ಬಿಗ್ ಬಾಸ್ ಅನುಪಮಾ ಪರ ಇದೆ, ಫಿಕ್ಸಿಂಗ್ ಆಗಿದೆ; ಆರ್ಯವರ್ಧನ್ ಗಂಭೀರ ಆರೋಪ, ಕೆಂಡವಾದ ಸುದೀಪ್

Published : Oct 16, 2022, 10:51 AM IST
ಬಿಗ್ ಬಾಸ್ ಅನುಪಮಾ ಪರ ಇದೆ, ಫಿಕ್ಸಿಂಗ್ ಆಗಿದೆ; ಆರ್ಯವರ್ಧನ್ ಗಂಭೀರ ಆರೋಪ, ಕೆಂಡವಾದ ಸುದೀಪ್

ಸಾರಾಂಶ

ಆರ್ಯವರ್ಧನ್ ಮ್ಯಾಚ್ ಫಿಕ್ಸಿಂಗ್ ಆರೋಪ ಸುದೀಪ್ ಅವರನ್ನು ಕೆರಳಿಸಿದೆ. ವೇದಿಕೆ ಮೇಲೆ ಕಿಚ್ಚ ಸುದೀಪ್ ಕೆಂಡ ಆಗಿದ್ದಾರೆ. 

ಬಿಗ್ ಬಾಸ್ ಮನೆ ತಾರಕಕ್ಕೇರಿದೆ. ಸೂಪರ್ ಸಂಡೇ ವಿತ್ ಸುದೀಪ್ ಭಾನುವಾರದ ಸಂಚಿಕೆ ಹೊತ್ತಿ ಉರಿದಿದೆ. ಆರ್ಯವರ್ಧನ್ ಮ್ಯಾಚ್ ಫಿಕ್ಸಿಂಗ್ ಆರೋಪ ಸುದೀಪ್ ಅವರನ್ನು ಕೆರಳಿಸಿದೆ. ವೇದಿಕೆ ಮೇಲೆ ಕಿಚ್ಚ ಸುದೀಪ್ ಕೆಂಡ ಆಗಿದ್ದಾರೆ. ಆರ್ಯವರ್ಧನ್ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಆರ್ಯವರ್ಧನ್ ಗುರೂಜಿ ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ್ದಾರೆ. ಬಿಗ್ ಬಾಸ್ ಅನುಪಮಾ ಗೌಡ ಪರ ಇದೆ, ಅವರನ್ನೇ ಗೆಲ್ಲಿಸೋದು ಎಂದು ಆರ್ಯವರ್ಧನ್ ಆರೋಪ ಮಾಡಿದ್ದಾರೆ. 

ಏನಿದು ಆರ್ಯವರ್ಧನ್ ಆರೋಪ? 

ಭಾನುವಾರದ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಎಂದಿನಂದೆ ಸ್ಪರ್ಧಿಗಳ ಜೊತೆ ಮಾತನಾಡಿದ್ದಾರೆ. ಸ್ಪರ್ಧಿಗಳಿಗೆ ಪ್ರಶ್ನೆ ಕೇಳಿದ್ದಾರೆ. 'ಈ 16 ಮಂದಿಯಲ್ಲಿ ಟಾಪ್ 2 ಯಾರು ಆಗ್ತಾರೆ ಎಂದು ಕೇಳಿದರು. ಸ್ಪರ್ಧಿಗಳು ಒಬ್ಬರ ಹೆಸರನ್ನು ಹೇಳುತ್ತಿದ್ದರು.  ಆರ್ಯವರ್ಧನ್ ಗುರೂಜಿ, ಅನುಪಮಾ ಹೆಸರು ಹೇಳಿ ಬಿಗ್ ಬಾಸ್‌ಗೂ ಅನುಪಮಾ ಒಳಗಡೆ ಬರ್ಬೇಕು ಅಂತ ಆಸೆ ಇತ್ತು ಎಂದು ಹೇಳಿದರು. ಇದರಿಂದ ಕೆರಳಿದ ಸುದೀಪ್ ಹಾಗೆಲ್ಲ ಮಾತನಾಡಬೇಡಿ ಸರ್ ಎಂದು ಹೇಳಿದರು. 'ಬಂಗಾರದ ಟಾಸ್ಕ್ ನಲ್ಲಿ ಎಷ್ಟು ಬಂಗಾರ ಇದೆ ಅಂತ ಗೊತ್ತಿದ್ದರೂ ಅನುಪಮಾನ ಒಳಗಡೆ ಕರೆಸುತ್ತಾರೆ ಅಂದರೆ  ಏನು ಅರ್ಥ. ಮ್ಯಾಚ್ ಫಿಕ್ಸಿಂಗ್ ಆಗಿದೆ ಇಲ್ಲಿ' ಎಂದು ಗಂಭೀರ ಅರೋಪ ಮಾಡಿದರು. ಸುದೀಪ್ ಸ್ಪರ್ಧಿಗಳಲ್ಲಿ ನಿಮಗೆ ಹಾಗೆ ಅನಿಸಿತಾ ಎಂದು ಕೇಳಿದರು. ಸ್ಪರ್ಧಿಗಳೆಲ್ಲಾ ಇಲ್ಲ ಎಂದರು. 

