ಕಣ್ಣಿಗೆ ಬಟ್ಟೆ ಕಟ್ಟಿ ಪ್ರೀತಿಸಿದವನ ಬಗ್ಗೆ ತಿಳಿಸಿದ ಶ್ರೀರಸ್ತು ಶುಭಮಸ್ತು ದೀಪಿಕಾ!

Published : Apr 30, 2025, 04:47 PM ISTUpdated : Apr 30, 2025, 05:04 PM IST
ಕಣ್ಣಿಗೆ ಬಟ್ಟೆ ಕಟ್ಟಿ ಪ್ರೀತಿಸಿದವನ ಬಗ್ಗೆ ತಿಳಿಸಿದ ಶ್ರೀರಸ್ತು ಶುಭಮಸ್ತು ದೀಪಿಕಾ!

ಸಾರಾಂಶ

"ಶ್ರೀರಸ್ತು ಶುಭಮಸ್ತು" ಧಾರಾವಾಹಿಯ ಖಳನಾಯಕಿ ದೀಪಿಕಾ ಈಗ ಒಳ್ಳೆಯವಳಾಗಿದ್ದಾಳೆ. ತನ್ನ ತಪ್ಪುಗಳನ್ನು ಅರಿತು ಕ್ಷಮೆ ಯಾಚಿಸಿ, ಅತ್ತೆ ಮತ್ತು ತಂಗಿಗೆ ಪ್ರೀತಿ ತೋರುತ್ತಿದ್ದಾಳೆ. ನಿಜ ಜೀವನದಲ್ಲಿ ದರ್ಶಿನಿ ಡೆಲ್ಟಾ ಎಂದು ಕರೆಯಲ್ಪಡುವ ಈ ನಟಿ, ನೃತ್ಯ ಸಂಯೋಜಕಿಯಾಗಿಯೂ ಪ್ರಸಿದ್ಧಿ ಪಡೆದಿದ್ದಾರೆ. ಪ್ರಭುದೇವ, ಜಾನಿ ಮಾಸ್ಟರ್ ಮುಂತಾದವರೊಂದಿಗೆ ಕೆಲಸ ಮಾಡಿದ ಅನುಭವವಿದೆ.

 ವಿಲನ್​ ದೀಪಿಕಾ ಈಗ ಸರಿದಾರಿಗೆ ಬಂದು ಒಳ್ಳೆಯವಳಾಗಿದ್ದಾಳೆ. ದೀಪಿಕಾ ಎಂದಾಕ್ಷಣ ಸೀರಿಯಲ್​ ಪ್ರೇಮಿಗಳ ಕಣ್ಣೆದುರು ಬರುವುದು ಶ್ರೀರಸ್ತು ಶುಭಮಸ್ತುವಿನ ಸೊಸೆ. ತೀರಾ ಕೆಟ್ಟವಳು ಎಂದೇ ಬಿಂಬಿತವಾಗಿದ್ದವಳು ದೀಪಿಕಾ.  ಈ ಸೀರಿಯಲ್​ನಲ್ಲಿ ಒಂದೇ ಮನೆಯ ಸೊಸೆಯಂದಿರಾಗಿರುವವರು ಪೂರ್ಣಿ ಮತ್ತು ದೀಪಿಕಾ.  ಅಣ್ಣ ತಮ್ಮಂದಿರ ಪತ್ನಿಯರಾದ ಇವರಿಬ್ಬರದ್ದೂ ಸೀರಿಯಲ್​ನಲ್ಲಿ ಭಿನ್ನ ಕ್ಯಾರೆಕ್ಟರ್​. ಒಬ್ಬಳು ಅತೀ ಒಳ್ಳೆಯವಳು, ಇನ್ನೊಬ್ಬಳು ಅಗತ್ಯಕ್ಕಿಂತ ಹೆಚ್ಚು ಕೆಟ್ಟವಳು ಅಂದ್ರೆ ವಿಲನ್​. ದೊಡ್ಡ ಸೊಸೆ ಪೂರ್ಣಿಗೆ ಇನ್ನಿಲ್ಲದ ಕಾಟ ಕೊಡುವುದು ಎಂದರೆ ದೀಪಿಕಾಗೆ ಇನ್ನಿಲ್ಲದ ಖುಷಿ. ಅದರಲ್ಲಿಯೂ ಪೂರ್ಣಿ ಅನಾಥೆ ಎನ್ನುವ ಕಾರಣಕ್ಕೆ, ಅವಳನ್ನು ಹೆಜ್ಜೆ ಹೆಜ್ಜೆಗೂ ಹಂಗಿಸಿ, ಟೀಕಿಸುತ್ತಾಳೆ. ಅದೇ ಪೂರ್ಣಿ ತುಂಬಾ ಒಳ್ಳೆಯವಳು. ಎಲ್ಲವನ್ನೂ ಸಹಿಸಿಕೊಂಡು ಹೋಗುವವಳು.  ಆದರೆ ಈಗ ಇಡೀ ಚಿತ್ರಣವೇ ಬದಲಾಗಿದೆ. ಅತ್ತೆ ತುಳಸಿಗೆ ಮಗು ಹುಟ್ಟಿದೆ. ಅದೇ ಇನ್ನೊಂದೆಡೆ, ತಾನು ಇಷ್ಟು ದಿನ ಮಾಡ್ತಿದ್ದದ್ದು ತಪ್ಪು ಎಂಬ ಅರಿವು ದೀಪಿಕಾಗೆ ಆಗಿದೆ. ಎಲ್ಲರ ಕ್ಷಮೆ ಕೋರಿದ್ದಾಳೆ. ಅತ್ತೆ ತುಳಸಿ, ತಂಗಿ ಪೂರ್ಣಿಯನ್ನು ಪ್ರೀತಿಸುತ್ತಿದ್ದಾಳೆ.

