ಶ್ರೀರಸ್ತು ಶುಭಮಸ್ತುವಿನಲ್ಲಿ ಸದಾ ಕಿತ್ತಾಡುತ್ತಿರುವ ಸೊಸೆಯಂದಿರಾದ ಪೂರ್ಣಿ- ದೀಪಿಕಾ ಭರ್ಜರಿ ರೀಲ್ಸ್ ಮಾಡಿದ್ದಾರೆ. ಅಭಿಮಾನಿಗಳು ಏನಂದ್ರು ನೋಡಿ...
ಇದೇ ಆಗಸ್ಟ್ 15ರಂದು ತೆರೆ ಕಾಣಲಿರುವ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಮಾಳ್ವಿಕಾ ನಾಯರ್ ಅಭಿನಯದ ಕೃಷ್ಣ ಪ್ರಣಯ ಸಖಿಯ ದ್ವಾಪರ ಚಿತ್ರದ ದಾಟುತ ನನ್ನನೇ ನೋಡಲು... ಹಾಡು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಕತ್ ಟ್ರೆಂಡಿಂಗ್ನಲ್ಲಿದೆ. ಇದೇ ಹಾಡಿನ ಚರಣ ಜೇನ ದನಿಯೋಳೆ ಮೀನ ಕಣ್ಣೋಳೆ,ಸೊಬಗೆ ಮೈತುಂಬಿದೆ ಹಂಸ ನಡೆಯೋಳೆ, ಎದೆಗೆ ಇಳಿದೋಳೆ ಜೀವ ಝಲ್ ಎಂದಿದೆ ಹಾಡಿಗೆ ರೀಲ್ಸ್ ಮಾಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕಿರುತೆರೆ ನಟಿಯರಾದಿಯಾಗಿ ಹಲವರು ಇದಕ್ಕೆ ರೀಲ್ಸ್ ಮಾಡಿದ್ದಾರೆ. ಇದೀಗ ಶ್ರೀರಸ್ತು ಶುಭಮಸ್ತು ವಾರೆಗಿತ್ತಿಯರಾದ ಪೂರ್ಣಿ ಮತ್ತು ದೀಪಿಕಾ ಭರ್ಜರಿ ರೀಲ್ಸ್ ಮಾಡಿದ್ದು, ನೆಟ್ಟಿಗರ ಶಹಬ್ಬಾಸ್ಗಿರಿ ಗಿಟ್ಟಿಸಿಕೊಂಡಿದ್ದಾರೆ. ಇವರಿಬ್ಬರ ಡಾನ್ಸ್ಗೆ ಸಕತ್ ಕಮೆಂಟ್ಸ್ ಕೂಡ ಬರುತ್ತಿವೆ. ಅಷ್ಟಕ್ಕೂ ಇವರಿಬ್ಬರೂ ಸೀರಿಯಲ್ನಲ್ಲಿ ಸದಾ ಕಿತ್ತಾಡುತ್ತಿರುವ ಕಾರಣದಿಂದ ಅಲ್ಲಿ ಕಿತ್ತಾಡಿಕೊಂಡು ಇಲ್ಲಿ ಕುಣಿಯುತ್ತಿದ್ದೀರಾ ಎಂದು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ.
ಈ ಸೀರಿಯಲ್ನಲ್ಲಿ ಒಂದೇ ಮನೆಯ ಸೊಸೆಯಂದಿರಾಗಿರುವವರು ಪೂರ್ಣಿ ಮತ್ತು ದೀಪಿಕಾ. ಅಣ್ಣ ತಮ್ಮಂದಿರ ಪತ್ನಿಯರಾದ ಇವರಿಬ್ಬರದ್ದೂ ಸೀರಿಯಲ್ನಲ್ಲಿ ಭಿನ್ನ ಕ್ಯಾರೆಕ್ಟರ್. ಒಬ್ಬಳು ಅತೀ ಒಳ್ಳೆಯವಳು, ಇನ್ನೊಬ್ಬಳು ಅಗತ್ಯಕ್ಕಿಂತ ಹೆಚ್ಚು ಕೆಟ್ಟವಳು ಅಂದ್ರೆ ವಿಲನ್. ದೊಡ್ಡ ಸೊಸೆ ಪೂರ್ಣಿಗೆ ಇನ್ನಿಲ್ಲದ ಕಾಟ ಕೊಡುವುದು ಎಂದರೆ ದೀಪಿಕಾಗೆ ಇನ್ನಿಲ್ಲದ ಖುಷಿ. ಅದರಲ್ಲಿಯೂ ಪೂರ್ಣಿ ಅನಾಥೆ ಎನ್ನುವ ಕಾರಣಕ್ಕೆ, ಅವಳನ್ನು ಹೆಜ್ಜೆ ಹೆಜ್ಜೆಗೂ ಹಂಗಿಸಿ, ಟೀಕಿಸುತ್ತಾಳೆ. ಅದೇ ಪೂರ್ಣಿ ತುಂಬಾ ಒಳ್ಳೆಯವಳು. ಎಲ್ಲವನ್ನೂ ಸಹಿಸಿಕೊಂಡು ಹೋಗುವವಳು. ಇಂತಿಪ್ಪ ಸೊಸೆಯಂದಿರು ಒಟ್ಟುಗೂಡಿ ರೀಲ್ಸ್ ಮಾಡಿದ್ದರಿಂದ ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.