BBK9; ಬಿಗ್ ಮನೆಯಲ್ಲಿ ಮಕ್ಕಳದ್ದೇ ದರ್ಬಾರು, ಮಗುವನ್ನು ತಬ್ಬಿ ಬಿಕ್ಕಿ ಬಿಕ್ಕಿ ಅತ್ತ ಮಯೂರಿ

ಅರ್ಯವರ್ಧನ್ ಮಾತಿನಿಂದ ಕೆಂಡವಾದ ಸುದೀಪ್ ಮಾತಿನ ಮೇಲೆ ನಿಗಾ ಇರಲಿ ಎಂದು ಎಚ್ಚರಿಕೆ ನೀಡಿದರು. ಆದರೂ ಸಹ ಆರ್ಯವರ್ದನ್ ಯೋಚನೆ ಮಾಡಿ ಹೇಳಬೇಕಲ್ಲ ಹಾಗಾಗಿ ಹೇಳುತ್ತಿದ್ದೀನಿ ಎಂದು ತನ್ನ ಮಾತನ್ನು ಸಮರ್ಥಿಸಿಕೊಂಡರು. ಮ್ಯಾಚ್ ಫಿಕ್ಸಿಂಗ್ ಅಂದರೆ ಏನು? ಅಲ್ಲಿ ಕುಳಿತು ಆಡುತ್ತಿರುವವರೆಲ್ಲ ಏನು ಹಾಗಾದ್ರೆ, ಯಾರಿಗೂ ಯೋಗ್ಯತೆ ಇಲ್ವಾ, ಮೋಸ ಮಾಡಿ ಗೆಲ್ತಾ ಇದ್ದಾರಾ ಎಂದು ಸುದೀಪ್ ಏರು ಧ್ವನಿಯಲ್ಲಿ ಪ್ರತಿಕ್ರಿಯೆ ನೀಡಿದರು.

BBK9 ಊರು ಜಾತ್ರೆಯಲ್ಲೊಬ್ಬ ಕ್ರಶ್, ತಿರುಪತಿಯಲ್ಲೊಬ್ಬ ಕ್ರಶ್; ಮಂಗಳಗೌರಿ ಕಾವ್ಯಾ ಶಾಕಿಂಗ್ ಲವ್

ಜನರಲ್ಲಾಗಿ ನಾನು ಹೇಳಿದ್ದು ಎಂದು ಆರ್ಯವರ್ದನ್ ಮತ್ತೆ ಮಧ್ಯೆ ಮಾತಾಡಿದರು.  'ನಿಮ್ಮ ವ್ಯಕ್ತಿತ್ವದ ಮೇಲೆ ಮಾತನಾಡಿದರೆ ಇಷ್ಟು ಉದ್ದ ಮಾತನಾಡುತ್ತೀರಾ. ಈ ವೇದಿಕೆ ಮರ್ಯಾದೆ ತೆಗೆದರೆ ಸತ್ಯವಾಗಿ ಹೇಳ್ತೀನಿ, ನನಗೆ ನಿಮಗೆ ಇಲ್ಲೆ ಕೊನೆಯಾಗುತ್ತೆ' ಎಂದು ಸುದೀಪ್ ಖಡಕ್ ವಾರ್ನಿಂಗ್ ನೀಡಿದರು.  ಸದ್ಯ ಇವತ್ತಿನ ಸಂಚಿಕೆಯ ಪ್ರೋಮೋ ರಿಲೀಸ್ ಆಗಿದೆ. ಈ ಪ್ರೋಮೋ ಈಗ ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
Bigg Boss: ನಂಗೆ ಮದ್ವೆಯಾದ್ಮೇಲೆ ಮಕ್ಕಳಾಗತ್ತಲ್ವಾ ಎಂದ ರಕ್ಷಿತಾ ಶೆಟ್ಟಿ, ಸೂರಜ್​ ಬಳಿ ಇಂಥ ಪ್ರಶ್ನೆ ಕೇಳೋದಾ?