'ದೊಡ್ಡಮನೆ ಸೊಸೆ'ಗೆ ಬಂಪರ್ ಅಫರ್; ಗಗನ ಕೈಯಲ್ಲಿ ಎರಡು ಸಿನಿಮಾ!

Published : Sep 30, 2023, 11:39 AM IST
'ದೊಡ್ಡಮನೆ ಸೊಸೆ'ಗೆ ಬಂಪರ್ ಅಫರ್; ಗಗನ ಕೈಯಲ್ಲಿ ಎರಡು ಸಿನಿಮಾ!

ಸಾರಾಂಶ

ಕಿರುತೆರೆಯಿಂದ ಹಿರಿತೆರೆಯತ್ತ ಜನಪ್ರಿಯ ಧಾರಾವಾಹಿಗಳ ನಟಿ ಗಗನ ಕುಂಚಿ  ಸುಗಮ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಎರಡು ಹೊಸ ಚಿತ್ರಗಳಲ್ಲಿ ನಟನೆ. 

ಕನ್ನಡ ಕಿರುತೆರೆಯಲ್ಲಿ ತನ್ನದೇ ಛಾಪು ಮೂಡಿಸಿರುವ ‘ದೊಡ್ಮನೆ ಸೊಸೆ’, ‘ಗಟ್ಟಿಮೇಳ’ ಮುಂತಾದ ಧಾರಾವಾಹಿಗಳ ಖ್ಯಾತಿಯ ನಟಿ ಗಗನ ಕುಂಚಿ, ಈಗ ಹಿರಿತೆರೆಗೆ ಕಾಲಿಡುವುದಕ್ಕೆ ಸಜ್ಜಾಗಿದ್ದಾರೆ. ಎರಡು ಚಿತ್ರಗಳಲ್ಲಿ ಗಗನ ಕುಂಚಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.  ಆ ಎರಡೂ ಚಿತ್ರಗಳು ಸದ್ಯದಲ್ಲೇ ಆರಂಭವಾಗಲಿದೆ. 

 ಗಗನ ಕುಂಚಿ ನಾಯಕಿಯಾಗಿ ನಟಿಸುತ್ತಿರುವ ಎರಡು ಚಿತ್ರಗಳು ಸುಗಮ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತದೆ. ಪ್ರೊಡಕ್ಷನ್ ನಂ ೧ ಚಿತ್ರವನ್ನು ಗುರುಕುಮಾರ್ ಪಿ ನಿರ್ದೇಶಿಸುತ್ತಿದ್ದಾರೆ. ತೆಲುಗಿನ "ವಾಲ್ಟೇರ್ ವೀರಯ್ಯ" ಹಾಗೂ "ವೆಂಕಿಮಾಮ" ಚಿತ್ರಗಳಿಗೆ ಸಹ ನಿರ್ದೇಶಕರಾಗಿ ಗುರುಕುಮಾರ್ ಕಾರ್ಯ ನಿರ್ವಹಿಸಿದ್ದಾರೆ. ಎರಡನೇ ಚಿತ್ರವನ್ನು ("ಪ್ರೊಡಕ್ಷನ್ ನಂ ೨" ) ವಿಜಯ್ ಆರ್ ನಿರ್ದೇಶಿಸುತ್ತಿದ್ದಾರೆ. "ಕಥಾರ್ ಭಾಷಾ ಎಂದ್ರಾ ಮುತ್ತುರಾಮಲಿಂಗಂ", "ಮಾವೀರನ್", " ವಿರುಮನ್", "ಆಕ್ಷನ್", " ಜೈ ಭೀಮ್" ಮುಂತಾದ ಚಿತ್ರಗಳಿಗೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಗುರುಕುಮಾರ್ ಹಾಗೂ ವಿಜಯ್ ಇಬ್ಬರಿಗೂ ಇದು ಮೊದಲ ನಿರ್ದೇಶನದ ಚಿತ್ರವಾಗಿದ್ದು, ಎರಡು ಚಿತ್ರಗಳೂ ಎರಡು ಭಾಗಗಳಲ್ಲಿ ಬರುತ್ತಿರುವುದು ವಿಶೇಷ.

