ಶ್ರೀರಸ್ತು ಶುಭಮಸ್ತು ದೀಪಿಕಾ ಅರ್ಥಾತ್ ದರ್ಶಿನಿ ಡೆಲ್ಟಾ ಹಾಟ್ ವಿಡಿಯೋಶೂಟ್ ಮಾಡಿಸಿಕೊಂಡಿದ್ದು, ಅದೀಗ ವೈರಲ್ ಆಗಿದೆ. ಫ್ಯಾನ್ಸ್ ಹೇಳ್ತಿರೋದೇನು?
ನೆಗೆಟಿವ್ ದೀಪಿಕಾ ಈಗ ಪಾಸಿಟಿವ್ ಆಗಿದ್ದಾಳೆ. ಅರ್ಥಾತ್ ವಿಲನ್ ಆಗಿದ್ದವಳು ಈಗ ಸರಿದಾರಿಗೆ ಬಂದು ಒಳ್ಳೆಯವಳಾಗಿದ್ದಾಳೆ. ಅವಳೇ ದೀಪಿಕಾ. ಹೌದು. ದೀಪಿಕಾ ಎಂದಾಕ್ಷಣ ಸೀರಿಯಲ್ ಪ್ರೇಮಿಗಳ ಕಣ್ಣೆದುರು ಬರುವುದು ಶ್ರೀರಸ್ತು ಶುಭಮಸ್ತುವಿನ ಸೊಸೆ. ತೀರಾ ಕೆಟ್ಟವಳು ಎಂದೇ ಬಿಂಬಿತವಾಗಿದ್ದವಳು ದೀಪಿಕಾ. ಈ ಸೀರಿಯಲ್ನಲ್ಲಿ ಒಂದೇ ಮನೆಯ ಸೊಸೆಯಂದಿರಾಗಿರುವವರು ಪೂರ್ಣಿ ಮತ್ತು ದೀಪಿಕಾ. ಅಣ್ಣ ತಮ್ಮಂದಿರ ಪತ್ನಿಯರಾದ ಇವರಿಬ್ಬರದ್ದೂ ಸೀರಿಯಲ್ನಲ್ಲಿ ಭಿನ್ನ ಕ್ಯಾರೆಕ್ಟರ್. ಒಬ್ಬಳು ಅತೀ ಒಳ್ಳೆಯವಳು, ಇನ್ನೊಬ್ಬಳು ಅಗತ್ಯಕ್ಕಿಂತ ಹೆಚ್ಚು ಕೆಟ್ಟವಳು ಅಂದ್ರೆ ವಿಲನ್. ದೊಡ್ಡ ಸೊಸೆ ಪೂರ್ಣಿಗೆ ಇನ್ನಿಲ್ಲದ ಕಾಟ ಕೊಡುವುದು ಎಂದರೆ ದೀಪಿಕಾಗೆ ಇನ್ನಿಲ್ಲದ ಖುಷಿ. ಅದರಲ್ಲಿಯೂ ಪೂರ್ಣಿ ಅನಾಥೆ ಎನ್ನುವ ಕಾರಣಕ್ಕೆ, ಅವಳನ್ನು ಹೆಜ್ಜೆ ಹೆಜ್ಜೆಗೂ ಹಂಗಿಸಿ, ಟೀಕಿಸುತ್ತಾಳೆ. ಅದೇ ಪೂರ್ಣಿ ತುಂಬಾ ಒಳ್ಳೆಯವಳು. ಎಲ್ಲವನ್ನೂ ಸಹಿಸಿಕೊಂಡು ಹೋಗುವವಳು. ಆದರೆ ಈಗ ಇಡೀ ಚಿತ್ರಣವೇ ಬದಲಾಗಿದೆ. ಅತ್ತೆ ತುಳಸಿಗೆ ಮಗು ಹುಟ್ಟಿದೆ. ಅದೇ ಇನ್ನೊಂದೆಡೆ, ತಾನು ಇಷ್ಟು ದಿನ ಮಾಡ್ತಿದ್ದದ್ದು ತಪ್ಪು ಎಂಬ ಅರಿವು ದೀಪಿಕಾಗೆ ಆಗಿದೆ. ಎಲ್ಲರ ಕ್ಷಮೆ ಕೋರಿದ್ದಾಳೆ. ಅತ್ತೆ ತುಳಸಿ, ತಂಗಿ ಪೂರ್ಣಿಯನ್ನು ಪ್ರೀತಿಸುತ್ತಿದ್ದಾಳೆ.
