
ಕಾಮಿಡಿ ಕಿಲಾಡಿಗಳು ಶೋ ಸ್ಪರ್ಧಿ ಚಂದ್ರಶೇಖರ್ ಸಿದ್ದಿ ಅವರು ಕಳೆದ ಜುಲೈ 31ರಂದು ಆತ್ಮ*ಹತ್ಯೆ ಮಾಡಿಕೊಂಡಿದ್ದರು. ಈ ಸಾವಿನ ಬಗ್ಗೆ ಅವರ ತಾಯಿ ಲಕ್ಷ್ಮೀ ಅನುಮಾನ ವ್ಯಕ್ತಪಡಿಸಿದ್ದರು. ಈಗ ಪತ್ನಿಯು ಪತಿಗೆ ಹೊಡೆಯುತ್ತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಚಂದ್ರಶೇಖರ್ ಕುಡಿದು ಬಂದಾಗ ಅವರ ಪತ್ನಿ ಕಮಲಾಕ್ಷ್ಮಿ ಸೇರಿದಂತೆ ಸಂಬಂಧಿಕರು ಹೊಡೆಯುತ್ತಿರುವ ವಿಡಿಯೋ ಈಗ ವೈರಲ್ ಆಗ್ತಿದೆ.
ಚಂದ್ರಶೇಖರ್ ತೀರಿಕೊಂಡಾಗಲೇ ಇವರ ಸಾವಿಗೆ ಕಿರುಕುಳ ಕಾರಣವೇ ಎಂಬ ಅನುಮಾನ ಶುರುವಾಗಿತ್ತು. ಈ ವಿಡಿಯೋದಲ್ಲಿ ಪತ್ನಿ, ಸಂಬಂಧಿಕರು ಚಂದ್ರಶೇಖರ್‌ಗೆ ಹೊಡೆಯುತ್ತಿರೋದನ್ನು ಕಾಣಬಹುದು. ಚಂದ್ರಶೇಖರ್ ಮದ್ಯಪಾನ ಮಾಡಿ ಮನೆಗೆ ಬಂದಾಗ ಏಟು ಬಿದ್ದಿದೆ. ಇನ್ನು ಸಿದ್ದಿ ಭಾಷೆಯಲ್ಲಿ ಅಲ್ಲಿದ್ದವರು ಮಾತನಾಡಿಕೊಂಡಿದ್ದಾರೆ.
ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮುಗಿದ ಬಳಿಕ ಚಂದ್ರಶೇಖರ್ ಸಿದ್ಧಿಗೆ ಚಿತ್ರರಂಗದಲ್ಲಿ ಕೆಲಸವಿರಲಿಲ್ಲ. ಹೀಗಾಗಿ ಅವರು ಯಲ್ಲಾಪುರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಇನ್ನೊಂದು ಕಡೆ ಪತ್ನಿಯ ಕಿರುಕುಳದಿಂದ ಬೇಸತ್ತು ನೇಣು ಹಾಕಿಕೊಂಡ್ರಾ ಎಂಬ ಪ್ರಶ್ನೆ ಮೂಡಿದೆ.
“ನನ್ನ ಮಗ ಚಂದ್ರಶೇಖರ್, ಸೊಸೆ ಕಮಲಾಕ್ಷಿಗೆ ಪದೇ ಪದೇ ಜಗಳ ಆಗುತ್ತಿತು” ಎಂದು ಅವರ ತಾಯಿ ಹೇಳಿದ್ದರು. ಆಬಳಿಕ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದರು. ಚಂದ್ರಶೇಖರ್ ತಾಯಿ ಲಕ್ಷ್ಮೀ ಅವರು ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ.
ಯಲ್ಲಾಪುರ ತಾಲೂಕಿನ ವಜ್ರಳ್ಳಿಯ ಚಿಮನಳ್ಳಿ ನಿವಾಸಿ ಚಂದ್ರಶೇಖರ್ ಸಿದ್ಧಿ ಅವರು ನಟನೆಯಲ್ಲಿ ಆಸಕ್ತಿ ಹೊಂದಿದ್ದು, ನಿನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದರು. ಆ ಬಳಿಕ ಕಾಮಿಡಿ ಕಿಲಾಡಿಗಳು ಶೋನಲ್ಲಿ ಭಾಗವಹಿಸಿದ್ದರು. ಆ ಬಳಿಕ ಕೆಲವು ಧಾರವಾಹಿಗಳಲ್ಲಿ ನಟಿಸಿದ್ದರು. ಮತ್ತೆ ನಟನೆ ಅವಕಾಶ ಸಿಕ್ಕಿಲ್ಲವೆಂದು ಕೂಲಿ ಕೆಲಸ ಆರಂಭಿಸಿದ್ದರು. ಹೀಗಾಗಿ ಮಾನಸಿಕವಾಗಿ ನೊಂದಿದ್ದರು. ಆದ್ದರಿಂದ ಪತ್ನಿ ಜತೆ ಗಲಾಟೆ ಮಾಡುತ್ತಿದ್ದರು.
ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ... ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ... ಬದಲಾಗಿ ಯಾವ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ್ರೋ ಅದೇ ನಿಮ್ಮ ಐಡೆಂಟಿಟಿಯಾಗಿ ಬಿಡುತ್ತೆ. ಮುಂದೆ, ಆತ್ಮ8ತ್ಯೆ ಮಾಡಿಕೊಂಡವರನ್ನು ಆ 'ಕಾರಣ'ಕ್ಕಾಗಿಯೇ ನೆನಪಿಟ್ಟುಕೊಳ್ಳಲಾಗುತ್ತೆ.
ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ 'ಆತ್ಮ8ತ್ಯೆ' ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:
Sahai Helpline - 080 2549 7777
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.