
ದುನಿಯಾ ವಿಜಯ್ ನಟನೆಯ ಭೀಮಾ ಚಿತ್ರದ ಡೋಂಟ್ ವರಿ ಬೇಬಿಯಮ್ಮಾ.. ಹಾಡು ಸಕತ್ ಹಿಟ್ ಆಗಿದ್ದು, ಈಗಲೂ ಇದಕ್ಕೆ ರೀಲ್ಸ್ ಮಾಡುತ್ತಲೇ ಇರುತ್ತಾರೆ ರೀಲ್ಸ್ ಪ್ರೇಮಿಗಳು. ಇದೀಗ ಸೀತಾರಾಮ ಸೀರಿಯಲ್ ಟೀಮಿನ ನಟಿಯರು ಈ ಹಾಡಿಗೆ ಮೈಚಳಿ ಬಿಟ್ಟು ಸಕತ್ ಸ್ಟೆಪ್ ಹಾಕಿದ್ದು, ಅದೀಗ ವೈರಲ್ ಆಗಿದೆ. ಸೀತಾ ಪಾತ್ರಧಾರಿ ವೈಷ್ಣವಿ ಗೌಡ, ಪ್ರಿಯಾ ಪಾತ್ರಧಾರಿ ಮೇಘನಾ ಶಂಕರಪ್ಪ, ವಿಲನ್ ಭಾರ್ಗವಿ ಪಾತ್ರಧಾರಿ ಪೂಜಾ ಲೋಕೇಶ್ ಹಾಗೂ ರಾಮ್ ಚಿಕ್ಕಮ್ಮನ ಪಾತ್ರದಲ್ಲಿ ನಟಿಸುತ್ತಿರುವ ಸಿಂಧು ರಾವ್ ಅವರು ರೀಲ್ಸ್ ಮಾಡಿದ್ದು, ಅದನ್ನು ವೈಷ್ಣವಿ ಗೌಡ ಅವರು ಶೇರ್ ಮಾಡಿಕೊಂಡಿದ್ದಾರೆ.
ಇದಕ್ಕೆ ಥರಹೇವಾರಿ ಕಮೆಂಟ್ಸ್ ಸುರಿಮಳೆಯಾಗುತ್ತಿದೆ. ಒಬ್ಬರಿಗಿಂತ ಒಬ್ಬರು ಸಕತ್ ಸ್ಟೆಪ್ ಹಾಕುತ್ತಿದ್ದಾರೆ. ಕೆಲವರು ಸೀತಾ ಅರ್ಥಾತ್ ವೈಷ್ಣವಿ ಅವರ ಕಾಲೆಳೆಯುತ್ತಿದ್ದಾರೆ. ಸೀರಿಯಲ್ನಲ್ಲಿ ಮಗಳು ಸತ್ತು ಹುಚ್ಚಿಯಾಗಿದ್ರೆ, ಇಲ್ಲಿ ಹೀಗೆ ಡಾನ್ಸ್ ಮಾಡೋದಾ ಎನ್ನುತ್ತಿದ್ದಾರೆ. ಭಾರ್ಗವಿಗೇನೋ ಸಕತ್ ಖುಷಿಯಾಗಿದೆ, ಡಾನ್ಸ್ ಮಾಡ್ತಾಳಾ, ನೀನ್ಯಾಕಮ್ಮಾ ಹೀಗೆ ಮಾಡುತ್ತಿದ್ದೆಯಾ ಎಂದು ನಟಿಯನ್ನು ಪ್ರಶ್ನಿಸುತ್ತಿದ್ದಾರೆ. ಅಂದಹಾಗೆ, ನಟಿ ವೈಷ್ಣವಿ ಗೌಡ ಅವರು ಸೋಷಿಯಲ್ ಮೀಡಿಯಾದಲ್ಲಿ ಸಕತ್ ಆಕ್ಟೀವ್ ಇದ್ದಾರೆ.
ಫೋನ್ಗಳೆಲ್ಲಾ ಜಿಮ್ಗೆ ಹೋದ್ವಂತೆ ಯಾಕೆ? ಸೀತಾಳ ಉತ್ತರಕ್ಕೆ ತಲೆ ಚಚ್ಚಿಕೊಂಡ ಸೀತಾರಾಮ ಟೀಮ್!