ಇಂತಿಪ್ಪ ದೀಪಿಕಾಳ ನಿಜವಾದ ಹೆಸರು ದರ್ಶಿನಿ ಡೆಲ್ಟಾ. ಸೋಷಿಯಲ್ ಮೀಡಿಯಾದಲ್ಲಿ ಸಕತ್ ಆ್ಯಕ್ಟೀವ್ ಆಗಿರುವ ನಟಿ, ಸೀರೆಯಲ್ಲಿಯೇ ಸಕತ್ ಸೊಂಟ ಬಳುಕಿಸಿ ಚಿಂದಿ ಉಡಾಯಿಸಿದ್ದಾರೆ. ಇದೀಗ ಸಕತ್ ಹಾಟ್ ವಿಡಿಯೋಶೂಟ್ ಮಾಡಿಸಿಕೊಂಡು ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ. ಈ ಫೋಟೋಶೂಟ್ ಮಾಡಿಸಿಕೊಳ್ಳಲು ತಾವು ಕಷ್ಟಪಟ್ಟಿರುವುದಕ್ಕೂ ಈ ವಿಡಿಯೋದಲ್ಲಿ ತೋರಿಸಿದ್ದಾರೆ ನಟಿ. ಆದರೆ ಇವರ ಈ ವಿಡಿಯೋಗೆ ಅಭಿಮಾನಿಗಳಿಂದ ಶ್ಲಾಘನೆಗಳ ಮಹಾಪೂರವೇ ಹರಿದು ಬಂದಿದೆ. ಆಗಾಗ್ಗೆ ಪೂರ್ಣಿ ಅಂದ್ರೆ, ಲಾವಣ್ಯ ಭಾರಧ್ವಾಜ್ ಜೊತೆಗೆ ರೀಲ್ಸ್ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ಸಕತ್ ಆ್ಯಕ್ಟೀವ್ ಆಗಿದ್ದಾರೆ.
ಶ್ರೀರಸ್ತು ಶುಭಮಸ್ತುಗೆ ಊಹಿಸದ ಟ್ವಿಸ್ಟ್: ತುಳಸಿ ಗರ್ಭಿಣಿಯಾದಾಗ ಛೀಮಾರಿ ಹಾಕಿದೋರೆ ಕೈಮುಗಿತೀದ್ದಾರೆ!
