'ಜೊತೆ ಜೊತೆಯಲಿ' ತಂಡದ ಜೊತೆ ಕಿರಿಕ್; ಕಿರುತೆರೆಯಿಂದ ನಟ ಅನಿರುದ್ಧ್ ಕಿಕ್ ಔಟ್

Published : Aug 20, 2022, 10:43 AM ISTUpdated : Aug 20, 2022, 02:02 PM IST
'ಜೊತೆ ಜೊತೆಯಲಿ' ತಂಡದ ಜೊತೆ ಕಿರಿಕ್; ಕಿರುತೆರೆಯಿಂದ ನಟ ಅನಿರುದ್ಧ್ ಕಿಕ್ ಔಟ್

ಸಾರಾಂಶ

ಜೀ ಕನ್ನಡ ವಾಹಿನಿಯಲ್ಲಿ ಪ್ರಾಸವಾಗುತ್ತಿದ್ದ ಜೊತೆ ಜೊತೆಯಲಿ ಧಾರಾವಾಹಿ ತಂಡದ ಜೊತೆ ನಟ ಅನಿರುದ್ಧ್ ಕಿರಿಕ್ ಮಾಡಿಕೊಂಡ  ಹಿನ್ನಲ್ಲೆ ಅನಿರುದ್ಧ್ ಅವರನ್ನು ಕಿರುತೆರೆಯಿಂದನೇ ಕಿಕ್ ಔಟ್ ಮಾಡಲಾಗಿದೆ. 

ಜೀ ಕನ್ನಡ ವಾಹಿನಿಯಲ್ಲಿ ಪ್ರಾಸವಾಗುತ್ತಿದ್ದ ಜೊತೆ ಜೊತೆಯಲಿ ಧಾರಾವಾಹಿ ತಂಡದ ಜೊತೆ ನಟ ಅನಿರುದ್ಧ್ ಕಿರಿಕ್ ಮಾಡಿಕೊಂಡ  ಹಿನ್ನಲ್ಲೆ ಅನಿರುದ್ಧ್ ಅವರನ್ನು ಕಿರುತೆರೆಯಿಂದನೇ ಕಿಕ್ ಔಟ್ ಮಾಡಲಾಗಿದೆ. ಅನಿರುದ್ಧ್ ಅವರನ್ನು ಎರಡು ವರ್ಷಗಳ ಕಾಲ ಧಾರಾವಾಹಿಯಿಂದ ದೂರ ಇಡಲು ನಿರ್ಮಾಪಕರ ಸಂಘ ನಿರ್ಧಾರ ಮಾಡಿದೆ. ಸ್ಕ್ರಿಪ್ಟ್ ಸರಿಯಿಲ್ಲ ಎನ್ನುವ ಕಾರಣಕ್ಕೆ ಜೊತೆ ಜೊತೆಯಲಿ ಧಾರಾವಾಹಿಯ ನಿರ್ದೇಶಕರ ಜೊತೆ ಕಿತ್ತಾಡಿಕೊಂಡು ಅನಿರುದ್ಧ್ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. 

'ಜೊತೆ ಜೊತೆಯಲಿ' ಧಾರಾವಾಹಿ ತಂಡದ ಜೊತೆ ಕಿತ್ತಾಡಿಕೊಂಡು ಚಿತ್ರೀಕರಣ ಅರ್ಧಕ್ಕೆ ಬಿಟ್ಟು ಹೋಗಿದ್ದ ಅನಿರುದ್ಧ್ ವಿರುದ್ಧ ಕಿರುತೆರೆ ನಿರ್ಮಾಪಕರ ಸಂಘಕ್ಕೆ ದೂರು ನೀಡಲಾಗಿತ್ತು. ಕಳೆದ ಎರಡು ದಿನಗಳಿಂದ ನಿರ್ಮಾಪಕರ ಸಂಘದಲ್ಲಿ ಇದೇ ವಿಚಾರ ಚರ್ಚೆಯಾಗುತ್ತಿತ್ತು. ಇದೀಗ ನಿರ್ಮಾಪಕ ಸಂಘ ಕೆಲವು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಧಾರಾವಾಹಿಯ ನಿರ್ದೇಶಕ ಆರೂರ್ ಜಗದೀಶ್ ಅವರ ದೂರಿನ ಮೇರೆಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ನಿರ್ಮಾಪಕರ ಸಂಘದ ಒಕ್ಕೊರಲ ನಿರ್ಧಾರದ ಮೇರೆಗೆ ಅನಿರುದ್ಧ್ ಅವರನ್ನು ಎರಡು ವರ್ಷ ಧಾರಾವಾಹಿ ಮತ್ತು ರಿಯಾಲಿಟಿ ಶೋಯಿಂದ ಬ್ಯಾನ್ ಮಾಡಲಾಗಿದೆ. ಇನ್ಮುಂದೆ ಅನಿರುದ್ಧ್ ಕುರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅನಿರುದ್ಧ ಭಾಗವಹಿಸುವಂತೆ ಇಲ್ಲ. 



