
ಕೆಲ ದಿನಗಳ ಹಿಂದೆ ನಟಿ ಉರ್ಫಿ ಜಾವೇದ್ ಬಟ್ಟೆಯಲ್ಲಿ ಬ್ರಹ್ಮಾಂಡ ತೋರಿಸಿದ್ದರು. ಬಳಿ ಎದೆ ಭಾಗದಲ್ಲಿ ಎರಡು ಫ್ಯಾನ್ ಸಿಕ್ಕಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಬಟ್ಟೆಯಲ್ಲಿನ ಬ್ರಹ್ಮಾಂಡದಲ್ಲಿ ಹಲವು ವಿಷಯಗಳನ್ನು ಅವರು ತೋರಿಸಿದ್ದರೆ, ಎದೆ ಮೇಲೆ ಹಾಕಿಕೊಂಡಿದ್ದ ಫ್ಯಾನ್ಸ್ ತಿರುಗುತ್ತಿತ್ತು. ಅದೂ ಸಾಲದು ಎಂಬಂತೆ ಮೈಮೇಲಿಂದಲೇ ಉದುರುವ ಹೂವು-ಎಲೆ ಹಾರಾಡುವ ಚಿಟ್ಟೆಗಳ ಬಟ್ಟೆ ತೊಟ್ಟು ಅಭಿಮಾನಿಗಳ ಹುಬ್ಬೇರಿಸಿದ್ದರು. ಇದರ ವಿಡಿಯೋ ಸಕತ್ ವೈರಲ್ ಆಗಿದ್ದು, ಇಂಥ ಐಡಿಯಾ ಬೇರೆ ಯಾರಿಗೂ ಹೊಳೆಯಲು ಸಾಧ್ಯವೇ ಇಲ್ಲ ಬಿಡಿ ಎಂದು ಉರ್ಫಿ ಅಭಿಮಾನಿಗಳು ದೊಡ್ಡ ನಮಸ್ಕಾರ ಹಾಕಿದ್ದರು. ನಟಿ ಬಟ್ಟೆಯ ಮೇಲೆ ಹೂವು, ಎಲೆಗಳನ್ನು ಇರಿಸಿಕೊಂಡು, ಅದು ಮ್ಯಾಜಿಕ್ ರೀತಿಯಲ್ಲಿ ಉದುರುವ ಹಾಗೆ ಮಾಡಿದ್ದಂತೂ ನೋಡಿ ಉರ್ಫಿ ಜಾವೇದ್ ಫ್ಯಾನ್ಸ್ ಫಿದಾ ಆಗಿದ್ದು, ನಿಮಗೆ ನೀವೇ ಸಾಟಿ ಎಂದರು.
ಇದೀಗ ನಟಿ ಚೈನೀಸ್ ಫುಡ್ ಇರುವ ಬಟ್ಟೆ ತೊಟ್ಟಿದ್ದಾರೆ. ಅಸಲಿಗೆ ಇದು Hot & Spicy Desi Chinese from Chinese Wok ಜಾಹೀರಾತಿನಂತೆ ಇದು ತೋರುತ್ತಿದೆ. ಇವರು ಧರಿಸಿರುವ ಬಟ್ಟೆಯ ತುಂಬಾ ಚೈನೀಸ್ ಫುಡ್ಗಳು ತುಂಬಿ ಹೋಗಿವೆ. ಚಿಕ್ಕ ಬಕೆಟ್ನಲ್ಲಿ ವಿವಿಧ ರೀತಿಯ ಭಕ್ಷ್ಯಗಳನ್ನು ಇರಿಸಲಾಗಿದ್ದು, ಚೈನೀಸ್ ದೇಸಿ ಫುಡ್ಗಳ ಕುರಿತು ನಟಿ ಮಾತನಾಡಿದ್ದಾರೆ. ತಮಗೆ ಇವುಗಳ ಪೈಕಿ ಯಾವ ಆಹಾರ ತುಂಬಾ ಇಷ್ಟ ಎಂಬುದನ್ನೂ ಹೇಳಿದ್ದಾರೆ. ಇದನ್ನು ನೋಡಿ ಥಹರೇವಾರಿ ಕಮೆಂಟ್ಗಳ ಸುರಿಮಳೆಯಾಗುತ್ತಿದೆ. ಕೆಲವು ತರ್ಲೆ ನೆಟ್ಟಿಗರು ಅಲ್ಲೇ ತಿನ್ನಲು ಅವಕಾಶ ಇದ್ಯಾ ಕೇಳುತ್ತಿದ್ದಾರೆ. ಇನ್ನು ಕೆಲವರು ಈ ರೀತಿ ಮೈಮೇಲೆ ಸರ್ವ್ ಮಾಡಿದ್ದರೆ ತಿನ್ನಲು ನಾವು ರೆಡಿ ಅಂತಿದ್ದಾರೆ.
