!