ಇಂತಿಪ್ಪ ದೀಪಿಕಾಳ   ನಿಜವಾದ ಹೆಸರು ದರ್ಶಿನಿ ಡೆಲ್ಟಾ. ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ಆ್ಯಕ್ಟೀವ್​ ಆಗಿರುವ ನಟಿ,  ಬಾನಿಗೆ ಬಣ್ಣ ಹಚ್ಚೋ ಕಣ್ಣಿದವನು...  ಕಣ್ಣಿಗೆ ಬಟ್ಟೆ ಕಟ್ಟಿ ಪ್ರೀತಿಸಿದವನು.. ಹಾಡಿಗೆ ರೀಲ್ಸ್​ ಮಾಡಿದ್ದಾರೆ. ಎಂದಿನಂತೆ ತಮ್ಮ ಹಾಟ್​ ಅವತಾರದಲ್ಲಿ ನಟಿ ಸಕತ್​ ರೀಲ್ಸ್​ ಮಾಡಿದ್ದಾರೆ. ಇನ್ನು ದರ್ಶಿನಿ ಕುರಿತು ಹೇಳುವುದಾದರೆ, ಇವರು ನಟಿಯಾಗೋ ಮೊದಲು ಮಾಡೆಲ್ (Model),  ಜೊತೆಗೆ ಕೊರಿಯೋಗ್ರಫರ್ ಆಗಿ ಗುರುತಿಸಿಕೊಂಡವರು. ನಟ ಪ್ರಭುದೇವ, ಜಾನಿ ಮಾಸ್ಟರ್ ಮೊದಲಾದ ಜನಪ್ರಿಯ ಕೊರಿಯೋಗ್ರಫರ್ ಜೊತೆ ಅಸಿಸ್ಟಂಟ್ ಕೊರಿಯೋಗ್ರಫರ್ ಆಗಿ ಇವರು ಕೆಲಸ ಮಾಡಿದ್ದಾರೆ. 

ವಿಷ ಹಾಕಿದೋರಿಗೆ ಶಿಕ್ಷೆ ಆಗ್ಲೇ ಇಲ್ಲ... ಆ ಘಟನೆ ವಿವರಿಸಿದ ಮಾಸ್ಟರ್​ ಆನಂದ್​!