ಕಿರುತೆರೆಯಿಂದ ಹಿರಿತೆರೆಗೆ ಬಂದ 'ದೊಡ್ಮನೆ ಸೊಸೆ' ಗಗನ ಕುಂಚಿ!

ಗಗನ ಕುಂಚಿ ಬಾಲನಟಿಯಾಗಿ ಅಭಿನಯಿಸುವ ಮೂಲಕ ಅಭಿನಯ ಕ್ಷೇತ್ರಕ್ಕೆ ಕಾಲಿಟ್ಟವರು. 2009ರಲ್ಲಿ ಉದಯ ಟಿವಿಯಲ್ಲಿ ಪ್ರಸಾರವಾದ ‘ಕಾಲಚಕ್ರ’ ಧಾರಾವಾಹಿಯಲ್ಲಿ ನಟಿಸಿದ ಅವರು, ಅದರ ಮರುವರ್ಷವೇ ರಮೇಶ್‍ ಅರವಿಂದ್‍ ಅಭಿನಯದ ‘ಹೆಂಡ್ತೀರ ದರ್ಬಾರ್" ಚಿತ್ರದಲ್ಲಿ ನಟಿಸಿದರು. ನಂತರ ಸುಮಾರು ಆರು ವರ್ಷಗಳ ಕಾಲ ಚಿಂಟು ಟಿವಿಯಲ್ಲಿ ನಿರೂಪಕಿಯಾಗಿ ಕೆಲಸ ಮಾಡಿದ ಗಗನ, 2017ರಲ್ಲಿ ಉದಯ ಟಿವಿಯಲ್ಲಿ ಪ್ರಸಾರವಾದ ‘ದೊಡ್ಮನೆ ಸೊಸೆ’ ಧಾರಾವಾಹಿಯ ನಾಯಕಿಯಾದರು. ಆ ನಂತರ ತಮಿಳಿನ ‘ಸುಬ್ರಹ್ಮಣ್ಯಪುರಂ’, ಕನ್ನಡದ ‘ಮಹಾದೇವಿ’, ‘ಗಟ್ಟಿಮೇಳ’ ಧಾರಾವಾಹಿಗಳಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುವುದರ ಜೊತೆಗೆ, ಜೀ ಕನ್ನಡದಲ್ಲಿ ಪ್ರಸಾರವಾದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಫ್ಯಾಮಿಲಿ ವಾರ್’ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದಾರೆ.ಇದಲ್ಲದೆ, ಮಾಡಲಿಂಗ್‍ನಲ್ಲೂ ಗುರುತಿಸಿಕೊಂಡಿರುವ ಗಗನ, ‘ಮಿಸ್‍ ಕರ್ನಾಟಕ ಇಂಟರ್ ನ್ಯಾಷನಲ್‍’ ಸ್ಪರ್ಧೆಯ ಮೊದಲ ರನ್ನರ್ ಅಪ್‍ ಆಗಿ ಗೆದ್ದಿದ್ದಾರೆ. ಜೊತೆಗೆ ಕಾಲೇಜಿನಲ್ಲಿ ಓದುವಾಗ ‘ಬೆಂಗಳೂರು ಟೈಮ್ಸ್ ಫ್ರೆಶ್‍ ಫೇಸ್‍’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Baanadariyalli Review: ಪ್ರೇಮ, ವಿರಹ ಮತ್ತು ಸಂಗಮ

