ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಬಿಡುಗಡೆಗೆ ಹೆಚ್ಚಿನ ಮಹತ್ವ ಕೊಡಬೇಕಾಗಿಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಡಿಕೆಶಿ ಬಿಡುಗಡೆ ಸಂಬಂಧ ಟಾಂಗ್ ನೀಡಿದ್ದಾರೆ.
ಉಡುಪಿ(ಅ.25): ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಬಿಡುಗಡೆಗೆ ಹೆಚ್ಚಿನ ಮಹತ್ವ ಕೊಡಬೇಕಾಗಿಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಡಿಕೆಶಿ ಬಿಡುಗಡೆ ಸಂಬಂಧ ಟಾಂಗ್ ನೀಡಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಡಿ. ಕೆ. ಶಿವಕುಮಾರ್ ಅವರು ಇರೋ ಸರಕಾರ ಉಳಿಸಿಕೊಂಡಿಲ್ಲ. ಇಲಿ ಬಂದ್ರೆ ಹುಲಿ ಬಂತು ಅನ್ನಲಾಗುತ್ತಿದೆ. ಅವರ ಬಿಡುಗಡೆಗೆ ಹೆಚ್ಚಿನ ಮಹತ್ವ ಕೊಡಬೇಕಾಗಿಲ್ಲ ಎಂದಿದ್ದಾರೆ.
undefined
ಎಲ್ಲೂ ಸಲ್ಲದವರು ಈಗ ಉಪಚುನಾವಣೆಯಲ್ಲಿ ಸಲ್ಲುತ್ತಾರಾ? ಸಮಾಜಕ್ಕೆ ಭ್ರಷ್ಟಾಚಾರ ರಹಿತ ಆಡಳಿತ ಬೇಕು. ಭ್ರಷ್ಟಾಚಾರ ಪೂರಕ ಸಮಾಜ ಕಟ್ಟೋದಕ್ಕೆ ಅಸಾಧ್ಯ. ಜಾತಿಯ ಹಿನ್ನೆಲೆಯಲ್ಲಿ ರಕ್ಷಣೆ ಪಡೆಯುವುದು ಸರಿಯಲ್ಲ ಎಂದು ಡಿಕೆಶಿಗೆ ವ್ಯಂಗ್ಯ ಮಾಡಿದ್ದಾರೆ.
15 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಇದೆ:
ಕರ್ನಾಟಕದ ಉಪಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಸಂಪೂರ್ಣ ಅಸ್ಥಿತ್ವ ಕಳೆದುಕೊಂಡಿದೆ. ಒಳಜಗಳ, ಸಮಾಜ ಒಡೆಯುವ ಕಾರ್ಯಕ್ಕೆ ಜನ ಬೇಸತ್ತಿದ್ದಾರೆ. ಬಲಿಷ್ಠ ವಿಪಕ್ಷವಾಗಿ ಕೆಲಸ ಮಾಡುತ್ತಿಲ್ಲ. ಸುಧಾರಣೆಗೆ ಒಂದೆರಡು ವರ್ಷ ಬೇಕಾಗುತ್ತದೆ. ರಾಜ್ಯ ಬಿಜೆಪಿ ಆ ಹಾದಿಯಲ್ಲಿದೆ ಎಂದಿದ್ಧಾರೆ.