ಡ್ರೆಸ್ನಿಂದ ಉದುರಿದ ಹೂವು, ಎಲೆಗಳು... ಅಬ್ಬಬ್ಬಾ ಉರ್ಫಿಗೆ ಉರ್ಫಿನೇ ಸಾಟಿ ಕಣ್ಲಾ ಅಂತಿದ್ದಾರೆ ಫ್ಯಾನ್ಸ್..
ಅಷ್ಟಕ್ಕೂ ಉರ್ಫಿ ಬಗ್ಗೆ ಬೇರೆ ಹೇಳುವುದೇ ಬೇಡ ಬಿಡಿ. ಉರ್ಫಿ ಎಂದರೆ, ಚಿತ್ರ ವಿಚಿತ್ರ ಡ್ರೆಸ್ಗಳಿಂದಲೇ ಸೋಷಿಯಲ್ ಮೀಡಿಯಾ ಸೆನ್ಸೇಷನ್ ಆದವರು. ಉರ್ಫಿ ಜಾವೇದ್ (Uorfi Javed) ಎಂದಾಕ್ಷಣ ಎಲ್ಲರ ಕಣ್ಣುಮುಂದೆ ಬರುವುದು ಅತ್ಯಂತ ಕನಿಷ್ಠ ಉಡುಪು ಅಥವಾ ಉಡುಪೇ ಇಲ್ಲದ ನಟಿಯ ರೂಪ. ಚುಮುಚುಮು ಚಳಿಯಲ್ಲಿಯೂ ಮೈಮೇಲೆ ತುಂಡು ಬಟ್ಟೆಯುಟ್ಟು ಪಡ್ಡೆ ಹುಡುಗರ ಬಿಸಿ ಏರಿಸ್ತಿರೋ ಈ ನಟಿ ಸೋಷಿಯಲ್ ಮೀಡಿಯಾದಲ್ಲಿ (Social media) ಸೆನ್ಸೇಷನ್ ಕ್ರಿಯೇಟ್ ಮಾಡ್ತಿರೋದು ಹೊಸ ವಿಷಯವೇನಲ್ಲ. ಪ್ರತಿದಿನವೂ ಎಂಬಂತೆ ವಿಶಿಷ್ಟ ರೀತಿಯಲ್ಲಿ ಉಡುಗೆ ತೊಟ್ಟು ಅದರ ಫೋಟೋಶೂಟ್ ಮಾಡಿಸಿಕೊಂಡು ಜಾಲತಾಣದಲ್ಲಿ ಪೋಸ್ಟ್ ಮಾಡುವುದರಲ್ಲಿ ಉರ್ಫಿಯದ್ದು ಎತ್ತಿದ ಕೈ.
ಒಮ್ಮೊಮ್ಮೆ ಬಟ್ಟೆಯೂ ಇಲ್ಲದೆ, ಕೈಗೆ ಸಿಕ್ಕ ವಸ್ತುಗಳಿಂದ ಖಾಸಗಿ ಅಂಗಗಳನ್ನು ಮುಚ್ಚಿಕೊಂಡು ಪೋಸ್ ನೀಡಿರುವ ಫೋಟೋಗಳೂ ಕಮ್ಮಿಯೇನಲ್ಲ. ದಿನವೂ ಬಟ್ಟೆಗಳಿಂದಲೇ ಟ್ರೋಲ್ (Troll) ಆಗುವುದು ಎಂದರೆ ತುಂಬಾ ಖುಷಿಯ ಹಾಗೆ ಕಾಣಿಸುತ್ತಿದೆ. ಇದೇ ಕಾರಣಕ್ಕೆ ಮುಂಬೈನ ರೆಸ್ಟೋರೆಂಟ್‌ಗೆ ತಮಗೆ ಎಂಟ್ರಿ ಸಿಗಲಿಲ್ಲ, ಯಾರೂ ಮನೆ ಬಾಡಿಗೆ ಕೊಡುತ್ತಿಲ್ಲ ಎಂದೆಲ್ಲಾ ಗೋಳೋ ಅನ್ನುತ್ತಿದ್ದರೂ ನಟಿ ಅರೆಬರೆ ಡ್ರೆಸ್ ರುಚಿ ನೋಡಿ ಅದನ್ನು ಮಾತ್ರ ಬಿಡುತ್ತಿಲ್ಲ.
ಉರ್ಫಿ ಎದುರಿದ್ದರೆ ತಿರುಗುತ್ತೆ ಫ್ಯಾನ್, ಕೂಲೋ ಕೂಲ್: ಇಂಥ ಐಡಿಯಾ ಯಾರಿಗೂ ಬರಲು ಸಾಧ್ಯನೇ ಇಲ್ಲ ಬಿಡಿ!
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.