ಉಡುಪಿ ಶಾಸಕ ರಘುಪತಿ ಭಟ್ ಅವರು ತಮ್ಮ ಕ್ಷೇತ್ರದ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಹಿರಿಯ ನಾಗರಿಕರ ಆರೋಗ್ಯವನ್ನು ದೃಷಷ್ಟಿಯಲ್ಲಿಟ್ಟುಕೊಂಡು ರೂಪಿಸಲಾದ ಯೋಜನೆ ಏನು, ಯಾವಾಗ ಆರಂಭ ಎಂಬಿತ್ಯಾದಿ ವಿಚಾರ ತಿಳಿಯಲು ಈ ಸುದ್ದಿ ಓದಿ.
ಉಡುಪಿ(ಅ.24): ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ ಅಜ್ಜರಕಾಡುನಲ್ಲಿರುವ ಹಿರಿಯ ನಾಗರಿಕರ ಸಂಸ್ಥೆಯ ಪರಿಸರವನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಮಂಗಳವಾರ ಪುರಭವನದಲ್ಲಿ ಉಡುಪಿ ಹಿರಿಯ ನಾಗರಿಕರ ಸಂಸ್ಥೆ, ಬ್ಯಾಂಕ್ ಆಫ್ ಬರೋಡ ಉಡುಪಿ ಪ್ರಾದೇಶಿಕ ಕಚೇರಿ ಸಹಭಾಗಿತ್ವದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ 80 ವರ್ಷ ಪೂರೈಸಿದ ಸದಸ್ಯರಿಗೆ ಸನ್ಮಾನಿಸಿ ಮಾತನಾಡಿದ್ದಾರೆ.
ಎಲ್ಲೆಲ್ಲಿ ಸುತ್ತಿದ್ರೂ ಮಲಗೋದಕ್ಕೆ ಮಾತ್ರ ಕಾಳಿಂಗಕ್ಕೆ ತನ್ನ ಮನೆಯೇ ಬೇಕು..!
ಹಿರಿಯ ನಾಗರಿಕ ಕಚೇರಿಯ ಪಕ್ಕದಲ್ಲೇ ವಾಯುವಿಹಾರಕ್ಕೆ ಭುಜಂಗ ಪಾರ್ಕ್ ಇದೆ. ಹಿರಿಯ ನಾಗರಿಕರಿಗೆ ಆರೋಗ್ಯವನ್ನು ಕಾಪಾಡುವುದಕ್ಕಾಗಿ ಅವರಿಗೆ ಭುಜಂಗ ಪಾರ್ಕ್ನಲ್ಲಿ 60-70 ಲಕ್ಷ ರು. ವೆಚ್ಚದಲ್ಲಿ ಔಟ್ಡೋರ್ ಜಿಮ್ ನಿರ್ಮಾಣ ಮಾಡಲಾಗುತ್ತದೆ. ಅದರಲ್ಲಿ ಹಿರಿಯ ನಾಗರಿಕರು ಮಾಡಲು ಸಾಧ್ಯವಾಗುವಂತಹ ವ್ಯಾಯಾಮಗಳನ್ನೇ ಆದ್ಯತೆಯಲ್ಲಿ ಇಡಲಾಗುವುದು ಎಂದು ತಿಳಿಸಿದ್ದಾರೆ.
ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬೀ. ಬಲ್ಲಾಳ್ ಅಧ್ಯಕ್ಷತೆ ವಹಿಸಿ, ಹಿರಿಯ ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಒಗ್ಗಟ್ಟಿನಿಂದ ಸಂಸ್ಥೆಯ ಜೊತೆಯಲ್ಲಿದ್ದುಕೊಂಡು ತಮ್ಮ ಅನುಕೂಲಕ್ಕೆ ಅಗತ್ಯವಿರುವ ವ್ಯವಸ್ಥೆ ಆಗುವಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.
ಕಂಬಳದ ವಿರುದ್ಧ ಮತ್ತೆ ಧ್ವನಿ ಎತ್ತಿದ ಪೆಟಾ..
ಬ್ಯಾಂಕ್ ಆಫ್ ಬರೋಡದ ಪ್ರಾದೇಶಿಕ ಪ್ರಬಂಧಕ ರವೀಂದ್ರ ರೈ ಮುಖ್ಯ ಅತಿಥಿಗಳಾಗಿದ್ದರು. ಸಂಸ್ಥೆ ಅಧ್ಯಕ್ಷ ಸಿ.ಎಸ್. ರಾವ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಎಚ್. ವಿಶ್ವನಾಥ ಹೆಗ್ಡೆ ವಂದಿಸಿದರು. ಜೊತೆ ಕಾರ್ಯದರ್ಶಿ ಸದಾನಂದ ಆರ್. ಶೆಟ್ಟಿಕಾರ್ಯಕ್ರಮ ನಿರೂಪಿಸಿದರು.