ದರ್ಶಿನಿ, ಶರಣ್ ನಟನೆಯ ಛೂ ಮಂತರ್ ಹಾಡಿಗೆ ಕೊರಿಯೋಗ್ರಫಿ ಮಾಡುವ ಮೂಲಕ ಅಸಿಸ್ಟೆಂಟ್ ಕೊರಿಯೋಗ್ರಫರ್ ಆಗಿ ಭಡ್ತಿ ಪಡೆದರು. ಈ ಡ್ಯಾನ್ಸ್ ಬೀಟ್ (Dence Beat) ಸಖತ್ ಸದ್ದು ಮಾಡಿತ್ತು. ಇದೀಗ ಕನ್ನಡದ ಉಪಾಧ್ಯಕ್ಷ ಸಿನಿಮಾದಲ್ಲೂ ಕೊರಿಯೋಗ್ರಫರ್ ಆಗಿ ಕೆಲಸ ಮಾಡಿದ್ದಾರೆ. ಉಪಾಧ್ಯಕ್ಷ ಸಿನಿಮಾದ ಹಾಡುಗಳಿಗೆ ಚಿಕ್ಕಣ್ಣ ಮತ್ತು ಮಲೈಕಾ ವಸುಪಾಲ್ ಗೆ ಸಖತ್ತಾಗಿ ಡ್ಯಾನ್ಸ್ ಹೇಳಿಕೊಡುವ ಮೂಲಕ ಜನಪ್ರಿಯತೆ ಪಡೆದಿದ್ದಾರೆ.

ಅಪ್ಪನ ಕನಸಿನಂತೆ ಡ್ಯಾನ್ಸರ್ (dancer) ಆಗಿ ಕರಿಯರ್ ಆರಂಭಿಸಿದ ದರ್ಶಿನಿ, ಮೊದಲಿಗೆ ತಮಿಳು ಮತ್ತು ತೆಲುಗು ರಿಯಾಲಿಟಿ ಶೋಗಳಲ್ಲಿ ಬಾಲ್ಯದಲ್ಲಿಯೇ ಭಾಗವಹಿಸಿದ್ದರು. ಕನ್ನಡದಲ್ಲಿ ನಟಿಯಾಗೋ ಮುನ್ನವೇ ಅವರು ತೆಲುಗು, ತಮಿಳು ಇಂಡಸ್ಟ್ರಿಯಲ್ಲಿ ಗುರುತಿಸಿಕೊಂಡರು. ಇದೀಗ ಕನ್ನಡ, ತೆಲುಗಿನ ಸೂಪರ್ ಸ್ಟಾರ್ ನಾಯಕರಿಗೆ ಅಂದರೆ ಪುನೀತ್ ರಾಜ್ ಕುಮಾರ್, ಯಶ್, ಸುದೀಪ್, ಶರಣ್, ಅಲ್ಲು ಅರ್ಜುನ್, ವಿಜಯ್ ದೇವರಕೊಂಡ, ನಾನಿಯಂತಹ ಮಹಾನ್ ನಟರಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ತಮಿಳಿನಲ್ಲಿ ಜಾನಿ ಮಾಸ್ಟರ್ (Jani Master) ಅವರಿಗೆ ಅಸಿಸ್ಟಂಟ್ ಆಗಿ ಪ್ರಭುದೇವ (Prabhudeva) ಅವರಿಗೆ ಕೊರಿಯೋಗ್ರಫಿ ಮಾಡಿದ ದರ್ಶಿನಿ  ಡೆಲ್ಟಾ ನಾಗರಾಜ್, ಸದ್ಯ ಕನ್ನಡದ ಮೊದಲ ಡ್ಯಾನ್ಸ್ ಕೊರಿಯೋಗ್ರಫರ್ ಆಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.   

ಅಲ್ಲಿ ಭಾರ್ಗವಿ, ಇಲ್ಲಿ ಶಾರ್ವರಿ... ಖೇಲ್​ ಕಥಮ್​! ಎರಡೂ ಸೀರಿಯಲ್​ ದಿ ಎಂಡ್​...

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

BBK 12: ಏನ್ರೀ ಇದು ತೆವಲು? ರಜತ್‌, ಅಶ್ವಿನಿ ಗೌಡ, ರಘು ಯಾಕೆ ಹೀಗೆಲ್ಲ ಮಾಡಿದ್ರು?
Aadi Lakshmi Purana Serial: ವಿರುದ್ಧ ದಿಕ್ಕಿನಲ್ಲಿ ಸಾಗುವ, ಒಬ್ಬರನ್ನೊಬ್ಬರು ಕಂಡರೆ ಆಗದವ್ರು ಮದುವೆಯಾಗುವ ಕಥೆ