ಹಿಟ್ಲರ್ ಕಲ್ಯಾಣ: ಪವಿತ್ರಾಗೆ ಮಾತು ಬಂತು, ಆಮೇಲೆ ನಡೆದದ್ದು ಶಾಕಿಂಗ್ ಘಟನೆ!

ನಟ ಅನಿರುದ್ಧ್ ಅವರು ಜೊತೆ ಜೊತೆಯಲಿ ಸೀರಿಯಲ್‌ನ  ನಿರ್ದೇಶಕ ಮಧು ಉತ್ತಮ್‌ಗೆ ಮೂರ್ಖ ಅಂತ ಕರೆದು ಬೈಯ್ದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಸ್ಕ್ರಿಪ್ಟ್ ವಿಚಾರಕ್ಕೆ ನಿರ್ದೇಶಕರಿಗೆ ನಿಂದಿಸಿ ಶೂಟಿಂಗ್ ಸೆಟ್‌ನಿಂದ ಹೊರನಡೆದಿದ್ದಾರೆ ಎನ್ನಲಾಗಿದೆ. ಅನಿರುದ್ಧ್ ಧಾರಾವಾಹಿಯ ದೃಶ್ಯ ಬದಲಾವಣೆ ಮಾಡುವಂತೆ ನಿರ್ದೇಶಕ ಮಧು ಉತ್ತಮ್ ಜತೆ ಅನಿರುಧ್ದ್ ಕಿರಿಕ್ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಅಂದಹಾಗೆ ಅನಿರುದ್ಧ ಈ ರೀತಿ ಕಿತ್ತಾಡಿಕೊಳ್ಳುವುದು ಇದೇ ಮೊದಲಲ್ಲ. ಹಲವ್ ಬಾರಿ ಜಗಳ ಆಡಿ ಸೆಟ್ ‌ನಿಂದ ಹೊರನಡೆದಿದ್ದಾರೆ. ಇದನ್ನ ಸಹಿಸಿ ಸಹಿಸಿ ಸಾಕಾಗಿದೆ. ಜೊತೆ ಜೊತೆಯಲಿ ನಿರ್ಮಾಪಕ ಆರೋರು ಜಗದೀಶ್ ಇದರಿಂದ ಬೇಸತ್ತು ಹೋಗಿದ್ದಾರೆ‌. ಹಲವು‌ ಭಾರಿ ಈ ಘಟನೆ ಆಗಿದೆ ಹಾಗಾಗಿ ಈ ನಿರ್ಧಾರ ಮಾಡಿದ್ದೇವೆ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ಹೇಳಿದ್ದಾರೆ. ಆರೂರು ಜಗದೀಶ್ ಖಿನ್ನತೆಗೆ ಒಳಗಾಗಿದ್ದಾರೆ. ಕಣ್ಣೀರು ಹಾಕಿದರು ಎಂದು ಭಾಸ್ಕಕ್ ಹೇಳಿದ್ದಾರೆ.

ನಿರ್ಮಾಪಕರಿಗಷ್ಟೇ ಅಲ್ಲ. ಪ್ರಮುಖ ಮನರಂಜನಾ ವಾಹಿನಿಗಳಿಗೂ ಈ ಮೇಲ್ ಮೂಲಕ ಮಾಹಿತಿಯನ್ನು ಕಳುಹಿಸಿದ್ದೇವೆ. ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ಆದರೆ, ಅವರೆಲ್ಲರೂ ಇದೂವರೆಗೂ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಭಾಸ್ಕರ್ ಅವರು ಹೇಳಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಕಾಲುಂಗುರ ಧರಿಸಿದ ನಟಿ ರಜಿನಿ ಪತಿ…. ಪ್ರಶ್ನಿಸಿದವರಿಗೆ ಏನಂದ್ರು ನೋಡಿ
BBK 12: ಮದುವೆ ಮನೆಯಿಂದ ಗಿಲ್ಲಿ ನಟನನ್ನು ಆಚೆ ಹಾಕಿ, ರಸ್ತೆಗೆ ನೂಕಿದ್ರು: ಗೊತ್ತಿಲ್ಲದ ವಿಷಯ ಬಿಚ್ಚಿಟ್ಟ ತಾಯಿ