ವೈಷ್ಣವಿ ಗೌಡ ಕುರಿತು ಹೇಳುವುದಾದರೆ, ಕನ್ನಡದ ಪ್ರೇಕ್ಷಕರಿಗೆ ಸನ್ನಿಧಿಯಂತಲೇ ಇವರು ಪರಿಚಯವಿದ್ದರು. ಅಗ್ನಿಸಾಕ್ಷಿ ಸೀರಿಯಲ್‌ನ ಸನ್ನಿಧಿ ಮೂಲಕ ಸಕತ್ ಫೇಮಸ್ ಆಗಿದ್ದ ನಟಿ ಈಗ ಸೀತಾರಾಮದ ಸೀತೆಯಾಗಿ ಮನೆ ಮಾತಾಗಿದ್ದಾರೆ. ವೈಷ್ಣವಿ ಕನ್ನಡ ಕಿರುತೆರೆಲೋಕದ ಜನಪ್ರಿಯ ನಟಿ. ಅಷ್ಟೇ ಅಲ್ಲದೇ, ಹಲವು ಉತ್ಪನ್ನಗಳ ರಾಯಭಾರಿಯೂ ಹೌದು. ಜೀ ಕನ್ನಡದ `ದೇವಿ' ಸೀರಿಯಲ್‌ನಿಂದ ಇವರ ಕಿರುತೆರೆ ಪಯಣ ಆರಂಭವಾಯಿತು.ನಂತರ `ಪುನರ್‌ವಿವಾಹ'ದಲ್ಲಿ ನಟಿಸಿ `ಅಗ್ನಿಸಾಕ್ಷಿ' ಸೀರಿಯಲ್‌ನ ಸನ್ನಿಧಿಯಾಗಿ ಆಯ್ಕೆಗೊಂಡರು. ಈ ಪಾತ್ರದ ಮೂಲಕ ಅಪಾರ ಜನಮನ್ನಣೆ ಪಡೆದಿದ್ದಾರೆ. `ಗಿರಿಗಿಟ್ಲೆ' ಚಿತ್ರದ ಮೂಲಕ ನಾಯಕಿಯಾಗಿದ್ದಾರೆ. `ಭರ್ಜರಿ ಕಾಮಿಡಿ' ಎಂಬ ರಿಯಾಲಿಟಿ ಷೋ ನಿರೂಪಣೆ ಕೂಡ ಮಾಡಿದ್ದಾರೆ. `ಕುಣಿಯೋಣ ಬಾರ' ಡ್ಯಾನ್ಸ್ ರಿಯಾಲಿಟಿ ಷೋ ಆಗೂ ಬಿಗ್‌ಬಾಸ್ ಸೀಸನ್ 8ನಲ್ಲಿ ಭಾಗವಹಿಸಿದ್ದಾರೆ.
ಇನ್ನು ಮೇಘನಾ ಶಂಕರಪ್ಪ ಅವರ ಕುರಿತು ಹೇಳುವುದಾದರೆ, 'ಸೀತಾರಾಮ' ಸೀರಿಯಲ್ಗೂ ಮುನ್ನ ಅವರು, ನಟಿಸಿದ್ದು 'ನಮ್ಮನೆ ಯುವರಾಣಿ' ಧಾರಾವಾಹಿಯಲ್ಲಿ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ನಮ್ಮನೆ ಯುವರಾಣಿ' ಧಾರಾವಾಹಿಯಲ್ಲಿ ಖಳನಾಯಕಿ ನೇತ್ರಾ ಪಾತ್ರದ ಮೂಲಕ ಗಮನ ಸೆಳೆದಿದ್ದರು ಮೇಘನಾ ಶಂಕರಪ್ಪ. ನಿರೂಪಕಿಯಾಗಿ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದ ಮೇಘನಾ ಶಂಕರಪ್ಪ ನಟನೆಗೆ ಕಾಲಿಟ್ಟಿದ್ದು 'ಕಿನ್ನರಿ' ಧಾರಾವಾಹಿಯ ನಂತರ. ಮುಂದೆ 'ಕೃಷ್ಣ ತುಳಸಿ', 'ರತ್ನಗಿರಿ ರಹಸ್ಯ', 'ದೇವಯಾನಿ', 'ಸಿಂಧೂರ' ಹೀಗೆ ಕೆಲವೊಂದು ಧಾರಾವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ಮೇಘನಾ ಅವರು ಸದ್ಯ ಪ್ರಿಯಾ ಆಗಿ ಬದಲಾದುದು ಕಿರುತೆರೆ ವೀಕ್ಷಕರಿಗೆ ಖುಷಿ ತಂದಿದೆ. ಪಾಸಿಟಿವ್ ಆಗಿರಲಿ, ನೆಗೆಟಿವ್ ಆಗಿರಲಿ ಯಾವುದೇ ಪಾತ್ರ ನೀಡಿದರೂ ಅಚ್ಚುಕಟ್ಟಾಗಿ ಜೀವ ತುಂಬುವ ಮೇಘನಾ ಎರಡು ಶೇಡ್ ಪಾತ್ರವಿರುವ ಪಾತ್ರದ ಮೂಲಕ ಗುರುತಿಸಿಕೊಂಡಾಕೆ. ಕಿರುತೆರೆ ಅಂಗಳದಲ್ಲಿ ಭಿನ್ನ ಪಾತ್ರಗಳ ಮೂಲಕ ಮೋಡಿ ಮಾಡುತ್ತಿರುವ ಈಕೆಗೆ ಹಿರಿತೆರೆಯಲ್ಲಿ ಕಾಣಿಸಿಕೊಳ್ಳುವ ಆಸೆಯೂ ಇದೆ.
ಸೀತಾರಾಮ ಸಿರಿಯಲ್ ರಾತ್ರಿ ಶೂಟಿಂಗ್ ಮಾಡುವಾಗ ಏನೆಲ್ಲಾ ಆಯ್ತು? ನಟಿ ಮೇಘನಾ ರಿವೀಲ್
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.