ಇನ್ನು ದರ್ಶಿನಿ ಕುರಿತು ಹೇಳುವುದಾದರೆ, ಇವರು ನಟಿಯಾಗೋ ಮೊದಲು ಮಾಡೆಲ್ (Model), ಜೊತೆಗೆ ಕೊರಿಯೋಗ್ರಫರ್ ಆಗಿ ಗುರುತಿಸಿಕೊಂಡವರು. ನಟ ಪ್ರಭುದೇವ, ಜಾನಿ ಮಾಸ್ಟರ್ ಮೊದಲಾದ ಜನಪ್ರಿಯ ಕೊರಿಯೋಗ್ರಫರ್ ಜೊತೆ ಅಸಿಸ್ಟಂಟ್ ಕೊರಿಯೋಗ್ರಫರ್ ಆಗಿ ಇವರು ಕೆಲಸ ಮಾಡಿದ್ದಾರೆ. ದರ್ಶಿನಿ ಶರಣ್ ನಟನೆಯ ಛೂ ಮಂತರ್ ಹಾಡಿಗೆ ಕೊರಿಯೋಗ್ರಫಿ ಮಾಡುವ ಮೂಲಕ ಅಸಿಸ್ಟೆಂಟ್ ಕೊರಿಯೋಗ್ರಫರ್ ಆಗಿ ಭಡ್ತಿ ಪಡೆದರು. ಈ ಡ್ಯಾನ್ಸ್ ಬೀಟ್ (Dence Beat) ಸಖತ್ ಸದ್ದು ಮಾಡಿತ್ತು. ಇದೀಗ ಕನ್ನಡದ ಉಪಾಧ್ಯಕ್ಷ ಸಿನಿಮಾದಲ್ಲೂ ಕೊರಿಯೋಗ್ರಫರ್ ಆಗಿ ಕೆಲಸ ಮಾಡಿದ್ದಾರೆ. ಉಪಾಧ್ಯಕ್ಷ ಸಿನಿಮಾದ ಹಾಡುಗಳಿಗೆ ಚಿಕ್ಕಣ್ಣ ಮತ್ತು ಮಲೈಕಾ ವಸುಪಾಲ್ ಗೆ ಸಖತ್ತಾಗಿ ಡ್ಯಾನ್ಸ್ ಹೇಳಿಕೊಡುವ ಮೂಲಕ ಜನಪ್ರಿಯತೆ ಪಡೆದಿದ್ದಾರೆ.
ಅಪ್ಪನ ಕನಸಿನಂತೆ ಡ್ಯಾನ್ಸರ್ (dancer) ಆಗಿ ಕರಿಯರ್ ಆರಂಭಿಸಿದ ದರ್ಶಿನಿ, ಮೊದಲಿಗೆ ತಮಿಳು ಮತ್ತು ತೆಲುಗು ರಿಯಾಲಿಟಿ ಶೋಗಳಲ್ಲಿ ಬಾಲ್ಯದಲ್ಲಿಯೇ ಭಾಗವಹಿಸಿದ್ದರು. ಕನ್ನಡದಲ್ಲಿ ನಟಿಯಾಗೋ ಮುನ್ನವೇ ಅವರು ತೆಲುಗು, ತಮಿಳು ಇಂಡಸ್ಟ್ರಿಯಲ್ಲಿ ಗುರುತಿಸಿಕೊಂಡರು. ಇದೀಗ ಕನ್ನಡ, ತೆಲುಗಿನ ಸೂಪರ್ ಸ್ಟಾರ್ ನಾಯಕರಿಗೆ ಅಂದರೆ ಪುನೀತ್ ರಾಜ್ ಕುಮಾರ್, ಯಶ್, ಸುದೀಪ್, ಶರಣ್, ಅಲ್ಲು ಅರ್ಜುನ್, ವಿಜಯ್ ದೇವರಕೊಂಡ, ನಾನಿಯಂತಹ ಮಹಾನ್ ನಟರಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ತಮಿಳಿನಲ್ಲಿ ಜಾನಿ ಮಾಸ್ಟರ್ (Jani Master) ಅವರಿಗೆ ಅಸಿಸ್ಟಂಟ್ ಆಗಿ ಪ್ರಭುದೇವ (Prabhudeva) ಅವರಿಗೆ ಕೊರಿಯೋಗ್ರಫಿ ಮಾಡಿದ ದರ್ಶಿನಿ ಡೆಲ್ಟಾ ನಾಗರಾಜ್, ಸದ್ಯ ಕನ್ನಡದ ಮೊದಲ ಡ್ಯಾನ್ಸ್ ಕೊರಿಯೋಗ್ರಫರ್ ಆಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.
ಭೂತಗಳು ಗಾಳಿಯಲ್ಲಿ ಹೇಗೆ ಚಲಿಸತ್ತೆ? 'ನಾ ನಿನ್ನ ಬಿಡಲಾರೆ' ಸೀರಿಯಲ್ ಶೂಟಿಂಗ್ ವಿಡಿಯೋ ನೋಡಿ!