ಇಷ್ಟೆಲ್ಲ ಅನುಭವದೊಂದಿಗೆ ಅವರು ಇದೀಗ ಸಿನಿಮಾದಲ್ಲಿ ನಾಯಕಿಯಾಗುವ ತಯಾರಿ ನಡೆಸಿದ್ದಾರೆ. ತಮ್ಮ ಹಿರಿತೆರೆ ಎಂಟ್ರಿಯ ಬಗ್ಗೆ ಮಾತನಾಡುವ ಗಗನ ಕುಂಚಿ, ‘ಈ ಹಿಂದೆಯೂ ಕೆಲವು ಅವಕಾಶಗಳು ಬಂದಿದ್ದವು. ಆದರೆ, ಕಥೆ ಮತ್ತು ಪಾತ್ರ ಇಷ್ಟವಾಗದ ಕಾರಣ, ಯಾವೊಂದು ಚಿತ್ರವನ್ನು ಒಪ್ಪಿರಲಿಲ್ಲ. ಈಗ ಒಪ್ಪಿರುವ ಕಥೆಗಳಲ್ಲಿ ನನ್ನ ಪಾತ್ರಕ್ಕೆ ಸಾಕಷ್ಟು ಸ್ಕೋಪ್‍ ಇದೆ. ಒಬ್ಬ ನಟಿಯಾಗಿ ಎಲ್ಲ ತರಹದ ಪಾತ್ರಗಳನ್ನು ಮಾಡಬೇಕೆಂಬುದು ನನ್ನ ಇಷ್ಟ. ಈ ಚಿತ್ರಗಳಲ್ಲಿ ನನ್ನ ಪ್ರತಿಭೆ ತೋರಿಸುವುದಕ್ಕೆ ಸಾಕಷ್ಟು ಅವಕಾಶಗಳಿವೆ. ಈ ಚಿತ್ರಗಳ ಮೂಲಕ ನಾಯಕಿಯಾಗಬೇಕೆಂಬ ಬಹಳ ವರ್ಷಗಳ ಕನಸು ನನಸಾಗಿದೆ’ ಎನ್ನುತ್ತಾರೆ. ಧಾರಾವಾಹಿಗಳಲ್ಲಿ ತಮ್ಮ ಅಭಿನಯವನ್ನು ಇಷ್ಟಪಟ್ಟು ಪ್ರೋತ್ಸಾಹಿಸಿದ ಜನ, ಈ ಬಾರಿಯೂ ಆಶೀರ್ವದಿಸುತ್ತಾರೆ ಎಂಬ ನಂಬಿಕೆ ಇದೆ ಎನ್ನುವ ಗಗನ, ‘ನನ್ನ ಕಿರುತೆರೆಯ ಪಾತ್ರಗಳನ್ನು ನೋಡಿ ಜನ ಬಹಳಷ್ಟು ಪ್ರೋತ್ಸಾಹಿಸಿದ್ದರು. ನನ್ನ ಅಭಿನಯವನ್ನು ಮೆಚ್ಚಿ ಇನ್‍ಸ್ಟಾಗ್ರಾಂನಲ್ಲಿ ಮೆಸೇಜ್‍ ಮಾಡುತ್ತಿದ್ದರು.  ಅವರ ಪ್ರೀತಿ ನೋಡಿ ಖುಷಿಯಾಗುತ್ತದೆ. ನನ್ನ ಹಿರಿತೆರೆಯ ಪ್ರಯಾಣಕ್ಕೂ ಅವರೆಲ್ಲರ ಬೆಂಬಲ ಮತ್ತು ಆಶೀರ್ವಾದ ಇರುತ್ತದೆ ಎಂಬ ನಂಬಿಕೆ ಇದೆ’ ಎನ್ನುತ್ತಾರೆ ಗಗನ ಕುಂಚಿ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

BBK 12: ಮದುವೆ ಮನೆಯಿಂದ ಗಿಲ್ಲಿ ನಟನನ್ನು ಆಚೆ ಹಾಕಿ, ರಸ್ತೆಗೆ ನೂಕಿದ್ರು: ಗೊತ್ತಿಲ್ಲದ ವಿಷಯ ಬಿಚ್ಚಿಟ್ಟ ತಾಯಿ
BBK 12: ಕಿಚ್ಚ ಸುದೀಪ್‌ ಇದ್ರೂ ಕ್ಯಾರೆ ಎನ್ನಲಿಲ್ಲ. ಅಸಭ್ಯ ಎಂದು ಕಿತ್ತಾಡ್ಕೊಂಡ ರಜತ್‌, ಧ್ರುವಂತ್!