ಕರಾವಳಿ ಸೇರಿ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, 27ರ ತನಕ ಉಡುಪಿ ಹಾಗೂ ಮಂಗಳೂರಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಗಳನ್ನು ನೀಡಿರುತ್ತದೆ. ಅವುಗಳೇನೇನು ಎಂಬ ಮಾಹಿತಿ ಇಲ್ಲಿದೆ.
ಉಡುಪಿ(ಅ.22): ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಅ.24 ರಿಂದ 27ರವರೆಗೆ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಎಲ್ಲೆಲ್ಲಿ ಸುತ್ತಿದ್ರೂ ಮಲಗೋದಕ್ಕೆ ಮಾತ್ರ ಕಾಳಿಂಗಕ್ಕೆ ತನ್ನ ಮನೆಯೇ ಬೇಕು..!
ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಗಳನ್ನು ನೀಡಿರುತ್ತದೆ. ಆದ್ದರಿಂದ ಸಾರ್ವಜನಿಕರು / ಮೀನುಗಾರರು / ನದಿ ತೀರ / ಸಮುದ್ರಕ್ಕೆ ಇಳಿಯಬಾರದು. ಜಿಲ್ಲಾ / ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು. ತಗ್ಗು ಪ್ರದೇಶ / ಕೆರೆ / ನದಿ ತೀರ / ಸಮುದ್ರ ತೀರ ಪ್ರದೇಶಗಳಿಗೆ ಮಕ್ಕಳು ಹೋಗದಂತೆ ಪಾಲಕರು ಜಾಗರೂಕತೆ ವಹಿಸಬೇಕು ಎಂದು ಸೂಚಿಸಲಾಗಿದೆ.
ತುರ್ತು ಕರೆಗೆ ಟೋಲ್ ಫ್ರೀ:
ಯಾವುದೇ ತುರ್ತು ಸೇವೆಗೆ ನಂಬರ್ 1077 ಅಥವಾ ದೂರವಾಣಿ ಸಂಖ್ಯೆ 0820-2574802 / 2574360 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಅಲ್ಪ ಮಳೆ:
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸೋಮವಾರ ಸಂಜೆ ವೇಳೆಗೆ ಅಲ್ಪ ಮಳೆ ಸುರಿದಿದೆ. ಬೆಳಗ್ಗಿನಿಂದ ಸಂಜೆವರೆಗೆ ಮಳೆಯಾಗದಿದ್ದರೂ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿತ್ತು.
ಮುಗಿದಿಲ್ಲ ಮಳೆ ಅಬ್ಬರ: ಅ. 25ರವರೆಗೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್