ಸಂಸತ್ತಿಗೆ ಬರುವ ಮೊದಲು ರಾಹುಲ್ ಗಾಂಧಿ ಪರೀಕ್ಷೆ ನಡೆಸಿ ಎಂದ ಕಂಗನಾ! ಏನಿದು ಹೊಸ ವರಸೆ?
ಅಷ್ಟಕ್ಕೂ ಪೂರ್ಣಿಯ ರಿಯಲ್ ಹೆಸರು ಲಾವಣ್ಯ ಹಾಗೂ ದೀಪಿಕಾ ನಿಜವಾದ ಹೆಸರು ದರ್ಶಿನಿ ಡೆಲ್ಟಾ. ದರ್ಶಿನಿ ಕುರಿತು ಹೇಳುವುದಾದರೆ, ಇವರು ನಟಿಯಾಗೋ ಮೊದಲು ಮಾಡೆಲ್ (Model), ಜೊತೆಗೆ ಕೊರಿಯೋಗ್ರಫರ್ ಆಗಿ ಗುರುತಿಸಿಕೊಂಡವರು. ನಟ ಪ್ರಭುದೇವ, ಜಾನಿ ಮಾಸ್ಟರ್ ಮೊದಲಾದ ಜನಪ್ರಿಯ ಕೊರಿಯೋಗ್ರಫರ್ ಜೊತೆ ಅಸಿಸ್ಟಂಟ್ ಕೊರಿಯೋಗ್ರಫರ್ ಆಗಿ ಇವರು ಕೆಲಸ ಮಾಡಿದ್ದಾರೆ. ದರ್ಶಿನಿ ಶರಣ್ ನಟನೆಯ ಛೂ ಮಂತರ್ ಹಾಡಿಗೆ ಕೊರಿಯೋಗ್ರಫಿ ಮಾಡುವ ಮೂಲಕ ಅಸಿಸ್ಟೆಂಟ್ ಕೊರಿಯೋಗ್ರಫರ್ ಆಗಿ ಭಡ್ತಿ ಪಡೆದರು. ಈ ಡ್ಯಾನ್ಸ್ ಬೀಟ್ (Dence Beat) ಸಖತ್ ಸದ್ದು ಮಾಡಿತ್ತು. ಇದೀಗ ಕನ್ನಡದ ಉಪಾಧ್ಯಕ್ಷ ಸಿನಿಮಾದಲ್ಲೂ ಕೊರಿಯೋಗ್ರಫರ್ ಆಗಿ ಕೆಲಸ ಮಾಡಿದ್ದಾರೆ. ಉಪಾಧ್ಯಕ್ಷ ಸಿನಿಮಾದ ಹಾಡುಗಳಿಗೆ ಚಿಕ್ಕಣ್ಣ ಮತ್ತು ಮಲೈಕಾ ವಸುಪಾಲ್ ಗೆ ಸಖತ್ತಾಗಿ ಡ್ಯಾನ್ಸ್ ಹೇಳಿಕೊಡುವ ಮೂಲಕ ಜನಪ್ರಿಯತೆ ಪಡೆದಿದ್ದಾರೆ.
ಪೂರ್ಣಿಯ ನಿಜವಾದ ಹೆಸರು ಲಾವಣ್ಯ. ಇವರ ರಿಯಲ್ ಪತಿಯ ಹೆಸರು ಶಶಿ. ಶಶಿ ಹಾಗೂ ಲಾವಣ್ಯ ಅವರದ್ದು ಲವ್ ಕಮ್ ಅರೇಂಜ್ಡ್ ಮ್ಯಾರೇಜ್. ಶಶಿ ಅವರು ಅಮೃತಧಾರೆ ಸೀರಿಯಲ್ನಲ್ಲಿ ಭೂಮಿಕಾ ಸಹೋದರನ ಪಾತ್ರ ಮಾಡುತ್ತಿದ್ದಾರೆ. ರಿಯಾಲಿಟಿ ಷೋ ಒಂದರಲ್ಲಿ ಲಾವಣ್ಯ ಅವರ ಹುಟ್ಟಿನ ಬಗ್ಗೆ ಅಪ್ಪ ಹೇಳಿಕೊಂಡಿದ್ದರು. ಪತ್ನಿ ಗರ್ಭಿಣಿಯಾಗಿದ್ದಾಗ ಅಂದರೆ ಲಾವಣ್ಯ ಹೊಟ್ಟೆಯಲ್ಲಿ ಇದ್ದಾಗ ಆಗಿನ ಸ್ಥಿತಿಯಲ್ಲಿ ಮಗು ಹುಟ್ಟುವುದು ಬೇಡವಾಗಿತ್ತು. ಅದಕ್ಕಾಗಿ ಪರಂಗಿ ಕಾಯಿ ತಿನ್ನಬೇಕೆಂದು ಆರೇಳು ಕಿಲೋಮೀಟರ್ ಪರಂಗಿ ಕಾಯಿ ಹುಡುಕಿ ಹೊರಟಿದ್ದು, ಕೊನೆಗೆ ಅದು ಸಿಗದೇ ಇದ್ದುದ ಬಗ್ಗೆ ತಿಳಿಸಿದ್ದರು!
ಪ್ಯಾರಿಸ್ನಲ್ಲಿ ಅನಂತ್ ಅಂಬಾನಿ- ರಾಧಿಕಾ ವಿಹಾರ ಮಾಡ್ತಿದ್ರೆ ನೆಟ್ಟಿಗರು ಹೀಗೆಲ್ಲಾ ಹೇಳೋದಾ?