ಮುಂಬರುವ ವಿಧಾನಸಭಾ ಚುನಾವಣೆಗೆ ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ನಿಶ್ಚಯವಾಗಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುತ್ತದೆ ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿ (ಮಾ.30) : ಮುಂಬರುವ ವಿಧಾನಸಭಾ ಚುನಾವಣೆಗೆ ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ನಿಶ್ಚಯವಾಗಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುತ್ತದೆ ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಪೂರ್ವ ಸಮೀಕ್ಷೆಗಳು ಕೇವಲ ಒಂದು ಸಮೀಕ್ಷೆ ಮಾತ್ರ. ಸಮೀಕ್ಷೆಯನ್ನು ಮೀರಿ ಬಿಜೆಪಿಗೆ ಸ್ಪಷ್ಟವಾದ ಜನಾದೇಶ ಬರಲಿದೆ. ದೇವರಾಜ ಅರಸು ನಂತರ ಬಿಜೆಪಿ ಮೀಸಲಾತಿಯ ಜೇನುಗೂಡಿಗೆ ಕೈ ಹಾಕಿದೆ. ಈ ಬಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗಗಳು ಬಿಜೆಪಿ ಪರ ನಿಲ್ಲಲಿವೆ ಎಂದರು.
undefined
ಸವಲತ್ತುಗಳಿಂದ ಆರ್ಥಿಕವಾಗಿ ಸಬಲರಾಗಬೇಕು : ಸಚಿವ ಎಸ್ ಅಂಗಾರ
ಎಲ್ಲಾ ಸಮುದಾಯಕ್ಕೆ ಸಿಹಿ ಹಂಚಿದ್ದು ಯಡಿಯೂರಪ್ಪ- ಬೊಮ್ಮಾಯಿ(BS Yadiyurappa-Basavaraj bommai) ಸರ್ಕಾರ. ಶೇಕಡ 17 ಮೀಸಲಾತಿಯನ್ನು ನೀಡಿ ಹಿಂದುಳಿದ ವರ್ಗಕ್ಕೆ ಶಕ್ತಿ ನೀಡಿದ್ದೇವೆ. ಅಲ್ಲದೆ ಯಡಿಯೂರಪ್ಪ ಬೊಮ್ಮಾಯಿ ಅವರ ಅಧಿಕಾರಾವಧಿಯಲ್ಲಿ 20 ನಿಗಮ ಸ್ಥಾಪಿಸಿದ್ದೇವೆ ಎಂದರು.
ಅಲ್ಪಸಂಖ್ಯಾತರ ಮೀಸಲಾತಿಯನ್ನು ತೆಗೆಯಲಾಗಿದೆ ಎಂದು ಅಪಪ್ರಚಾರ ಮಾಡಲಾಗಿದೆ. ಆದರೆ ಅಲ್ಪಸಂಖ್ಯಾತರ ಮೀಸಲಾತಿಯನ್ನು ತೆಗೆದಿಲ್ಲ ಎಂದ ಸಚಿವರು, ಧರ್ಮದ ಆಧಾರದಲ್ಲಿ ಮೀಸಲಾತಿ ಸ್ಪಷ್ಟವಾಗಿ ಇರಲಿಲ್ಲ. ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ ಮುಂದಿನ ದಿನಗಳಲ್ಲಿ ಹೆಚ್ಚು ನ್ಯಾಯ ಸಿಗಲಿದೆ ಎಂದರು. ಇದೇ ವೇಳೆ ಬಂಟ ಸಮುದಾಯ(Banta community)ದಿಂದ ನಿಗಮ ಕುರಿತ ಪ್ರಸ್ತಾಪಿಸಿ, ಬಂಟರು ಬಿಜೆಪಿ ಮತ್ತು ರಾಷ್ಟ್ರೀಯತೆಯನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಅವರ ಭಾವನೆ ಗೌರವಿಸೋದು ನಮ್ಮ ಧರ್ಮ ಬೇಡಿಕೆಯನ್ನು ಪರಿಶೀಲನೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಉರಿ ಗೌಡ ನಂಜೇಗೌಡ ಟಿಪ್ಪುವನ್ನು ಕೊಂದಿದ್ದಾರೆಂಬ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಒಕ್ಕಲಿಗ ಸಮುದಾಯ(Vokkaliga community)ದ ಪರಮ ಪೂಜ್ಯ ಶ್ರೀಗಳು ಎಲ್ಲರನ್ನು ಕರೆದು ಮಾತುಕತೆ ಮಾಡಿದ್ದಾರೆ. ಸಿನಿಮಾ ಮಾಡಬಾರದು ಎಂದು ಸ್ವಾಮೀಜಿ ಹೇಳಿದ್ದಾರೆ. ಸ್ವಾಮೀಜಿಯವರ ಅಂತಿಮ ತೀರ್ಮಾನವನ್ನು ನಾವು ಒಪ್ಪಿಕೊಂಡಿದ್ದೇವೆ ಎಂದರು.
ಇನ್ನು ಬಿಜೆಪಿ ಟಿಕೆಟ್ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಪ್ರಸ್ತುತ ಶಾಸಕರನ್ನು ಮತ್ತು ಆಕಾಂಕ್ಷಿಗಳನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡುತ್ತೇವೆ. ಕೇಂದ್ರದ ನಾಯಕರಿಂದ ಹಲವು ಸಮೀಕ್ಷೆಗಳು ನಡೆದಿವೆ. ಪ್ರತಿ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ನಡೆಯಲಿದೆ. ನಾಳೆ ಮತ್ತು ನಾಡಿದ್ದು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಪಕ್ಷ ಶೀಘ್ರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.
ಆರೆಸ್ಸೆಸ್ ಎಂದೂ ರಾಜಕೀಯ ಮಾಡಿಲ್ಲ:
ಆರೆಸ್ಸೆಸ್ ರಾಜಕೀಯ ಮಾಡುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಆರೆಸ್ಸೆಸ್ ಎಂದೂ ಕೂಡ ಸಕ್ರಿಯವಾಗಿ ರಾಜಕೀಯ ಮಾಡಿಲ್ಲ. ಆದರೆ ಸಲಹೆ ಸೂಚನೆಗಳನ್ನು ಕೊಡುತ್ತದೆ ಅದು ತಪ್ಪಲ್ಲ. ಪಕ್ಷ ಎಲ್ಲ ಅಭಿಪ್ರಾಯಗಳನ್ನು ಪಡೆದುಕೊಂಡು ಟಿಕೆಟ್ ನೀಡುತ್ತದೆ. ಟಿಕೆಟ್ ಹಂಚಿಕೆ ವೇಳೆ, ಪಕ್ಷದಲ್ಲಿ ಚರ್ಚೆ ಭಿನ್ನಾಭಿಪ್ರಾಯ ಗುಡುಗು ಸಿಡಿಲು ಸಾಮಾನ್ಯ ಎಂದರು.
ನಂದಿನಿ ಪಾಕೆಟ್ ಮೇಲೆ ಹಿಂದಿ ಹೇರಿಕೆ:
ನಂದಿನಿ ಪಾಕೆಟ್ ಮೇಲೆ ದಹೀ ಎಂದು ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ನಂದಿನಿ ಮೊಸರು ಪಾಕೆಟ್ ಮೇಲೆ ದಹೀ ಬರೆದಿರುವುದು ಸ್ಥಳೀಯ ಭಾಷೆಗೆ ಪ್ರಾಧಾನ್ಯತೆ ಕೊಡಬೇಕು ಎಂಬುದು ಪ್ರಧಾನಿಗಳ ಕೇಂದ್ರ ಸರ್ಕಾರದ ಸ್ಪಷ್ಟ ನಿಲುವು. ಆಯಾ ರಾಜ್ಯದ ಪ್ರಾದೇಶಿಕ ಭಾಷೆಗೆ ಪ್ರಾಧಾನ್ಯತೆ ಕೊಡುತ್ತೇವೆ ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದರು.
ಅಪ್ಪಟ ಹಿಂದು ಎನ್ನುವ ಸಿದ್ದರಾಮಯ್ಯ, ಗೋಹತ್ಯೆ ನಿಷೇಧ ಕಾಯ್ದೆ ತಂದಾಗ ಆರ್ಭಟಿಸಿದ್ದೇಕೆ: ಕೋಟ
ಬಜರಂಗದಳದ ಪ್ರಮೋದ್ ಮುತಾಲಿಕ್ ಚುನಾವಣೆಗೆ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಚುನಾವಣೆಗೆ ಯಾವುದೇ ವ್ಯಕ್ತಿ, ಸಂಘಟನೆ ಸ್ಪರ್ಧಿಸಬಹುದು. ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ ಮಾಡಿದರೆ ಅದನ್ನು ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ.
ಪ್ರಮೋದ್ ಮುತಾಲಿಕ್(Pramod Mutalik) ಅವರ ಮೇಲೆ ನಮಗೆ ಗೌರವ ಇದೆ. ಕಾರ್ಕಳದಲ್ಲಿ ಬಿಜೆಪಿ ಪಕ್ಷ ಬಲಿಷ್ಠವಾಗಿ ಚುನಾವಣೆಯಲ್ಲಿ ಬಿಜೆಪಿಯೇ ಗೆಲ್ಲುತ್ತದೆ ಈ ಬಗ್ಗೆ ಯಾವುದೇ ಅನುಮಾನ ಇಲ್ಲ ಎಂದರು.